Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಇಂದಿರಾ, ರಾಜೀವ್ ಗಾಂಧಿಗೆ ಮಾರ್ಗದರ್ಶಕರಾಗಿದ್ದ ನಾಯಕ ಹನುಮಂತಪ್ಪ: ಸಿಎಂ ಡಿಕೆ ಶಿವಕುಮಾರ್

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯದ ಹಿರಿಯ ರಾಜಕಾರಣಿ ಹಾಗೂ ಮಾಜಿ ರಾಜ್ಯಸಭಾ ಸದಸ್ಯರಾದ ಹನುಮಂತಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

ಚಿತ್ರದುರ್ಗದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹನುಮಂತಪ್ಪ ಅವರೊಂದಿಗಿನ ತಮ್ಮ ಸುದೀರ್ಘ ಒಡನಾಟವನ್ನು ನೆನಪಿಸಿಕೊಂಡರು.

Advertisement

​"1979 ರಿಂದಲೂ ಹನುಮಂತಪ್ಪ ಅವರು ನನಗೆ ಪರಿಚಿತರು. ಅವರು ರೈಲ್ವೇ ಕಮಿಷನ್ ಅಧ್ಯಕ್ಷರಾಗಿ, ಬಳಿಕ ರಾಜ್ಯಸಭಾ ಸದಸ್ಯರಾಗಿ ಮತ್ತು ವಿದ್ಯಾರ್ಥಿ ನಾಯಕರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ. ಅಂದು ನಾವು ಪಕ್ಕದ ರೂಂಗಳಲ್ಲೇ ಇದ್ದು ಒಟ್ಟಿಗೆ ಬೆಳೆದವರು. ಜಾಫರ್ ಷರೀಫ್ ಹಾಗೂ ರಾಜಗೋಪಾಲ್ ಅವರೊಂದಿಗೆ ನಮ್ಮ ಜಿಲ್ಲೆಯಿಂದ ರಾಜಕಾರಣ ಮಾಡಿದವರು," ಎಂದು ಸಿಎಂ ಸ್ಮರಿಸಿದರು.

​ಇಂದಿರಾ, ರಾಜೀವ್ ಗಾಂಧಿಗೆ ಮಾರ್ಗದರ್ಶಕರಾಗಿದ್ದ ನಾಯಕ:
ಹನುಮಂತಪ್ಪ ಅವರು ಕಾಂಗ್ರೆಸ್ ಪಕ್ಷದ ಸಂಸದೀಯ ಮಂಡಳಿಯ ಸದಸ್ಯರಾಗಿ ರಾಷ್ಟ್ರ ಮಟ್ಟದಲ್ಲಿ ಸೇವೆ ಸಲ್ಲಿಸಿದ್ದರು. ಇಂದಿರಾ ಗಾಂಧಿ
, ರಾಜೀವ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರಿಗೂ ಕೂಡ ವಿವಿಧ ಹಂತಗಳಲ್ಲಿ ಮಾರ್ಗದರ್ಶನ ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಲೋಕಸಭೆಗೆ ಮೂರು ಬಾರಿ ಆಯ್ಕೆಯಾಗಿದ್ದ ಅವರು, ಸಂಸತ್ತಿನಲ್ಲಿ ಸದಾ ಸಕ್ರಿಯರಾಗಿದ್ದರು ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

​ಚಿತ್ರದುರ್ಗದ ನೀರಾವರಿ ಯೋಜನೆಗಳಿಗೆ ಶ್ರಮಿಸಿದವರು:
ಚಿತ್ರದುರ್ಗ ಜಿಲ್ಲೆಯ ಕೃಷಿ ಹಾಗೂ ಭದ್ರಾ ಮೇಲ್ದಂಡೆ ಸೇರಿದಂತೆ ಹಲವು ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಹನುಮಂತಪ್ಪ ಅವರು ದೊಡ್ಡ ಹೋರಾಟ ನಡೆಸಿದ್ದರು. ಸಂಸತ್ತಿನಲ್ಲಿ ಮತ್ತು ಸರ್ಕಾರದ ಮಟ್ಟದಲ್ಲಿ ಜಿಲ್ಲೆಯ ಧ್ವನಿಯಾಗಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಪಕ್ಷದ ಸ್ವಂತ ಕಟ್ಟಡ ನಿರ್ಮಾಣಕ್ಕೆ ಮೊದಲ ಹೆಜ್ಜೆ ಇಟ್ಟವರೇ ಅವರು ಎಂದು ಸಿಎಂ ನೆನೆದರು.

​"ಅವರ ದೇಹ ಇಂದು ನಮ್ಮನ್ನಗಲಿರಬಹುದು, ಆದರೆ ಅವರ ಆಚಾರ, ವಿಚಾರ ಹಾಗೂ ತತ್ವಗಳು ಸದಾ ಜೀವಂತವಾಗಿರುತ್ತವೆ. ರೈಲ್ವೇ ಕಮಿಷನ್ ಚೇರ್ಮನ್ ಆಗಿದ್ದಾಗ ಅವರು ತಂದ ಪಾರದರ್ಶಕತೆ ಇಂದಿಗೂ ಮಾದರಿಯಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ," ಎಂದು ಸಿಎಂ ಶಿವಕುಮಾರ್ ಅವರು ಪ್ರಾರ್ಥಿಸಿದರು.

​ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಜಿ. ಪರಮೇಶ್ವರ್ ಹಾಗೂ ಸ್ಥಳೀಯ ಶಾಸಕರು ಉಪಸ್ಥಿತರಿದ್ದು, ಮೃತರ ಆತ್ಮಕ್ಕೆ ಗೌರವ ಸಲ್ಲಿಸಿದರು.

​ಬರ ಪರಿಸ್ಥಿತಿ ಕುರಿತು ಸಭೆ:
ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ಬರ ಪರಿಸ್ಥಿತಿಯ ಕುರಿತು ಪ್ರತಿಕ್ರಿಯಿಸಿದ ಸಿಎಂ
, "ಬೆಂಗಳೂರು ಡಿವಿಷನ್ ಮೀಟಿಂಗ್ ನಡೆಸಿ, ಬರ ನಿರ್ವಹಣೆ ಹಾಗೂ ರೈತರ ಹೋರಾಟಗಳ ಕುರಿತು ಡಿಸಿಎಂ ಅವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು," ಎಂದು ಭರವಸೆ ನೀಡಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು