ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ಹೆಮ್ಮೆಯ @HMTLtd ಕಾರ್ಖಾನೆ ಪುನಶ್ಚೇತನಕ್ಕೆ ಪಣತೊಟ್ಟಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಯವರು ಈ ಸಂಬಂಧ ನೀತಿ ಆಯೋಗದ ಸದಸ್ಯರಾದ ಡಾ. ವಿ.ಕೆ.ಸಾರಸ್ವತ್ ಅವರೊಂದಿಗೆ ಚರ್ಚೆ ನಡೆಸಿದರು.
ಕೇಂದ್ರದ ಭಾರಿ ಕೈಗಾರಿಕೆ ಸಚಿವಾಲಯದ ಅಧೀನದಲ್ಲಿರುವ ಹೆಚ್ಎಂಟಿಯನ್ನು ಸದೃಢ, ಸ್ವಾವಲಂಬಿ ಉತ್ಪಾದನಾ ವಲಯದ ದೃಷ್ಟಿಕೋನಕ್ಕೆ ಅನುಗುಣವಾಗಿ ಪ್ರಮುಖ ಕಾರ್ಯಾಚರಣೆಗಳನ್ನು ಬಲಪಡಿಸುವುದು,
ಸೌಲಭ್ಯಗಳನ್ನು ಆಧುನೀಕರಿಸುವುದು, ಉತ್ಪಾದನಾ ಮಾರ್ಗಗಳನ್ನು ಅತ್ತ್ಯುತ್ತಮಗೊಳಿಸುವುದು ಮತ್ತು ಮಾರುಕಟ್ಟೆ ವ್ಯಾಪ್ತಿಯನ್ನು ವಿಸ್ತರಿಸುವ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.


