Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಮ್, ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿ ಶಿಬಿರ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯುವ ಸಬಲೀಕರಣಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಯುವಕ / ಯುವತಿಯರಿಗೆ ಸ್ವಯಂ ಉದ್ಯೋಗ ಒದಗಿಸಿಕೊಡುವ ನಿಟ್ಟಿನಲ್ಲಿ ಜಿಮ್, ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಜಿಮ್/ ಫಿಟ್ನೆಸ್ ತರಬೇತಿಯು ಸೆಪ್ಟೆಂಬರ್ 19 ರಿಂದ ಅಕ್ಟೋಬರ್  3 ರವರೆಗೆ  15 ದಿನಗಳ ಅವಧಿಯಾಗಿರುತ್ತದೆ. ತರಬೇತಿ ಪಡೆಯಲಿಚ್ಚಿಸುವವರು ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಠ ವಯೋಮಿತಿ 18 ವರ್ಷ, ಗರಿಷ್ಠ 40 ವರ್ಷದೊಳಗಿರಬೇಕು. ತರಬೇತಿಯು ಬೆಂಗಳೂರಿನ   ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ.

ಬ್ಯೂಟಿಷಿಯನ್ ತರಬೇತಿಯು ಸೆಪ್ಟೆಂಬರ್ 21 ರಿಂದ ಅಕ್ಟೋಬರ್  3 ರವರೆಗೆ,   13 ದಿನಗಳ ಅವಧಿಯಾಗಿರುತ್ತದೆ ಹಾಗೂ ಚಾಟ್ಸ್ ತಯಾರಿಕೆ ತರಬೇತಿಯು ಅಕ್ಟೋಬರ್ 4 ರಿಂದ 9 ರವರೆಗೆ   06 ದಿನಗಳ ಅವಧಿಯಾಗಿರುತ್ತದೆ. ತರಬೇತಿ ಪಡೆಯಲಿಚ್ಚಿಸುವವರು ಎಸ್‍ಎಸ್‍ಎಲ್‍ಸಿ ಉತ್ತೀರ್ಣ ಅಥವಾ ಅನುತ್ತೀರ್ಣವಾಗಿರುವವರು ಕನಿಷ್ಠ ವಯೋಮಿತಿ 18 ವರ್ಷ, ಗರಿಷ್ಟ 40  ವರ್ಷದೊಳಗಿರಬೇಕು. ತರಬೇತಿಯು ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ತರಬೇತಿಯು ಬೆಳಿಗ್ಗೆ 10 ಗಂಟೆಯಿಂದ 5.30 ಗಂಟೆಯವರೆಗೆ ನಡೆಯಲಿದ್ದು, ತರಬೇತಿ ಶಿಬಿರದಲ್ಲಿ ಭಾಗವಹಿಸುವ ಯುವಕ / ಯುವತಿಯರಿಗೆ ಲಘು ಉಪಹಾರ ಒದಗಿಸಲಾಗುವುದು. ಶಿಬಿರಾರ್ಥಿಗಳಿಗೆ ಪ್ರಯಾಣ ಭತ್ಯೆ ನೀಡಲಾಗುವುದು. ಅಲ್ಲದೇ ಹೊರ ಜಿಲ್ಲೆಗಳಿಂದ ಆಗಮಿಸುವ ಶಿಭಿರಾರ್ಥಿಗಳಿಗೆ ಸಾಮಾನ್ಯ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು.

ಆಸಕ್ತ ಯುವಕ / ಯುವತಿಯರು ತಮ್ಮ ಜನ್ಮ ದಿನಾಂಕದ ದಾಖಲೆಯೊಂದಿಗೆ ಸಹಾಯವಾಣಿ ಸಂಖ್ಯೆ 155265 ಹಾಗೂ ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಜ್ಯ ಯುವ ಕೇಂದ್ರ ನೃಪತುಂಗ ರಸ್ತೆ ಬೆಂಗಳೂರು -560001 ಗೆ  ಅಥವಾ ಮೊಬೈಲ್ ದೂರವಾಣಿ ಸಂಖ್ಯೆ 9731251411 ಇಲ್ಲಿ ನೋಂದಾಯಿಸಿಕೊಳ್ಳಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಎಸ್‍ಸಿಎಸ್‍ಪಿ / ಟಿಎಸ್‍ಪಿ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ