Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಅದ್ಧೂರಿ ಶೋಭಾಯಾತ್ರೆ 

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪ್ರತಿ ವರ್ಷದಂತೆ ಗೊಲ್ಲ ಸಮುದಾಯದ ನೇತೃತ್ವದಲ್ಲಿ ನಡೆಯುವ ಬೃಹತ್ ಅದ್ಧೂರಿ ಶೋಭಾಯಾತ್ರೆ  ಸಾವಿರಾರು ಜನಸ್ತೋಮದ ಸಮ್ಮುಖದಲ್ಲಿನೆರವೇರಿತು.

ನಗರದ ವೇದಾವತಿ ಬಡಾವಣೆಯ ಎ.ಕೃಷ್ಣಪ್ಪ ಸರ್ಕಲ್ ಸಮೀಪದಲ್ಲಿರುವ ಶ್ರೀಕೃಷ್ಣ ದೇವಸ್ಥಾನ ಮುಂಭಾಗದಲ್ಲಿ ನಾನಾ ಹೂವುಗಳಿಂದ ಅಲಂಕರಿಸಿದ ಬೆಳ್ಳಿ ರಥದಲ್ಲಿ ಕೂರಿಸಿದ ಶ್ರೀಕೃಷ್ಣ ಪ್ರತಿಮೆ ಜತೆಗೆ ಶ್ರೀವಿನಾಯಕ ಹಾಗೂ ಶ್ರೀಆಂಜನೇಯ ಮೂರ್ತಿಯ ಪ್ರತಿಮೆಗಳಿಗೆ ವನಕಲ್ಲು ಮಠದ ಡಾ.ಶ್ರೀ ಬಸವರಾಮಾನಂದ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ, ಎಂಎಲ್ಸಿಡಿ.ಟಿ ಶ್ರೀನಿವಾಸ್, ಮಾಜಿ ಶಾಸಕಿ ಕೆ.ಪೂರ್ಣಿಮಾ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅದ್ದೂರಿ ಶೋಭಾಯಾತ್ರೆಗೆ ಚಾಲನೆ ನೀಡಿದರು.

Advertisement

ಮೆರವಣಿಗೆಯುದ್ದಕ್ಕೂ ರಸ್ತೆ ಇಕ್ಕೆಲಗಳಲ್ಲಿ ವಿವಿಧ ಸಮುದಾಯದ ಜನರು ಕಿಕ್ಕಿರಿದು ನೆರೆದು ಮೆರವಣಿಗೆ ಕಣ್ಣುಂಬಿಕೊಂಡರು. ಗೊಂಬೆಯಾಟ, ಉರುಮೆ ವಾದ್ಯ, ತಮಟೆ ವಾದ್ಯ, ವೀರಗಾಸೆ, ಚಂಡಿಮದ್ದಾಳೆ, ಡೊಳ್ಳು ಕುಣಿತ ಮುಂತಾದ ಹಲವು ಕಲಾತಂಡಗಳ ಜತೆಗೆ ಯುವಕರು ನರ್ತಿಸಿದರು.

ಅಲ್ಲದೇ ಡಿಜೆ ಸೌಂಡ್ ಗೆ ಸಾವಿರಾರು ಯುವಕರು ಮೈಮರೆತು ಕುಣಿದು ಕುಪ್ಪಳಿಸಿದರು.

ಶ್ರೀಕೃಷ್ಣ ದೇವಸ್ಥಾನದಿಂದ ಹೊರಟ ಬೃಹತ್ ಯಾತ್ರೆ ವೇದಾವತಿ ನಗರದ ನೂರು ಅಡಿ ರಸ್ತೆ, ಚಳ್ಳಕೆರೆ ರಸ್ತೆ, ಅಂಬೇಡ್ಕರ್‌ವೃತ್ತ, ತಾಲೂಕು ಕಚೇರಿ ಮೂಲಕ ನಗರ ಪ್ರವೇಶಿಸಿತು. ಅಲ್ಲಿಂದ ಗಾಂಧಿ ಸರ್ಕಲ್, ಆಸ್ಪತ್ರೆ ವೃತ್ತ, ಮುಖ್ಯ ರಸ್ತೆ ಮೂಲಕ ಅದೇ ಮಾರ್ಗದಲ್ಲಿ ಶ್ರೀಕೃಷ್ಣ ದೇವಸ್ಥಾನ ತಲುಪುವ ಮೂಲಕ ಬೃಹತ್ ಮೆರವಣಿಗೆಗೆ ತೆರೆ ಎಳೆಯಲಾಯಿತು.

ಈ ಸಂದರ್ಭದಲ್ಲಿ ಮಾಜಿ ನಗರಸಭೆ ಅಧ್ಯಕ್ಷೆ ಶಿವರಂಜಿನಿ ಮಾತನಾಡಿ, 'ನಮ್ಮ ಆರಾಧ್ಯ ದೈವ ಶ್ರೀಕೃಷ್ಣ ಪರಮಾತ್ಮನಿಗೆ ಆದ ಅನ್ಯಾಯಕ್ಕೆ ಇಡೀ ಸಮಾಜ ಆಕ್ರೋಶ ವ್ಯಕ್ತಪಡಿಸುತ್ತದೆ. ಹಿರಿಯೂರಿನಲ್ಲಿ ನಮ್ಮ ಕಾಡುಗೊಲ್ಲ ಸಮಾಜದಿಂದ 15 ರಿಂದ 20 ಸಾವಿರಕ್ಕೂ ಹೆಚ್ಚು ಭಕ್ತರು ಸೇರಿ ನಡೆಯುವ ಸಾಂಪ್ರದಾಯಿಕ ಉತ್ಸವದ ಮೆರವಣಿಗೆಗೆ ಡಿಜೆ ಸೇರಿದಂತೆ ಯಾವುದೇ ಸೂಕ್ತ ವ್ಯವಸ್ಥೆ ಸಿಗದೇ ಇರುವುದು ಅತ್ಯಂತ ಬೇಸರದ ಸಂಗತಿ ' ಎಂದರು.

 “ಶ್ರೀಕೃಷ್ಣ ಪರಮಾತ್ಮ ಒಂದು ಜಾತಿಗೆ ಸೀಮಿತವಾಗಿಲ್ಲ”
ಭಗವದ್ಗೀತೆ ಮೂಲಕ ಇಡೀ ವಿಶ್ವಕ್ಕೆ ಸಂದೇಶ ನೀಡಿದ ಜಗದ್ಗುರು. ಪ್ರೀತಿ ವಿಶ್ವಾಸದಿಂದ ಎಲ್ಲರೊಂದಿಗೆ ಬೆರೆಯುವ ಗುಣ, ವ್ಯಕ್ತಿತ್ವ ಅವರದ್ದು. ಆ ದೇವರ ಕೃಪೆಯಿಂದ ಈ ನಾಡಿನಲ್ಲಿ ಉತ್ತಮ ಮಳೆ, ಬೆಳೆಯಾಗಲಿ, ರೈತರ ಬದುಕು ಹಸನಾಗಲಿ. ಕೆ.ಪೂರ್ಣಿಮಾ ಮಾಜಿ ಶಾಸಕಿ.

ಡಿಜೆಗೆ ಅನುಮತಿ ಆಗ್ರಹಿಸಿ ಹೆದ್ದಾರಿ ತಡೆ
ಪ್ರತಿ ವರ್ಷ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯುತ್ತಿರುವ ಅದ್ದೂರಿ ಶೋಭಾಯಾತ್ರೆಗೆ ಡಿಜೆಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ನಗರದ ಎಪಿಎಂಸಿ ಮುಂಭಾಗದಲ್ಲಿ ಯುವಕರ ತಂಡವು ರಾಷ್ಟ್ರೀಯ ಹೆದ್ದಾರಿ ತಡೆ ಹಿಡಿದರು. ಇದರಿಂದ ಸುಮಾರು 15 ನಿಮಿಷಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತು. ತಕ್ಷಣವೇ ಪೊಲೀಸರು ಬಂದು ರಸ್ತೆ ತಡೆ ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವರ ಕಾರಿಗೂ ಅಡ್ಡಗಟ್ಟಿ ತಡೆದು ಅನುಮತಿಗೆ ಒತ್ತಾಯಿಸಿದರು. ಕೊನೆಗೆ ನಾಲ್ಕು ಬಾಕ್ಸ್‌ಗಳುಳ್ಳ ಡಿಜೆಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಅದ್ಧೂರಿ ಮೆರವಣಿಗೆಗೆ ಚಾಲನೆ ಸಿಕ್ಕಿತು. ಪ್ರತಿವರ್ಷ ಮಧ್ಯಾಹ್ನ 12 ಗಂಟೆಗೆ ಆರಂಭಗೊಳ್ಳುತ್ತಿದ್ದ ಶೋಭಯಾತ್ರೆ ಸುಮಾರು 2 ಗಂಟೆಯ ನಂತರ ಆರಂಭವಾಯಿತು.

news_1789303596_5_384.webp

 


ಕಾಡುಗೊಲ್ಲ ಸಂಘದ ರಾಜ್ಯಾಧ್ಯಕ್ಷ ರಾಜಣ್ಣ, ವಿಜೆಎನ್ ಎಲ್ ನಿವೃತ್ತ ಎಂಡಿ ಸಣ್ಣಚಿತ್ತಯ್ಯ, ಹಿರಿಯ ಬಿಜೆಪಿ ಬಿಜೆಪಿ ಹಿರಿಯ ಮುಖಂಡ ಎನ್ ಆರ್ ಲಕ್ಷ್ಮಿಕಾಂತ್ ಲಕ್ಷ್ಮಿಕಾಂತ್, ಬಿಜೆಪಿ ಮಂಡಲ ಅಧ್ಯಕ್ಷ ಕೆ.ಅಭಿನಂದನ್,

 ಕಾಂಗ್ರೆಸ್ ಯುವಮುಖಂಡ ಸುಹಾಸ್ ಸುಧಾಕರ್, ಜೆಡಿಎಸ್ ಹಿರಿಯ ಮುಖಂಡ ಡಿ.ಯಶೋಧರ, ಎಂ. ರವೀಂದ್ರಪ್ಪ, ಎಂ.ಜಯಣ್ಣ, ಕೆ.ಶಂಕರಮೂರ್ತಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿಬಿ ಪಾಪಣ್ಣ, ಮಾಗಡಿ ಜಯರಾಮಯ್ಯ, ಯತೀಶ್, ಎಸ್.ಆರ್. ತಿಪ್ಪೇಸ್ವಾಮಿ, ರಂಗಸ್ವಾಮಿ, ಬಿ.ಕೆ.ಕರಿಯಪ್ಪ ಸೇರಿದಂತೆ ವಿವಿಧ ಪಕ್ಷದ ಮುಖಂಡರು, ಶ್ರೀಕೃಷ್ಣ ದೇವಸ್ಥಾನ ಸಮಿತಿಯವರು ಹಾಗೂ ಗೊಲ್ಲ ಸಮುದಾಯದ ಸಮಸ್ತ ಜನತೆ ಇದ್ದರು.

 

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಸ್ಪರ ಪ್ರೀತಿ, ವಿಶ್ವಾಸ, ಸಹೋದರತ್ವ, ಆತ್ಮವಿಶ್ವಾಸ ಬೆಳೆಸುವುದೇ ಕ್ರೀಡೆಯ ಉದ್ದೇಶ ಪ್ರಾಮಾಣಿಕತೆಗೆ ಸ್ಟಿಂಗ್ ಆಪರೇಶನ್ ಭಯವೇಕೆ?:ಮನಸ್ಸಿನ ಆರೋಗ್ಯಕ್ಕೆ ಅರಿವೇ ಮೊದಲ ಚಿಕಿತ್ಸೆ:ಮೈಸೂರು ದಸರಾ ಸಂಸ್ಕೃತಿ, ಪರಂಪರೆ, ವೈಭವ  ದೃಷ್ಟಿಕೋನ ಚಿಂತನೆ ಕಾರ್ಯಕ್ರಮ ಆಯೋಜನೆವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಗೆ ಸರ್ಕಾರದಿಂದ ಆಹ್ವಾನಚಿತ್ರದುರ್ಗ ಜಿಲ್ಲೆಯ ರೈತರಿಗೆ ವಿಮಾ ಮೊತ್ತ ಶೀಘ್ರ ಬಿಡುಗಡೆಗೆ ಕೃಷಿ ಆಯುಕ್ತರಿಗೆ ಮನವಿ ಸಲ್ಲಿಸಿದ ಶಿವಲಿಂಗಪ್ಪಎನ್ ಡಿಎ ಅಭ್ಯರ್ಥಿ ಕೆ.ಎಂ ಸುರೇಶ್ ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆ ಆಗುವುದು ನಿಶ್ಚಿತ-ಸಂಸದ ಕಾರಜೋಳದೇಶದ ಯುವಕರನ್ನು ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿರಾಹುಲ್ ಗಾಂಧಿ ಪ್ರಧಾನಿಯಾಗಲು ಹುಚ್ಚರಂತೆ ಓಡಾಡುತ್ತಿದ್ದಾರೆ: ಸಂಸದ ಗೋವಿಂದ್ ಕಾರಜೋಳ ವಾಗ್ದಾಳಿಅನುಭವ ಮತ್ತು ಜ್ಞಾನ ಎರಡೂ ನನ್ನಲ್ಲಿಲ್ಲ- ಸಂಸದ ಗೋವಿಂದ್ ಕಾರಜೋಳ