Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆ

ಚಂದ್ರವಳ್ಳಿ ನ್ಯೂಸ್, ಹರಿಹರ :
ನಗರದ ಸಾರ್ವಜನಿಕ ವಿನಾಯಕ ಸಂಘದ ವತಿಯಿಂದ ಆಯೋಜಿಸಲಾಗಿರುವ 64ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಭಾನುವಾರ ಗಾಂಧಿ ಮೈದಾನ ದಲ್ಲಿ ಹಂದರಗಂಭ (ಧ್ವಜ ಸ್ಥoಭ) ಪೂಜಾ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.

ಶಾಸಕ ಬಿ.ಪಿ.ಹರೀಶ್ ಅವರು ಹಂದರಗಂಭ ಪೂಜೆಯನ್ನು ನೆರವೇರಿಸುವ ಮೂಲಕ ಗಣೇಶೋತ್ಸವದ ಸಿದ್ಧತೆಗಳಿಗೆ ಚಾಲನೆ ನೀಡಿ, ಅರ್ಥಪೂರ್ಣ ಶ್ರದ್ದಾ-ಭಕ್ತಿಯಿಂದ ಎಲ್ಲರೂ ಸೇರಿ ಯಾವುದೇ ನ್ಯೂನತೆಗೆ ಎಡೆ ಮಾಡಿಕೊಡದೆ ಆಚರಿಸೋಣ ಎಂದು ಹೇಳಿದರು.

Advertisement

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ ನಂದಿಗಾವಿ ಶ್ರೀನಿವಾಸ್ ಮಾತನಾಡಿ , ಈ ಬಾರಿ ಗಣೇಶೋತ್ಸವವನ್ನು ವಿಶೇಷವಾಗಿ, ಅರ್ಥಪೂರ್ಣವಾಗಿ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಲು ನಿರ್ಧರಿಸಲಾಗಿದೆ. ಕೇದಾರನಾಥ ದೇವಾಲಯದ ವಿಶೇಷ ಮಾದರಿ ಪ್ರದರ್ಶನವನ್ನು ನಿರ್ಮಿಸಲಾಗುವುದು. ಉತ್ಸವವು ಶಿಸ್ತುಬದ್ಧವಾಗಿ ನಡೆಯಲು ಸಾರ್ವಜನಿಕರು ಅಗತ್ಯ ಸಹಕಾರ ಹಾಗೂ ಪ್ರೋತ್ಸಾಹ ನೀಡಬೇಕು ಎಂದು ಮನವಿ ಮಾಡಿದರು.

ಸಮಿತಿಯ ಅಧ್ಯಕ್ಷ ವಿಜಯ್ ಕುಮಾರ್ ಮಾತನಾಡಿ, ಸಾರ್ವಜನಿಕ ವಿನಾಯಕ ಸಂಘದ ವತಿಯಿಂದ ಕಳೆದ 63 ವರ್ಷಗಳಿಂದ ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಿಸಿ ಕೊಂಡು ಬರಲಾಗುತ್ತಿದೆ. 64ನೇ ವರ್ಷದ ಉತ್ಸವವನ್ನು ಇನ್ನಷ್ಟು ವಿಶೇಷವಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಎಲ್ಲಾ ವರ್ಗದ ಜನರು ಸಹಕಾರ ಮತ್ತು ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ಈ ಸಮಯದಲ್ಲಿ ಮರಾಠ ಸಮುದಾಯದ ನಿಗಮದ ಅಧ್ಯಕ್ಷ ಜಿ. ಎಚ್.ಮರಿಯೋಜಿರಾವ್, ಕೆಪಿಸಿಸಿ ವಕ್ತಾರ ಬಿ.ರೇವಣ ಸಿದ್ದಪ್ಪ, ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಚಂದ್ರಶೇಖರ್ ಪೂಜಾರ್, ನಿಕಟಪೂರ್ವ ಅಧ್ಯಕ್ಷ ಎಂ.ಬಿ. ಅಣ್ಣಪ್ಪ, ನಗರಸಭೆ ಮಾಜಿ ಸದಸ್ಯರಾದ ಶಂಕರ್ ಕಟಾವ್ಕರ್,ಎನ್.ರಜನಿಕಾಂತ್, ಎಸ್.ಎಂ.ವಸಂತ್ ಕುಮಾರ್, ಯೂತ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಿಖಿಲ್ ಕೊಂಡಜ್ಜಿ, ಆಮ್ ಆದ್ಮಿ ಪಕ್ಷದ ಗಣೇಶ್ ದುರ್ಗದ್, ಬಸವರಾಜ್ ಹಲಸುಬಾಳು, ಮುಖಂಡರಾದ ಭಾನುವಳ್ಳಿ ದಾದಾಪೀರ್, ಉಮರ್, ಅಲ್ತಾಫ್, ನಜೀರ್ ಖುರೇಶಿ, ಸಯ್ಯದ್ ಯೂಸುಫ್, ರೋಹಿತ್, ರಮೇಶ್ ಮಾನೆ, ಪ್ರೀತಮ್ ಬಾಬು, ಸಿದ್ದಪ್ಪ, ಮಂಜುನಾಥ್, ಸಂತೋಷ್ ನೋಟದವರ್ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ