Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅನುಭವ ಮಂಟಪದಲ್ಲಿ ಸರ್ವ ಧರ್ಮಕ್ಕೂ ಸಮಾನ ಅವಕಾಶವಿತ್ತು- ಗುರುರಾಜಪ್ಪ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದ  ಬಸವಣ್ಣನವರು ಅನುಭವ ಮಂಟಪದಲ್ಲಿ  ಸರ್ವ ಸಮುದಾಯವರಿಗೂ ಸಮಾನ ಅವಕಾಶ ನೀಡಿದರು   ಎಂದು ಕನ್ನಡಪರ  ಹಿರಿಯ ಹೋರಾಟಗಾರ ಗುರುರಾಜಪ್ಪ ತಿಳಿಸಿದರು.

 ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸಾಮಾಜಿಕ ವ್ಯವಸ್ಥೆಯಲ್ಲಿನ ತಾರತಮ್ಯ ನಿವಾರಿಸುವ ಕಡೆಗೆ
 ಬಸವಣ್ಣನವರು ಮೊದಲ ಆದ್ಯತೆ ನೀಡಿದರು.  ಜಾತಿ ವ್ಯವಸ್ಥೆ ತೊಡೆದು ಹಾಕಿ ಸಮ ಸಮಾಜ ಕಟ್ಟುವ ಬಸವಣ್ಣನವರ ಚಿಂತನೆಗಳು ಎಲ್ಲಾ ಕಾಲಕ್ಕೂ ಮಾದರಿಯಾಗಿವೆ.  ಬಸವಾದಿಶರಣರ ಚಿಂತನೆಗಳು ಭಾರತದ ಸಂವಿಧಾನದ ಆಶಯಗಳಿಗೆ ಪ್ರೇರಣೆಯಾಗಿವೆ ಎಂದರು.

      ಜ್ಞಾನಗಂಗಾ ಪ್ರೌಢಶಾಲೆಯ ಶಿಕ್ಷಕ ಕೋದಂಡರಾಮ್ ಮಾತನಾಡಿ, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಗೆ ಬಸವಣ್ಣನವರ ಕೊಡುಗೆ ಅಪಾರವಾಗಿದೆ. ವಿಶ್ವ ಸಾಹಿತ್ಯಕ್ಕೆ ಕನ್ನಡ ಸಾಹಿತ್ಯದ ಕೊಡುಗೆ ವಚನ ಸಾಹಿತ್ಯವಾಗಿದೆ. ಬಸವಣ್ಣ ಅವರ ನೇತೃತ್ವದಲ್ಲಿ ವಚನಕಾರರು ತಮ್ಮ‌ವಚನಗಳಲ್ಲಿ ಸಾಮಾಜಿಕ ಹಾಗೂ ತಾತ್ವಿಕ ಮೌಲ್ಯಗಳನ್ನು ಪ್ರತಿಪಾದಿಸಿದರು.  ವಿಶ್ವ ಮಾನವತೆ ಮತ್ತು ವಿಶ್ವ ಶ್ರೇಷ್ಠ ಮೌಲ್ಯಗಳನ್ನು ಪ್ರತಿಪಾದಿಸಿದ ಬಸವಣ್ಣ  ಕರ್ನಾಟಕದ ಸಾಂಸ್ಕೃತಿಕ ನಾಯಕರಾಗಿದ್ದಾರೆ ಎಂದರು.

   ನಿವೃತ್ತ ಮುಖ್ಯ ಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ ಮಾತನಾಡಿ, ಬಸವಣ್ಣ ನವರು ವಚನಗಳ ಮೂಲಕ ಸಾಮಾಜಿಕ ಅರಿವು ನೀಡಿದರು. ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದ ಬಸವಣ್ಣನವರಿಗೆ ಸಮ ಸಮಾಜವನ್ನು ಕಟ್ಟುವ ಮುಖ್ಯ ಗುರಿ ಹೊಂದಿದ್ದರು. ಬಸವಣ್ಣನವರು ಕಟ್ಟಿದ ಜಾತ್ಯತೀತವಾದ ಸರ್ವಸಮಾನತೆಯ ವ್ಯವಸ್ಥೆ ಮುಂದುವರಿಸಲು ಸಾಧ್ಯವಾಗಲಿಲ್ಲ ಎಂಬುದು ವಿಷಾದೀಯ ಸಂಗತಿಯಾಗಿದೆ.   ಬಸವಣ್ಣನವರ ಆದರ್ಶಗಳನ್ನು ಅವರ ವಚನಗಳ ವಿಚಾರಧಾರೆಯನ್ನು   ಜನರು ಅರ್ಥ ಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ  ಸಮಾಜದಲ್ಲಿ ಬದಲಾವಣೆ ಉಂಟು ಮಾಡಲು ಸಾಧ್ಯವೆಂದರು.

    ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಘಟಕದ ಅಧ್ಯಕ್ಷ ದಾದಾಪೀರ್ಕೋಶಾಧ್ಯಕ್ಷ  ಜಿ.ಸುರೇಶ್ಪ್ರತಿನಿಧಿ  ಷಫೀರ್, ಸೂರ್ಯ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಎಂ.ಸಿ.ಮಂಜುನಾಥ್, ಡಾ.ಬಿ.ಆರ್.ಅಂಬೇಡ್ಕರ್  ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಅಣ್ಣಯ್ಯಪ್ರತಿನಿಧಿ ಷಫೀರ್ಕಲಾವಿದರುಗಳಾದ ಬಾಶೆಟ್ಟಿಹಳ್ಳಿ ಮಂಜುನಾಥ್ದರ್ಗಾ ಜೋಗಿಹಳ್ಳಿ ಮಲ್ಲೇಶ್ ಮುಂತಾದವರು ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ