Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥಕ್ಕೆ ಅದ್ಧೂರಿ ಸ್ವಾಗತ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥ ದೊಡ್ಡಬಳ್ಳಾಪುರ ನಗರಕ್ಕೆ ಇಂದು ಆಗಮಿಸಿತು. ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ  ವಿಜಯ ಜ್ಯೋತಿ ರಥವನ್ನು ಕಲಾ ತಂಡಗಳೊಂದಿಗೆ ಸ್ವಾಗತಿಸಲಾಯಿತು. 

ದೊಡ್ಡಬಳ್ಳಾಪುರ ಕ್ಕೆ ಆಗಮಿಸಿದ ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥಕ್ಕೆ ಶಾಸಕ ಧೀರಜ್ ಮುನಿರಾಜುತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ತಾಲ್ಲೂಕು ಪಂಚಾಯಿತಿ  ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು,   ನಗರಸಭೆ  ಪೌರಾಯುಕ್ತ. ಕಾರ್ತಿಕ್ ಈಶ್ವರ್, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮೊದಲಾದವರು ಮಾಲಾರ್ಪಣೆ ಮತ್ತು  ಪುಷ್ಪಾರ್ಚನೆ  ಸಲ್ಲಿಸಿದರು.  

      ಕಾರ್ಯಕ್ರಮದಲ್ಲಿ   ದೊಡ್ಡಬಳ್ಳಾಪುರ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿಕಿತ್ತೂರು ರಾಣಿ ಚೆನ್ನಮ್ಮ   ಬ್ರಿಟಿಷರ ವಿರುದ್ದ   ನಡೆಸಿದ ಹೋರಾಟದಲ್ಲಿ  ವಿಜಯಗಳಿಸಿ 200  ವರ್ಷ ಪೂರೈಸಿರುವ ಹಿಲ್ಲೆಯಲ್ಲಿ  ರಾಜ್ಯಾದ್ಯಂತ ನಡೆಯುವ ಕಿತ್ತೂರು ರಾಣಿ ಚೆನ್ನಮ್ಮ ವಿಜಯಯಾತ್ರೆ ನಡೆಯುತ್ತಿದೆ. 

1824 ಅಕ್ಟೋಬರ್ 23 ರಂದು  ಕಿತ್ತೂರು  ರಾಣಿ ಚೆನ್ನಮ್ಮ  ಸೈನ್ಯದೊಂದಿಗೆ ಕಿತ್ತೂರು ಕೋಟೆಯ ಹೊರಗೆ ಈಸ್ಟ್ ಇಂಡಿಯಾ ಕಂಪನಿಯ ಸೈನಿಕರನ್ನು ಸೋಲಿಸಿದ ದಿನವಾಗಿದೆ.  ಬ್ರಿಟಿಷರ ವಿರುದ್ದ  ಮೊದಲ ಮಹಿಳಾ  ಹೋರಾಟಗಾರ್ತಿಗೆ  1824 ರಲ್ಲಿ  ದೊರೆತ ವಿಜಯವಾಗಿದೆ.  1857 ರಲ್ಲಿ ನಡೆದ ಸಿಪಾಯಿ ದಂಗೆಗೂ  ಮೊದಲೇ 1824 ರಲ್ಲಿ  ಬ್ರಿಟಿಷರ ವಿರುದ್ದ  ಹೋರಾಟ ನಡೆಸಿ ಗೆಲುವು ಸಾಧಿಸಿದ  ಕಿತ್ತೂರು ರಾಣಿ ಚೆನ್ನಮ್ಮನ ಧೀರತ್ವ ಮತ್ತು ದೇಶಪ್ರೇಮದಕ್ಷ ಆಡಳಿತ ವಿಧಾನ ಎಲ್ಲರಿಗೂ ಆದರ್ಶಪ್ರಾಯ ಎಂದರು.

       ಕಿತ್ತೂರು ರಾಣಿ ಚೆನ್ನಮ್ಮ   ಬ್ರಿಟಿಷರಿಗೆ  ತೆರಿಗೆ ಕೊಡುವುದಿಲ್ಲ ಎಂದು ಹೇಳುವ ಮೂಲಕ ನಮಗೆ ಸ್ವಾಭಿಮಾನ ಪ್ರದರ್ಶನ ಮಾಡಿದರು.   ಸಂಗೊಳ್ಳಿ ರಾಯಣ್ಣ  ಅಂತಹ ಸ್ವಾತಂತ್ರ್ಯ ಸೇನಾನಿ ಕಿತ್ತೂರು ರಾಣಿ ಚೆನ್ನಮ್ಮನ ರಾಜ್ಯದಲ್ಲಿ ಇದ್ದರು.. ಮಹಿಳೆಯರು ಘನತೆ ಮತ್ತು ನ್ಯಾಯವನ್ನು ಕಾಪಾಡುವುದರಲ್ಲಿ  ಮುಂಚೂಣಿಯಲ್ಲಿರಬಹುದು  ಎಂಬುದನ್ನು ತೋರಿಸಿಕೊಟ್ಟರು. 

ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ ದೇಶದ ಮಹಿಳೆಯರಿಗೆ ಸ್ಪೂರ್ತಿಯಾಗಿದೆ. ಇಂತಹ  ವೀರ ಮಹಿಳೆಯ  ನರನಪಿನಲ್ಲಿ  ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ  ಪ್ರತಿವರ್ಷ ಕಿತ್ತೂರು ಉತ್ಸವ ನಡೆಯುತ್ತದೆ.  ಈ ವರ್ಷ  ಕಿತ್ತೂರು ವಿಜಯಕ್ಕೆ 200 ವರ್ಷ ಆಗಿರುವ ಪ್ರ ಯುಕ್ತ  ಅಕ್ಟೋಬರ್  23, 24, 25ರಂದು ಕಿತ್ತೂರಿನಲ್ಲಿ ವಿಜಯೋತ್ಸವ ನಡೆಯಲಿದೆ ಎಂದರು. 

ಕಾರ್ಯಕ್ರಮದಲ್ಲಿ    ಕನ್ನಡ ಸಾಹಿತ್ಯ ಪರಿಷತ್ತು  ಕಸಬಾ ಹೋಬಳಿ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ  ಸಫೀರ್ಕಾಡನೂರು ಗ್ರಾಮಪಂಚಾಯಿತಿ ಅಧ್ಯಕ್ಷ ಮಧುಸೂದನ್, ಸಾಸಲು ಗ್ರಾಮಪಂಚಾಯಿತಿ ಸದಸ್ಯ ಪ್ರಸನ್ನಕುಮಾರ್ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು  ಭಾಗವಹಿಸಿದ್ದರು.

ದೊಡ್ಡಬಳ್ಳಾಪುರದಿಂದ ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥವನ್ನು  ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿಗೆ  ಕಳುಹಿಸಿ ಕೊಡಲಾಯಿತು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ