Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ಪತ್ನಿಗೆ 25 ಲಕ್ಷ ರೂ ಚೆಕ್ ಹಸ್ತಾಂತರ

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಇತ್ತೀಚೆಗೆ ಆತ್ಮಹತ್ಯೆಗೆ ಶರಣಾಗಿದ್ದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶಿವಮೊಗ್ಗ ನಿವಾಸಿ ದಿವಂಗತ ಚಂದ್ರಶೇಖರನ್ ಅವರ ಕುಟುಂಬಕ್ಕೆ ಮುಖ್ಯಮಮತ್ರಿ ಸಿದ್ದರಾಮಯ್ಯ ಮಂಗಳವಾರ ೨೫ ಲಕ್ಷ ರೂಪಾಯಿಗಳ ಸಹಾಯಧನವನ್ನು ನೀಡಿದ್ದಾರೆ.

ಚಂದ್ರಶೇಖರ್ ಆತ್ಮಹತ್ಯೆ ನಂತರ ಅವರ ನಿವಾಸಕ್ಕೆ ತೆರಳಿದ್ದ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ಹಾಗೂ ಸರ್ಕಾರದಿಂದ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಭರವಸೆ ನೀಡಿದ್ದರು. ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ಮನವಿ ಮಾಡಿದ್ದೆನು. ಮನವಿಗೆ ಸ್ಪಂದಿಸಿದ ಸಿದ್ದರಾಮಯ್ಯ ಚೆಕ್ ಹಸ್ತಾಂತರಿಸಿದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ದೌರ್ಜನ್ಯ ನಿಷೇಧ ಕಾಯ್ದೆಯಡಿ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿರುವ ಹಿನ್ನಲೆಯಲ್ಲಿ ೮.೨೫ ಲಕ್ಷ ರೂಗಳನ್ನು ದಿವಂಗತ ಚಂದ್ರಶೇಖರನ್‌ರ ಪತ್ನಿ ಕವಿತಾ ಅವರಿಗೆ ಈಗಾಗಲೇ ಮಂಜೂರು ಮಾಡಿದ್ದಾರೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದಿಂದ ಪಾವತಿಸಬೇಕಾದ ಸಂಬಳ ಮತ್ತು ರಜೆಗೆ ಸಂಬಂಧಿಸಿದಂತೆ ೧,೪೧,೩೬೧ ರೂಗಳನ್ನು ಕವಿತಾ ಅವರ ಬ್ಯಾಂಕ್ ಖಾತೆಗೆ ಪಾವತಿಸಲಾಗಿದೆ.

ಮೃತರ ಮಗನಿಗೆ ಉದ್ಯೋಗ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು, ಈ ಕುರಿತು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆಂದು ಸಚಿವರು ತಿಳಿಸಿದ್ದಾರೆ.

ಈ ವೇಳೆ ಭೋವಿ ಪೀಠದ ಜಗದ್ಗುರು ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್, ಶಾಸಕ ಚನ್ನಬಸಪ್ಪ (ಚನ್ನಿ) ಉಪಸ್ಥಿತರಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಇಂದು ಕೌರವರ ಸ್ಥಾನದಲ್ಲಿ ಕಾಂಗ್ರೆಸ್': 2028ಕ್ಕೆ ರಾಜಕೀಯ 'ಕುರುಕ್ಷೇತ್ರ' ಯುದ್ಧ ಎಂದ ಸಿ.ಟಿ. ರವಿ  'ಬಳ್ಳಾರಿ ಚಲೋ'ಗೆ ಜನಸಾಗರದ ಬೆಂಬಲ; ಬುಡ್ಗ ಜಂಗಮ ಸಮಾಜದ ಸಮಸ್ಯೆಗಳಿಗೆ ಧ್ವನಿಯಾದ ಬಿ.ವೈ. ವಿಜಯೇಂದ್ರಥೇಲ್ಸ್ ಗ್ರೂಪ್‌ನಿಂದ ಕರ್ನಾಟಕದಲ್ಲಿ ಸೋರ್ಸಿಂಗ್, ಹೂಡಿಕೆ ವಿಸ್ತರಣೆಗೆ ಉತ್ಸುಕತೆ: ಸಚಿವ ಎಂ. ಬಿ. ಪಾಟೀಲ್ಕರ್ನಾಟಕದಲ್ಲಿ ಉತ್ಪಾದನೆ, ಸ್ಥಳೀಯ ಅಸೆಂಬ್ಲಿ ಘಟಕ ಸ್ಥಾಪನೆಗೆ ‘ಸೊಮ್ಫಿ’ಗೆ ಆಹ್ವಾನ: ಸಚಿವ ಎಂ. ಬಿ. ಪಾಟೀಲ್ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಸಮಾಲೋಚನೆ ನಡೆಸಿದ ಸಿ.ಎಂ ಡಿ.ಕೆ.ಶಿವಕುಮಾರ್ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಸಮಾಲೋಚನೆ ನಡೆಸಿದ ಸಿ.ಎಂ ಡಿ.ಕೆ.ಶಿವಕುಮಾರ್ ಸಾಕ್ಷರತೆಯೇ ಸಮರ್ಥ ಬದುಕಿನ ಅಡಿಪಾಯ: ಮುಖ್ಯೋಪಾಧ್ಯಾಯ ಟಿ.ಪಿ. ಉಮೇಶ್ನೈಸರ್ಗಿಕ ಕೃಷಿಗೆ ಉತ್ತೇಜನ-ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು-ನೂತನ ಜಿಲ್ಲಾಧಿಕಾರಿ ಎಸ್.ರಮ್ಯ ಶಾಲಾ ಹಂತದಲ್ಲೇ ತಂಬಾಕು, ಮಾದಕ ವ್ಯಸನದ ವಿರುದ್ಧ ಜಾಗೃತಿ ಅಗತ್ಯ