ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ಕಛೇರಿಯಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸಿರುವ ದಲಿತ ಸಮುದಾಯದ ಅಧಿಕಾರಿಗಳಿಗೆ ಸವರ್ಣಿಯ ಸಮುದಾಯಕ್ಕೆ ಸೇರಿದ ಮುಖಂಡರು ಹಾಗೂ ಹಾಲಿ ಕರ್ತವ್ಯನಿರ್ವಹಿಸುತ್ತಿರುವ ಜನಪ್ರತಿನಿಧಿಗಳು ವಿನಾಕಾರಣ ಮಾನಸಿಕ ಕಿರುಕುಳ, ಹಿಂಸೆ ನೀಡುತ್ತಿದ್ದಾರೆ ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಆರೋಪಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದವರು.
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿಯನ್ನು 2021 ರಲ್ಲಿ ಗ್ರಾಮ ಪಂಚಾಯ್ತಿಯಿಂದ ಪಟ್ಟಣ ಪಂಚಾಯ್ತಿ ಮೇಲ್ದರ್ಜೆಗೆ ಏರಿಸಲಾಗಿತ್ತು. ಮಾರ್ಚ್ 2023 ರಿಂದ ಏಪ್ರಿಲ್ 2026ರ ವರೆಗೂ ದಲಿತ ಸಮುದಾಯಕ್ಕೆ ಸೇರಿದ ಶ್ರೀ. ಪಿ. ನರಸಿಂಹಮೂರ್ತಿ, ಮುಖ್ಯ ಅಧಿಕಾರಿಗಳು. ಶ್ರೀ. ಗಜೇಂದ್ರ, ಕಿರಿಯ ಅಭಿಯಂತರರು, ಶ್ರೀ. ಪಿ. ಉಮಾಶಂಕರ್, ಪ್ರಥಮ ದರ್ಜೆ ಸಹಾಯಕರು. ಶ್ರೀಮತಿ. ಕೀರ್ತಿಲೇಖ, ಕಿರಿಯ ಆರೋಗ್ಯ ನಿರೀಕ್ಷಕರು ಅಧಿಕಾರಿಗಳು ಕಾರ್ಯನಿರ್ವಹಿಸಿದ್ದಾರೆ. ಈ ಅವಧಿಯಲ್ಲಿ ಸಂಗ್ರಹವಾದ ಹಣ ಮತ್ತು ವೆಚ್ಚಗಳ ಬಗ್ಗೆ ಸಂಪೂರ್ಣ ಮಾಹಿತಿ ಲಭ್ಯವಿದೆ ಆದರೂ ಇತ್ತೀಚೆಗೆ ಈ ಅಧಿಕಾರಿಗಳ ಮೇಲೆ ಕೆಲವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಬೇಕಂತೆಲೆ ದಲಿತ ಸಮುದಾಯದ ಅಧಿಕಾರಿಗಳಿಗೆ ಸವರ್ಣೀಯ ಸಮುದಾಯಕ್ಕೆ ಸೇರಿದ ಮುಖಂಡರ ಮತ್ತು ಜನಪ್ರತಿನಿಧಿಗಳ ಕಿರುಕುಳ ನೀಡಲು ಮುಂದಾಗಿದ್ದು ಅವರ ಹಿಂಸೆ ತಾಳಲಾರದೆ ಅಧಿಕಾರಿಗಳು ಬೇರೆ ಕಡೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಈ ವರ್ತನೆಯನ್ನು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ ಎಂದರು.
ಕೆಲವು ಸವರ್ಣಿಯ ಸಮುದಾಯದ ಮುಖಂಡರು ಹಾಗೂ ಜನಪ್ರತಿನಿಧಿಗಳು ಜಾತಿ ಉದ್ದೇಶದಿಂದ ಈ ಅಧಿಕಾರಿಗಳಿಗೆ ತೊಂದರೆ ಕೊಡಬೇಕು ಎಂಬ ಉದ್ದೇಶದಿಂದಲೇ ಈ ಅಧಿಕಾರಿಗಳು ಕರ್ತವ್ಯ ನಿರ್ವಹಿಸಿದ ಅಧಿಕಾರವಧಿಯಲ್ಲಿ ವಿನಾಕಾರಣ ಬಹಳಷ್ಟು ಭ್ರಷ್ಟಾಚಾರ ನಡೆಸಿರುತ್ತಾರೆ. ಸರಿಯಾಗಿ ಕಾರ್ಯನಿರ್ವಹಿಸಿಲ್ಲ ಎಂದು ಸುಳ್ಳು ಆರೋಪಗಳನ್ನು ಮಾಡಿ ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದು, ಲೋಕಾಯುಕ್ತ ತನಿಖೆಗೆ ಒಳಪಡಿಸಿರುತ್ತಾರೆ. ಲೋಕಾಯುಕ್ತ ತನಿಖೆಗೆ ನಮ್ಮದೇನು ಅಡ್ಡಿಯಿಲ್ಲ ತನಿಖೆ ನಡೆಯಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಆದರೆ ದಲಿತ ಸಮುದಾಯದ ಅಧಿಕಾರಿಗಳನ್ನು ಗುರಿಯಾಗಿಟ್ಟುಕೊಂಡು ಸಾಮಾಜಿಕವಾಗಿ ಬಹಿರಂಗ ಹೇಳಿಕೆ ನೀಡುವುದು ಏಕವಚನದಲ್ಲಿ ಮಾತನಾಡುವುದು ಸರಿಯಲ್ಲ ಇದು ಈ ಕೂಡಲೇ ನಿಲ್ಲಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಪಕ್ಷದ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ಪಿ ಮೂರ್ತಿ, ದಲಿತ ಸಂಘರ್ಷ ಸಮಿತಿಯ (ಕೃಷ್ಣಪ್ಪ ಬಣ )ರಾಜ್ಯಾಧ್ಯಕ್ಷ ಕೊಡಿಗಲ್ ರಮೇಶ್, ಆಲ್ ಇಂಡಿಯಾ ಬಿ ಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದಿಗುಂದ ವೆಂಕಟೇಶ್, ಬೆಂಗಳೂರು ಗ್ರಾಮಂತರ ಜಿಲ್ಲಾಧ್ಯಕ್ಷ ಪಿ ಮಹಾದೇವ, ಬಸವರಾಜು, ನಂಜೇಶ್, ಸೇರಿದಂತೆ ಹಲವರು ಹಾಜರಿದ್ದರು.



