Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆ-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ನಗರದ ಕೆಂಪೇಗೌಡ ಪೌರ ಸಭಾಂಗಣದಲ್ಲಿ ನಡೆದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು:


ಬೆಂಗಳೂರು ಜಾಗತಿಕವಾಗಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ವಿಶ್ವದ ಹಲವು ದೇಶಗಳ ಜನರು ಇಲ್ಲಿ ಬಂಡವಾಳ ಹೂಡಿಕೆ ಮಾಡಿರುವುದು ಮಾತ್ರವಲ್ಲ, ಇಲ್ಲಿಯೇ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಇಂದು ಬೆಂಗಳೂರಿನ ಜನಸಂಖ್ಯೆ ಸುಮಾರು 1.40 ಕೋಟಿ ಇದೆ. ಇಂತಹ ಬೃಹತ್‌ನಗರದ ಸಮರ್ಪಕ ಆಡಳಿತ ಕೇವಲ ಒಂದು ಪಾಲಿಕೆಯಿಂದ ಸಾಧ್ಯವಿಲ್ಲ ಎಂಬ ಚರ್ಚೆ ಇತ್ತು.

ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನಲ್ಲಿ ಹೆಚ್ಚು ಕಾರ್ಪೊರೇಶನ್‌ ರಚನೆ ಸಾಧ್ಯತೆಗಳ ಕುರಿತು ವರದಿ ನೀಡಲು ಸಮಿತಿ ರಚಿಸಿದ್ದೆ. ಸಮಿತಿ ಮಧ್ಯಂತರ ವರದಿಯನ್ನು ಸಹ ನೀಡಿತ್ತು. ಆದರೆ ನಂತರ ಬಂದ ಸರ್ಕಾರಗಳಲ್ಲಿ ಈ ಕುರಿತು ಯಾವುದೇ ತೀರ್ಮಾನ ಆಗಿರಲಿಲ್ಲ. ನಾವು ಅಧಿಕಾರಕ್ಕೆ ಬಂದ ಬಳಿಕ ಸಮಿತಿ ಪುನರ್ರಚಿಸಿದೆವು. ಇದೀಗ ಸಾರ್ವಜನಿಕರಿಂದ ಸಲಹೆ, ಆಕ್ಷೇಪಣೆಗಳನ್ನು ಸ್ವೀಕರಿಸಿ ನಾವು ಕಾನೂನು ತಂದು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚಿಸಿದ್ದೇವೆ. ಇದೀಗ ಐದು ನಗರಪಾಲಿಕೆಗಳು ಅಸ್ತಿತ್ವಕ್ಕೆ ಬಂದಿವೆ.

ಗ್ರೇಟರ್‌ಬೆಂಗಳೂರು ಪ್ರಾಧಿಕಾರ ಮೇ 15 ರಂದು ಜಾರಿಗೆ ಬಂತು. ಜನರಿಗೆ ಪೂರಕವಾದ, ಅವರ ಆಶೋತ್ತರಗಳನ್ನು ಈಡೇರಿಸುವ ಆಡಳಿತ ನೀಡುವ ಉದ್ದೇಶದಿಂದ ಪ್ರಜಾಪ್ರಭುತ್ವದ ಆಶಯಕ್ಕೆ ಅನುಗುಣವಾಗಿ ಬಿಜಿಎ ರಚಿಸಿದ್ದೇವೆ. ಅಧಿಕಾರದ ವಿಕೇಂದ್ರೀಕರಣ ಇದರಿಂದ ಸಾಧ್ಯವಾಗಲಿದೆ.

ಗ್ರೇಟರ್‌ಬೆಂಗಳೂರು ಪ್ರಾಧಿಕಾರ ಮುಂದಿನ ದಿನಗಳಲ್ಲಿ ಬೆಂಗಳೂರಿನ ನಾಗರಿಕರಿಗೆ ಅಗತ್ಯ ಮೂಲ ಸೌಲಭ್ಯ ಒದಗಿಸುವುದು, ಸಮರ್ಪಕ ಕಸ ವಿಲೇವಾರಿ, ಸಂಚಾರ ದಟ್ಟಣೆ ಕಡಿಮೆ ಮಾಡುವುದು, ರಸ್ತೆ, ಚರಂಡಿ ವ್ಯವಸ್ಥೆ ಚೆನ್ನಾಗಿರುವಂತೆ ಮಾಡಲಿದೆ. ಬೆಂಗಳೂರು ನಗರವನ್ನು ಚೊಕ್ಕಟವಾಗಿ ಇಡಲು, ನಗರದ ಸೌಂದರ್ಯ ಹೆಚ್ಚಿಸಲು ಮತ್ತು ಎಲ್ಲಾ ಐದು ನಗರ ಪಾಲಿಕೆಗಳ ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ.

ಈ ಎಲ್ಲಾ ಕಾರ್ಯಕ್ಕೆ ಸರ್ಕಾರದ ಜೊತೆಗೆ ಸಮನ್ವಯ ಅಗತ್ಯ. ಮುಂದಿನ ದಿನಗಳಲ್ಲಿ ಎಲ್ಲಾ ಸಂಬಂಧಪಟ್ಟ ಇಲಾಖೆಗಳು, ಬೆಂಗಳೂರು ನಾಗರಿಕರಿಗೆ ಸೇವೆ ಒದಗಿಸುತ್ತಿರುವ ಬಿಡಿಎ, ಬಿಡಬ್ಲುಎಸ್‌ಎಸ್‌ಬಿ, ಬೆಸ್ಕಾಂ, ಬಿಎಂಆರ್‌ಸಿಎಲ್‌ನಂತಹ ಸಂಸ್ಥೆಗಳು ಜಿಬಿಎ ಜತೆ ಸಮನ್ವಯದಿಂದ ಕಾರ್ಯ ನಿರ್ವಹಿಸಲಿವೆ.

ಐದು ನಗರಪಾಲಿಕೆಗಳಿಗೆ ಸಮರ್ಪಕವಾದ ಆಡಳಿತ ಕಚೇರಿಗಳನ್ನು ನಿರ್ಮಿಸಲು ಸ್ಥಳವನ್ನು ಗುರುತಿಸಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲು ಸಭೆಯಲ್ಲಿ ಸೂಚನೆ ನೀಡಿದ್ದೇನೆ. ಆಯಾ ಕಾರ್ಪೊರೇಶನ್‌ಗಳು ತಮ್ಮ ಹಂತದಲ್ಲಿಯೇ ಕಸ ವಿಲೇವಾರಿ ಸಮರ್ಪಕವಾಗಿ ಇರುವಂತೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದೇನೆ.

ಎಲ್ಲಾ ನಗರಸಭೆ ಆಯುಕ್ತರು ತಮ್ಮ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಬೇಕು. ಕಸ ವಿಲೇವಾರಿ, ಸ್ವಚ್ಚತೆಗೆ ಆದ್ಯತೆ ನೀಡಬೇಕು. ಫುಟ್‌ಪಾತ್‌ಗಳು ಸಾಧ್ಯವಾದಷ್ಟು ವಿಸ್ತಾರವಾಗಿರುವಂತೆ ನೋಡಿಕೊಳ್ಳಬೇಕು. ಗುಣಮಟ್ಟದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗದಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾದರೆ ಗುಣಮಟ್ಟದ ಕಾಮಗಾರಿ ಸಾಧ್ಯವಿಲ್ಲ. ಇದಕ್ಕೆ ಅವಕಾಶ ನೀಡಬಾರದು ಎಂದು ಸೂಚನೆ ನೀಡಿದ್ದೇನೆ.

ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಮೆಟ್ರೊ ಲೈನ್‌ನಲ್ಲಿ ಲಾಸ್ಟ್‌ಮೈಲ್‌ಕನೆಕ್ಟಿವಿಟಿಯನ್ನು ಹೆಚ್ಚಿಸುವ ಕುರಿತು ಯೋಜನೆ ರೂಪಿಸಿ ಅನುಷ್ಠಾನಗೊಳಿಸಲು ಸೂಚನೆ ನೀಡಲಾಗಿದೆ. ಇದಕ್ಕಾಗಿ ಸಣ್ಣ ಬಸ್ಸುಗಳನ್ನು ನಿಯೋಜಿಸುವ ಬಗ್ಗೆ ಪರಿಶೀಲಿಸಲು ಸಾರಿಗೆ ಸಚಿವರಿಗೆ ಸೂಚನೆ.

ಗ್ರೇಟರ್‌ಬೆಂಗಳೂರು ಪ್ರಾಧಿಕಾರ ರಚನೆ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ಜನರಿಗೆ ಅತ್ಯುತ್ತಮ ನಾಗರಿಕ ಸೌಲಭ್ಯ, ಉತ್ತಮ ಆಡಳಿತ ನೀಡಬೇಕೆಂಬ ಉದ್ದೇಶವನ್ನು ಈಡೇರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದ್ದೇನೆ.

ಜನಪ್ರತಿನಿಧಿಗಳು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹೇಳಿಕೊಳ್ಳಲು ಇಲ್ಲಿ ಅವಕಾಶವಿದೆ. ಆದರೆ ಕೆಲವು ಜನಪ್ರತಿನಿಧಿಗಳು ಈ ಅವಕಾಶ ಕಳೆದುಕೊಂಡಿದ್ದಾರೆ. ಬೆಂಗಳೂರು ಅಭಿವೃದ್ಧಿಗೆ ವಿರೋಧವಿರುವವರು, ಅಧಿಕಾರ ವಿಕೇಂದ್ರೀಕರಣಕ್ಕೆ ವಿರೋಧವಿರುವವರು ಈ ಸಭೆಯನ್ನು ಬಹಿಷ್ಕರಿಸಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ