ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ಮೆಣಸಿ ಗ್ರಾಮದಲ್ಲಿ ವೃದ್ದ ದಂಪತಿಗಳಾದ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಇವರು ವಯೋವೃದ್ಧರಾಗಿದ್ದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಾಸಿಕ ಪಿಂಚಣಿ ಪಡೆಯುತ್ತಿದ್ದು ಮನೆಯಿಲ್ಲದೆ ಪರದಾಡುತ್ತಿದ್ದ ಇವರನ್ನು ಗುರುತಿಸಿ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮನೆ ಕಟ್ಟಿಸಿಕೊಡಲಾಗಿದ್ದು ಇಂದು ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು ಮತ್ತು ತಾ.ಪಂ ಮಾಜಿ ಅಧ್ಯಕ್ಷರಾದ ಕೃಷ್ಣಮೂರ್ತಿ ರವರು ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಮಹಾಲಿಂಗಯ್ಯ , ಜಿಲ್ಲಾ ನಿರ್ದೇಶಕರಾದ ಉಮಾರಬ್ಬ ಮೆಣಸಿ ಹಾಲಿನ ಡೈರಿ ಅಧ್ಯಕ್ಷರಾದ ಪಾಪಣ್ಣ ತಾಲೂಕು ಯೋಜನಾಧಿಕಾರಿ ದಿನೇಶ್ ಜ್ಞಾನವಿಕಾಸ ಯೋಜನಾಧಿಕಾರಿ ಶ್ರೀಮತಿ ಸಂಗೀತ ಶೌರ್ಯ ವಿಪತ್ತು ಘಟಕದ ಸದಸ್ಯರು ಮೇಲ್ವಿಚಾರಕರು, ಸೇವಾಪ್ರತಿನಿಧಿ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.




