Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಯೋಜನೆ

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ಉತ್ತರ ಭಾರತದ ಬೇರೆ ಬೇರೆ ರಾಜ್ಯಗಳಲ್ಲಿ ಇರುವಂತೆ ಕರ್ನಾಟಕದಲ್ಲೂ ೪೫೦೦ ಕೋಟಿ ರೂ. ವೆಚ್ಚದಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಯೋಜನೆಯನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದರು.


ನಗರದ ಪ್ರವಾಸಿ ಮಂದಿರದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭವಿಷ್ಯದಲ್ಲಿ ಗ್ರೀನ್ ಫೀಲ್ಡ್ ಕರ್ನಾಟಕದ ದೊಡ್ಡ ಯೋಜನೆಯಾಗಲಿದೆ ಎಂದು ಹೇಳಿದರು.

ಹಾಸನ, ತಿಪಟೂರು, ಹುಳಿಯಾರು ಮಾರ್ಗದಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ನಿರ್ಮಾಣವಾಗಲಿದೆ. ತುಮಕೂರು ಜಿಲ್ಲೆಯಲ್ಲಿ ೪೦ ಕಿ.ಮೀ.ನಲ್ಲಿ ಹಾದು ಹೋಗಲಿದೆ. ೫೦೦ ಕೋಟಿ ರೂ. ವೆಚ್ಚದಲ್ಲಿ ಪುಣೆ-ಬೆಂಗಳೂರು ೫೦೦ ಕಿ.ಮೀ. ವ್ಯಾಪ್ತಿಯಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಆಗಲಿದೆ ಎಂದರು.

ತುಮಕೂರು ಲೋಕಸಭಾ ಕ್ಷೇತ್ರದ ಪ್ರತಿ ಹೋಬಳಿಗೆ ಹೋಗಿ ಜನರ ಸಮಸ್ಯೆಗಳನ್ನು ಆಲಿಸುತ್ತೇನೆ. ಒಂದು ದಿನಕ್ಕೆ ಎರಡು ಹೋಬಳಿಯಂತೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ ಎಂದು ಅವರು ಹೇಳಿದರು.

ಒಂದು ವಾರದಲ್ಲಿ ಮೂರು ದಿನ ಒಂದು ರೌಂಡ್ ಮಗಿಸಿ, ಎರಡನೇ ರೌಂಡ್‌ಗೆ ಬೇರೆ ಬೇರೆ ಪಂಚಾಯ್ತಿಗಳಿಗೆ ಹೋಗುತ್ತೇನೆ. ಆ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಣವನ್ನು ಹೇಗೆ ವಿನಿಯೋಗಿಸಲಾಗಿದೆ ಎಂಬುದನ್ನು ಸಹ ಪರಿಶೀಲನೆ ನಡೆಸುತ್ತೇನೆ ಎಂದರು.

ರಾಜ್ಯದಲ್ಲಿ ಒಟ್ಟು ೫೦೭೨ ಕೋಟಿ ರೂ. ರೈಲ್ವೆ ಯೋಜನೆಗೆ ಅನುದಾನ ತಂದಿದ್ದೇನೆ. ಈಗಾಗಲೇ ೧೭ ಜಿಲ್ಲೆಗಳಲ್ಲೂ ಪ್ರವಾಸ ಮಾಡಿದ್ದು, ಅಲ್ಲಿ ಆಗಬೇಕಾಗಿರುವ ರೈಲ್ವೆ ಯೋಜನೆಗಳ ಕುರಿತು ಕ್ರಮ ಕೈಗೊಳ್ಳಲಾಗಿದೆ ಎಂದರು. 

ತುಮಕೂರು-ರಾಮದುರ್ಗ ಮಾರ್ಗದಲ್ಲಿ ೨೫೦೦ ಕೋಟಿ ವೆಚ್ಚದಲ್ಲಿ ೨ನೇ ಹಂತದ ಕೆಲಸಗಳು ಆರಂಭವಾಗಿವೆ. ಶೇ. ೯೦ ರಷ್ಟು ಭೂ ಹಸ್ತಾಂತರ ಕಾರ್ಯ ಮುಗಿದಿದೆ. ೨೦೨೭ರ ಡಿಸೆಂಬರ್‌ಗೆ ಈ ಯೋಜನೆ ಲೋಕಾರ್ಪಣೆಗೊಳ್ಳಲಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಸುರೇಶ್‌ಗೌಡ, ಜ್ಯೋತಿಗಣೇಶ್, ಮಾಜಿ ಸಂಸದ ಜಿ.ಎಸ್. ಬಸವರಾಜು, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಮತ್ತಿತರರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ