Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನವೆಂಬರ್ 1ರೊಳಗೆ ಪರವಾನಗಿ ಇಲ್ಲದ ಅಕ್ರಮ ಬಂದೂಕು ಒಪ್ಪಿಸಿ: ಸಿಎಂ ಡಿ.ಕೆ ಶಿವಕುಮಾರ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಅರಣ್ಯ ಇಲಾಖೆಯ ಹೆಚ್ಚಿನ ಸಿಬ್ಬಂದಿ ಪರವಾನಗಿ ಇಲ್ಲದ ಬಂದೂಕುಗಳಿಂದಲೇ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನವೆಂಬರ್ 1ರೊಳಗೆ ಪರವಾನಗಿ ಇಲ್ಲದ ಅಕ್ರಮ ಬಂದೂಕುಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕು. ತಪ್ಪಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ಶುಕ್ರವಾರ ನಡೆದ 'ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ'ಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಕ್ರಮ ಶಸ್ತ್ರಾಸ್ತ್ರಗಳನ್ನು ತಾವಾಗಿಯೇ ಒಪ್ಪಿಸಿದರೆ ಯಾವುದೇ ಕಾನೂನು ಪ್ರಕರಣ ದಾಖಲಿಸುವುದಿಲ್ಲ ಎಂದರು. ತಮ್ಮ ಹಾಗೂ ಪ್ರಾಣಿಗಳ ರಕ್ಷಣೆಗಾಗಿ ಬಂದೂಕು ಇಟ್ಟುಕೊಳ್ಳುವವರು ಕಡ್ಡಾಯವಾಗಿ ಪರವಾನಗಿ ಪಡೆಯಬೇಕು ಎಂದು ಸಲಹೆ ನೀಡಿದರು.

Advertisement

ಅರಣ್ಯ ಸಿಬ್ಬಂದಿ ಭತ್ಯೆ ಹಾಗೂ ವನ್ಯಜೀವಿ ಸಂಘರ್ಷ:
ದೇಶದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳನ್ನು ಕಾಪಾಡುವ ಅರಣ್ಯ ಇಲಾಖೆ ಸಿಬ್ಬಂದಿಗಳು ಹಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ. ವನ್ಯಜೀವಿಗಳ ಜತೆಗಿನ ಸಂಘರ್ಷದಲ್ಲಿ ಅನೇಕ ಸಿಬ್ಬಂದಿ ಪ್ರಾಣತ್ಯಾಗ ಮಾಡಿದ್ದಾರೆ. ಸಿಬ್ಬಂದಿಗಳ ಭತ್ಯೆ ಹೆಚ್ಚಿಸುವ ಕುರಿತು ಸಚಿವರ ಮನವಿಯನ್ನು ಪರಿಶೀಲಿಸಲಾಗಿದ್ದು, ಆರ್ಥಿಕ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಅರಣ್ಯದಂಚಿನ ಜನರೊಂದಿಗೆ ಇಲಾಖೆ ಸಿಬ್ಬಂದಿ ಸ್ನೇಹದ ವಾತಾವರಣ ನಿರ್ಮಿಸಿಕೊಳ್ಳಬೇಕು. ಅರಣ್ಯ ಒತ್ತುವರಿ ಸಮಸ್ಯೆ ಇಂದು ನಿನ್ನೆಯದಲ್ಲವಾದ್ದರಿಂದ ಅದನ್ನು ಕಾನೂನು ಪ್ರಕಾರ ಬಗೆಹರಿಸೋಣ, ಸಾರ್ವಜನಿಕರ ಮೇಲೆ ಅತಿಯಾದ ಒತ್ತಡ ಹೇರಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತೇಗದ ಸಿರಿ ಯೋಜನೆ: ರೈತರಿಗೆ ಹೆಚ್ಚಿನ ಲಾಭ ತಂದುಕೊಡುವ ಹಾಗೂ ಅರಣ್ಯ ಇಲಾಖೆಯ ಆದಾಯವನ್ನು ಹೆಚ್ಚಿಸುವ 'ತೇಗದ ಸಿರಿ' ಯೋಜನೆಯ ಯಶಸ್ಸಿಗಾಗಿ ಅಧಿಕಾರಿಗಳು ಶ್ರಮಿಸಬೇಕು.

ಕಸ್ತೂರಿ ರಂಗನ್ ವರದಿ: ಕಸ್ತೂರಿ ರಂಗನ್ ವರದಿಯನ್ನು ಈಗಾಗಲೇ ಮೂರ್ನಾಲ್ಕು ಬಾರಿ ವಾಪಸ್ ಕಳುಹಿಸಲಾಗಿದೆ. ನಮಗೊಂದು ನ್ಯಾಯ, ಕೇರಳಕ್ಕೆ ಮತ್ತೊಂದು ನ್ಯಾಯ ನೀಡಲಾಗಿದೆ. ಇದರ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಲಾಗುವುದು.

ಟ್ರೀ ಪಾರ್ಕ್ ನಿರ್ಮಾಣ: ನಗರ ಪ್ರದೇಶಗಳಲ್ಲಿರುವ ಅರಣ್ಯ ಇಲಾಖೆಗೆ ಸೇರಿದ ಜಾಗಗಳಲ್ಲಿ 'ಟ್ರೀ ಪಾರ್ಕ್'ಗಳನ್ನು ನಿರ್ಮಾಣ ಮಾಡುವ ಮೂಲಕ ನಗರದ ಶ್ವಾಸಕೋಶವನ್ನು ಹಿಗ್ಗಿಸುವ ಕೆಲಸ ಮಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾವೇರಿ ನೀರು ಹರಿಸುವ ಕುರಿತ ಮೇಲ್ಮನವಿ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಇಡಿ ದಾಳಿಯಲ್ಲಿ ಸಿಕ್ಕ 2 ಕೋಟಿ ರೂ. ನಮಗೆ ದೊಡ್ಡ ಮೊತ್ತವಲ್ಲ; ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆಚಹಾ ಕಪ್ ರಸ್ತೆ ಬದಿ ಎಸೆದಿದ್ದನ್ನು ಪ್ರಶ್ನಿಸಿದ ಪೌರಕಾರ್ಮಿಕನ ಮೇಲೆ ಹಲ್ಲೆನಕಲಿ ಔಷಧ ಜಾಲ; ಏಕಕಾಲಕ್ಕೆ ಎಸ್‌ಐಟಿ ದಾಳಿ, ಕೋಟ್ಯಂತರ ಮೌಲ್ಯದ ಔಷಧ ಜಪ್ತಿ2028ರ ಚುನಾವಣೆ ಸ್ಪರ್ಧೆ ನಿರಾಕರಣೆ ಹೇಳಿಕೆ: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಕಿವಿಮಾತುರಸ್ತೆ ಗುಂಡಿ ಮುಚ್ಚಲು ಜೆಟ್ ಪ್ಯಾಚರ್: ಸಚಿವ ಕೃಷ್ಣಭೈರೇಗೌಡ ಚಾಲನೆಸಿಕ್ಕಿರುವುದು ನಮ್ಮದೇ ಹಣ, ಕಾನೂನು ಮೂಲಕ ವಾಪಸ್ ಪಡೆಯುತ್ತೇವೆ: ಸಚಿವ ಸತೀಶ್ ಜಾರಕಿಹೊಳಿನವೆಂಬರ್ 1ರೊಳಗೆ ಪರವಾನಗಿ ಇಲ್ಲದ ಅಕ್ರಮ ಬಂದೂಕು ಒಪ್ಪಿಸಿ: ಸಿಎಂ ಡಿ.ಕೆ ಶಿವಕುಮಾರ್ಇ.ಡಿ ದಾಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈವಾಡವಿಲ್ಲವಿದೇಶದಲ್ಲಿ ಹೂಡಿಕೆ ಸುಳ್ಳು, ಕುಟುಂಬದ ಹೆಸರು ಕೆಡಿಸಬೇಡಿ: ಬಾಲಚಂದ್ರ ಜಾರಕಿಹೊಳಿ