LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರಿಗೆ ಶೇಂಗಾ ಬೆಳೆ ತರಬೇತಿ ಹಾಗೂ 'ಕೆ-1812' ಹೊಸ ತಳಿ ವಿತರಣೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಹಿರಿಯೂರು:         ಅಖಿಲ ಭಾರತ ಸಮನ್ವಯ ಶೇಂಗಾ ಬೆಳೆ ಯೋಜನೆಯಡಿ ಚಳ್ಳಕೆರೆ ತಾಲ್ಲೂಕಿನ ಗುಡಿಹಳ್ಳಿ, ಎತ್ತಿನಟ್ಟಿ ಹಾಗೂ ಗೊಲ್ಲಹಳ್ಳಿ ಗ್ರಾಮದ ರೈತರಿಗೆ ಶೇಂಗಾ ಬೆಳೆಯ ವೈಜ್ಞಾನಿಕ ತರಬೇತಿ ಮತ್ತು 'ಕೆ-1812' ಹೊಸ ತಳಿಯ ಶೇಂಗಾಕಾಯಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇಳುವರಿ ಹೆಚ್ಚಳಕ್ಕೆ ಪೋಷಕಾಂಶ ಹಾಗೂ ಕಳೆ ನಿರ್ವಹಣೆ ಅಗತ್ಯ: ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಪ್ರಾಧ್ಯಾಪಕರು ಹಾಗೂ ಸಹ ಸಂಶೋಧನಾ ನಿರ್ದೇಶಕರು (ಪ್ರಭಾರೆ) ಡಾ. ಧನಂಜಯ ಮಾತನಾಡಿ, "ಶೇಂಗಾ ಬೆಳೆಯಲ್ಲಿ ಉತ್ತಮ ಇಳುವರಿ ಪಡೆಯಲು ಸೂಕ್ತ ಕಳೆ ನಿರ್ವಹಣೆ, ಜಿಪ್ಸಂ ಬಳಕೆಯ ಮಹತ್ವ ಹಾಗೂ ಸುಧಾರಿತ ಬೇಸಾಯ ಕ್ರಮಗಳು ಅತ್ಯಗತ್ಯ" ಎಂದು ರೈತರಿಗೆ ವಿವರವಾಗಿ ಮನವರಿಕೆ ಮಾಡಿಕೊಟ್ಟರು.

ಹೊಸ ತಳಿ 'ಕೆ-1812' ವಿಶೇಷತೆ: ಶೇಂಗಾ ತಳಿ ವಿಜ್ಞಾನಿ ಡಾ. ಮೋಹನ್ ಕುಮಾರ್ ಎನ್. ವಿ. ಮಾತನಾಡಿ, ರೈತರ ಜಮೀನಿನಲ್ಲಿ 'ಕೆ-1812' ಹೊಸ ಶೇಂಗಾ ತಳಿಯ ಪ್ರಾತ್ಯಕ್ಷಿಕೆ ಕೈಗೊಳ್ಳುತ್ತಿರುವುದರ ಉದ್ದೇಶ ಹಾಗೂ ಈ ತಳಿಯ ಗುಣವಿಶೇಷತೆಗಳ ಬಗ್ಗೆ ಬೆಳಕು ಚೆಲ್ಲಿದರು.

​ಅಖಿಲ ಭಾರತ ಸಮನ್ವಯ ಶೇಂಗಾ ಬೆಳೆ ಪ್ರಾಯೋಜನೆಯ ಮುಖ್ಯಸ್ಥರು ಹಾಗೂ ಬೇಸಾಯ ತಜ್ಞರಾದ ಡಾ. ಕುಮಾರ್ ನಾಯ್ಕ್ ಎ. ಹೆಚ್. ಮಾತನಾಡಿ, ಸಂಶೋಧನೆಯ ಉದ್ದೇಶಗಳು, ಇಲಾಖೆಯಿಂದ ಬಿಡುಗಡೆಯಾಗಿರುವ ತಾಂತ್ರಿಕತೆಗಳು ಮತ್ತು ಶೇಂಗಾ ಬೆಳೆಗೆ ಸೂಕ್ತವಾದ ಕಳೆನಾಶಕಗಳ ಬಳಕೆ ಕುರಿತು ರೈತರಿಗೆ ಮಾಹಿತಿ ನೀಡಿದರು.

ಉಪಸ್ಥಿತಿ: ಗುಡಿಹಳ್ಳಿಯ ಪ್ರಗತಿಪರ ರೈತ ರಂಗಣ್ಣ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಹಾಯಕ ಮುಖ್ಯ ತಾಂತ್ರಿಕ ಅಧಿಕಾರಿ ಡಾ. ರುದ್ರಮುನಿ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧಆಗಸ್ಟ್ 12ಕ್ಕೆ 'ಶತಮಾನದ ಖಗ್ರಾಸ ಸೂರ್ಯಗ್ರಹಣ': ಭಾರತದಲ್ಲಿ ಗೋಚರವಿಲ್ಲ, ಯಾವುದೇ ಆಚರಣೆ ಅಗತ್ಯವಿಲ್ಲರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್