ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ “ಗೃಹಲಕ್ಷ್ಮಿ” ಯೋಜನೆಯ 31ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ ಗಂಜಿಗಟ್ಟೆ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಂದಿನಿಂದಲೇ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ 31ನೇ ಕಂತಿನ ಜಮೆ ಪ್ರಕ್ರಿಯೆ ಆರಂಭವಾಗಲಿದೆ. ಇಂದು ಸಂಜೆಯಿಂದಲೇ ಹಣ ಬಿಡುಗಡೆಯಾಗಲಿದ್ದು, ಹಂತ-ಹಂತವಾಗಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಫಲಾನುಭವಿಗಳ ಖಾತೆಗೆ ಹಣ ನೇರವಾಗಿ ಜಮೆಯಾಗಲಿದೆ.
ರಾಜ್ಯ ಸರ್ಕಾರ ಮಹಿಳೆಯರ ಆರ್ಥಿಕ ಸ್ಥಿತಿ ಬಲಪಡಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ. ಕುಟುಂಬದ ಮುಖ್ಯ ಮಹಿಳೆಗೆ ಪ್ರತಿ ತಿಂಗಳು ರೂ.2000/-ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 3,75,487ಕ್ಕೂ ಹೆಚ್ಚು ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರೆತಿದೆ ಎಂದು ಪ್ರಕಟಣೆ ತಿಳಿಸಿದೆ.



