Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುಟ್ಕಾ, ಸಿಗರೇಟು, ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ದಾಸರಾಗುತ್ತಿರುವ ಯುವಕರು

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪ್ರಸ್ತುತ ದಿನಮಾನಗಳಲ್ಲಿ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣದ ಬಳಕೆಯಿಂದಾಗಿ ಜಗತ್ತು ತುಂಬ ಹತ್ತಿರವಾಗಿದ್ದು
, ಜಗತ್ತಿನ ಯಾವುದೇ ಮೂಲೆಯಲ್ಲಿ ನಡೆಯುವ ವಿದ್ಯಮಾನಗಳು ಕ್ಷಣ ಮಾತ್ರದಲ್ಲಿ ತಿಳಿಯುತ್ತವೆ. ಇಂದಿನ ಯುವಪೀಳಿಗೆ ಮೇಲೆ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಸದ್ಬಳಕೆಗಿಂತ ದುರ್ಬಳಕೆ ಹೆಚ್ಚಾಗುತ್ತಿರುವುದು ಆತಂಕಕಾರಿಯಾಗಿದೆ ಎಂದು ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು ಕಳವಳ ವ್ಯಕ್ತಪಡಿಸಿದರು.

ನಗರದ ಚಂದ್ರವಳ್ಳಿಯ ಎಸ್.ಜೆ.ಎಂ. ಪದವಿ ಕಾಲೇಜಿನಲ್ಲಿ ನಡೆದ ೨೦೨೪-೨೫ನೇ ಸಾಲಿನ ಕ್ರೀಡಾ, ಸಾಂಸ್ಕೃತಿಕ, ರಾ.ಸೇ.ಯೋ., ಎನ್.ಸಿ.ಸಿ. ಮತ್ತು ವಿವಿಧ ಕೋಶಗಳ ಚಟುವಟಿಕೆಗಳ ಉದ್ಘಾಟನೆ, ಪ್ರತಿಭಾ ಪುರಸ್ಕಾರ ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಯಾಂತ್ರಿಕ ಜೀವನ ಸಾಗಿಸುತ್ತಿದ್ದಾರೆ. ಬಹಳಷ್ಟು ಯುವಕರು ಗುಟ್ಕಾ, ಸಿಗರೇಟು, ಮದ್ಯಪಾನ, ಡ್ರಗ್ಸ್ ಇಂತಹ ಹಲವಾರು ದುಶ್ಚಟಗಳಿಗೆ ದಾಸರಾಗಿ ಬಲಿಯಾಗುತ್ತಿದ್ದಾರೆ. ಯುವಕರು ದುಶ್ಚಟಗಳಿಂದ ದೂರವಿದ್ದು ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು. ಸನ್ಮಾರ್ಗಗಳು ಉತ್ತಮ ಜೀವನವನ್ನು ರೂಪಿಸುತ್ತವೆ. ನಮ್ಮ ಎಸ್.ಜೆ.ಎಂ ಮಹಾವಿದ್ಯಾಲಯದಲ್ಲಿ ಅಭ್ಯಾಸ ಮಾಡಿದ ಹಳೆಯ ವಿದ್ಯಾರ್ಥಿಗಳು ರಾಜ್ಯ ಮತ್ತು ದೇಶದಲ್ಲಿ ಅತ್ಯುನ್ನತ ಸ್ಥಾನಕ್ಕೆ ಏರಿರುವುದನ್ನು ಸ್ಮರಿಸಿದರು.

ದಾವಣಗೆರೆ ವಿಶ್ವವಿದ್ಯಾಲಯದ ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕ ಡಾ. ಕೆ.ಬಿ. ರಂಗಪ್ಪ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಜನರು ಸ್ಥಳೀಯ ಅಂಗಡಿ ಮುಗ್ಗಟ್ಟುಗಳನ್ನು ಬಿಟ್ಟು ಒಂದೇ ಸೂರಿನಡಿ ಎಲ್ಲಾ ವಸ್ತುಗಳು ಸಿಗುವ ದೊಡ್ಡ ದೊಡ್ಡ ಮಾಲ್‌ಗಳತ್ತ ಧಾವಿಸುತ್ತಿದ್ದಾರೆ. ಇದರ ಪರಿಣಾಮ ಸಣ್ಣಪುಟ್ಟ ವ್ಯಾಪಾರಗಳಿಗೆ ಹೊಡೆತ ಬಿದ್ದಿದೆ. ವಿದ್ಯಾರ್ಥಿಗಳು ತಮ್ಮ ಕಲಿಕೆಯ ನಂತರ ಜವಾಬ್ದಾರಿಯುತ ಉದ್ಯೋಗಗಳಿಗೆ ಪ್ರಯತ್ನಿಸಿ ಮುಂದಿನ ಜೀವನ ರೂಪಿಸಿಕೊಳ್ಳಬೇಕಿದೆ. ತಮ್ಮ ಕಾಲಾವಧಿಯಲ್ಲಿ ಉದ್ಯೋಗಗಳನ್ನು ನಾವು ಗಳಿಸಿದ ಅಂಕಗಳ ಆಧಾರದ ಮೇಲೆ ನೀಡುತ್ತಿದ್ದರು. ಆದರೆ ಪ್ರಸ್ತುತ ಕಾಲಘಟ್ಟದಲ್ಲಿ ಪದವಿಯೊಂದಿಗೆ ವಿವಿಧ ಕೌಶಲ್ಯಗಳ ಅಳವಡಿಸಿಕೊಂಡಲ್ಲಿ ಮಾತ್ರ ಉದ್ಯೋಗಗಳು ಪಡೆಯಲು ಸಾಧ್ಯವಾಗುತ್ತದೆ ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿಶೇಷ ಕೌಶಲ್ಯಗಳ ಮೂಲಕ ಹಣವನ್ನು ಗಳಿಸಬಹುದು. ಪ್ರಸ್ತುತ ದಿನಮಾನಗಳಲ್ಲಿ ಉದ್ಯೋಗಾವಕಾಶಗಳ ಕೊರತೆ ಇರುವುದರಿಂದ ತಮ್ಮಲ್ಲಿರುವ ವಿಶೇಷ ಕೌಶಲ್ಯಗಳನ್ನು ಬಳಸಿಕೊಂಡು ಉದ್ಯೋಗಗಳನ್ನು ಸೃಷ್ಟಿಸಿಕೊಳ್ಳಬೇಕಾದ ಅನಿವಾರ್ಯತೆ ವಿದ್ಯಾರ್ಥಿಗಳಿಗಿದೆ ಎಂದು ಕಿವಿಮಾತು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಎಸ್.ಹೆಚ್. ಪಂಚಾಕ್ಷರಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ಕಾಲೇಜಿನ ಐಕ್ಯುಎಸಿ ಸಂಚಾಲಕ ಡಾ. ಹರ್ಷವರ್ಧನ್ ಎ. ವೇದಿಕೆಯಲ್ಲಿದ್ದರು.

ಇದೇ ಸಂದರ್ಭದಲ್ಲಿ ಪಿಎಚ್.ಡಿ. ಪದವಿ ಪಡೆದ ಸಮಾಜಶಾಸ್ತ್ರ ಪ್ರಾಧ್ಯಾಪಕ ಪ್ರೊ. ಎಸ್. ಆನಂದ್, ೨೦೨೪ನೇ ಅಂತಿಮ ಪದವಿಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ಲೀಲಾ ಮತ್ತು ಉಜ್ಮಾ ಮರಿಯಂ (ಬಿಎ), ತೇಜಸ್ವಿನಿ ವಿ. (ಬಿಎಸ್ಸಿ), ಮಹಾಲಕ್ಷ್ಮಿ ಟಿ.(ಬಿ.ಕಾಂ), ಎನ್.ಸಿ.ಸಿ. ವಿದ್ಯಾರ್ಥಿನಿ ಭಾವನಾ ಆರ್. ಇವರನ್ನು ಸನ್ಮಾನಿಸಲಾಯಿತು. ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರುಗಳಾದ ಡಾ. ಬಿ. ರೇವಣ್ಣ
, ಪ್ರೊ. ಸಿ. ತಿಪ್ಪೇಸ್ವಾಮಿ, ಪ್ರೊ. ಟಿ. ರಜಪೂತ್, ಪ್ರೊ. ಸಿ.ಎನ್. ವೆಂಕಟೇಶ್, ಪ್ರೊ. ಬಿ.ಎಂ. ಸ್ವಾಮಿ, ಡಾ. ನಾಜೀರುನ್ನೀಸಾ ಎಸ್., ಪ್ರೊ. ರಮೇಶ್ ಸಿ. ಕು. ಹೀನಾ ಕೌಸರ್, ಕು. ಮಾಧುರಿ, ಪ್ರೊ. ಲಕ್ಷ್ಮಿಕಾಂತ್, ಮಧು ಎಂ.ಇ., ಮೋಹನ್, ಡಾ. ಸತೀಶ್ ನಾಯ್ಕ್, ಪ್ರೊ. ಹೆಚ್.ಎಂ. ಮಂಜುನಾಥಸ್ವಾಮಿ, ಅಧೀಕ್ಷಕ ಶ್ರೀನಿವಾಸಮೂರ್ತಿ ಮೊದಲಾದವರಿದ್ದರು.
ಚಿನ್ಮಯಿ ಭರತನಾಟ್ಯ ಪ್ರದರ್ಶನ ನೀಡಿದರು. ದಿವ್ಯ ಪ್ರಾರ್ಥಿಸಿದರು. ಡಾ. ಬಿ. ರೇವಣ್ಣ ವಂದಿಸಿದರು. ಸ್ನೇಹ ನಿರೂಪಿಸಿದರು.


 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ