Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಲಾಂಚ್

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ‌ಮಹಿಳಾ ಉದ್ಯಮಿದಾರರು ನೋಂದಣಿ ಮಾಡಿಕೊಳ್ಳಲು ಅವಕಾಶ ಮಾಡಿಕೊಡುವ ಉದ್ದೇಶದಿಂದ ಹೊಸದಾಗಿ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಅಪ್ಲಿಕೇಷನ್ ಅನ್ನು ಲಾಂಚ್ ಮಾಡಲಾಗಿದೆ.


ಮಹಿಳೆಯರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಅಭಿವೃದ್ಧಿಗೊಳಿಸಲು ಹಾಗೂ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರನ್ನು ಮಹಿಳಾ ಉದ್ಯಮಿದಾರರನ್ನಾಗಿ ಮಾಡಲು ಹಾಗೂ ಮಹಿಳೆಯರು ಉತ್ಪಾದಿಸುವ ವಸ್ತುಗಳಿಗೆ ಉಚಿತವಾಗಿ ಮಾರುಕಟ್ಟೆ ವ್ಯವಸ್ಥೆಯನ್ನು ನಿಗಮದಿಂದ ಕಲ್ಪಿಸಲಾಗುತ್ತಿದೆ.

ಪ್ರಸಕ್ತ ಸಾಲಿಗೆ ಮಹಿಳಾ ಉದ್ದಿಮೆದಾರರನ್ನು ನೋಂದಾಯಿಸಲು ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಅಪ್ಲಿಕೇಷನ್ ರೂಪಿಸಿದ್ದು, ಅರ್ಹರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

ವಿವಿಧ ನಿಗಮದಿಂದ ಹಾಗೂ ಸರ್ಕಾರದ ವಿವಿಧ ನಿಗಮ ಮಂಡಳಿ ಮತ್ತು ಇಲಾಖೆಗಳ ಯೋಜನೆಗಳಡಿ ಸೌಲಭ್ಯ ಪಡೆದ ಮಹಿಳಾ ಫಲಾನುಭವಿಗಳು, ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇತರೆ ಯಶಸ್ವಿ ಮಹಿಳಾ ಉದ್ದಿಮೆದಾರರು ತಾವು ತಯಾರಿಸುವ ಉತ್ಪನ್ನಗಳ ಮಾಹಿತಿ ನೀಡಿ ನೋಂದಣಿ ಮಾಡಿಕೊಳ್ಳಲು ನಿಗಮದ ಅಭಿವೃದ್ಧಿ ನಿರೀಕ್ಷಕರು, ದೂ ಸಂ:9663683150 ಅಥವಾ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂ:206, 2ನೇ ಮಹಡಿ ಜಿಲ್ಲಾಡಳಿತ ಭವನ. ಬೀರಸಂದ್ರ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು