Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ, ಸಂಘ ಪರಿವಾರಿಗಳು ವ್ಯಸನಿ, ವಿಕೃತ ಮನಸ್ಸಿನವರು-ಹರಿಪ್ರಸಾದ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿ
, ಸಂಘ ಪರಿವಾರದವರು ವ್ಯಸನಿಗಳು, ವಿಕೃತ ಮನಸ್ಸಿನವರು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಗಾಧೀಜಿಯಿಂದ ಹಿಡಿದು ರಾಹುಲ್ ಗಾಂಧಿವರೆಗೆ ಬಿಜೆಪಿಯವರು ಸಂಘ ಪರಿವಾರದವರು ಅಪಪ್ರಚಾರ ಮಾಡಿಕೊಂಡು ಬಂದಿದ್ದಾರೆ. ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಲೆಕ್ಕಾಚಾರ ಹಾಕಿಯೇ ಹೇಳಿಕೆ ಕೊಟ್ಟಿದ್ದಾರೆ. ಅವರಿಗೆ ದಲಿತರು, ಕೆಳವರ್ಗದವರು, ಶೂದ್ರರು, ಬಡವರು, ಹಿಂದುಳಿದವರು, ದಲಿತರು ಸೇರಿ ಕೆಳಹಂತದ ಜನ ಬೇಕಾಗಿಲ್ಲ. ತಮ್ಮ ಅಡಿಯಾಳಾಗಿಯೇ ನೋಡುವ ಹುನ್ನಾರ ಎಂದು ಹರಿಪ್ರಸಾದ್ ಗಂಭೀರ ಆರೋಪ ಮಾಡಿದರು.

ಬಿಜೆಪಿಗರು ಹೇಳಿದ ತರ ರಾಹುಲ್ ಗಾಂಧಿ ಅಡಿಕ್ಟ್ ಆಗಿದ್ದರೆ 10 ಸಾವಿರ ಕಿಲೋ ಮೀಟರ್ ನಡೆಯೋದಕ್ಕೆ ಆಗುತ್ತಿರಲಿಲ್ಲ. ಈಗ ಅಂಬೇಡ್ಕರ್ ಬಗ್ಗೆಯೂ ಅಪಪ್ರಚಾರ ಮಾಡಿದ್ದಾರೆ ಎಂದು ಟೀಕಿಸಿದರು.
ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡನೀಯ. ಅವರ ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಾಳೆಯಿಂದ ಪ್ರತಿಭಟನೆ ಮಾಡಲಾಗುವುದು. ಅಮಿತ್ ಶಾ ಹೇಳಿಕೆ ಬಗ್ಗೆ ಪರಿಷತ್‌ನಲ್ಲಿ ಚರ್ಚೆಗೆ ಅವಕಾಶ ಕೇಳಿದ್ದೆ. ಆದರೆ ಬಿಜೆಪಿಯವರ ಗದ್ದಲದಿಂದ ಅದು ಸಾಧ್ಯವಾಗಿಲ್ಲ ಎಂದು ಅವರು ಹೇಳಿದರು.


ಸಂವಿಧಾನದಲ್ಲಿ ಮಹಿಳೆಯರಿಗೆ ಸಮಾನತೆ ಹಕ್ಕು, ದೀನದಲಿತರ ಮೀಸಲಾತಿ ವಿಚಾರದ ಬಗ್ಗೆ ಚರ್ಚೆ ಮಾಡೋದಕ್ಕೆ ಅವಕಾಶ ಇತ್ತು. ರಕ್ಷಣೆ ಅವಕಾಶಗಳನ್ನು ಕೊಟ್ಟಿರುವ ಸಂವಿಧಾನದ ಬಗ್ಗೆ ಚರ್ಚೆ ಮಾಡುವ ಬದಲು ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಪಮಾನ ಮಾಡಿದ್ದಾರೆ ಎಂದು ದೂರಿದರು.

ಅಂಬೇಡ್ಕರ್ ಅನ್ನುವ ಹೆಸರು ಬದಲು ದೇವರ ಹೆಸರು ಹೇಳಿದ್ರೆ ಸ್ವರ್ಗದಲ್ಲಿ ಜಾಗ ಸಿಗ್ತಿತ್ತು ಅಂತಾ ಅಮಿತ್ ಶಾ ಹೇಳಿದ್ದಾರೆ. ಇದಕ್ಕಾಗಿ ದೇಶದ ಜನರ ಕ್ಷಮೆ ಕೇಳಬೇಕು. ಸಾವರ್ಕರ್, ಗೋವಲ್ಕರ್ ಅವರು ರಾಷ್ಟ್ರಧ್ವಜ, ಸಂವಿಧಾನವನ್ನ ಒಪ್ಪಿರಲಿಲ್ಲ. ಇವರ ಕಚೇರಿಗಳಲ್ಲಿ 52 ವರ್ಷಗಳ ಕಾಲ ರಾಷ್ಟ್ರಧ್ವಜ ಹಾರಿಸಿರಲಿಲ್ಲ. ಇದು ಇವರ ಹಿಡನ್ ಅಜೆಂಡಾವಾಗಿದೆ. ಆರ್​ಎಸ್​​ಎಸ್​​ಗೆ 100 ವರ್ಷ ತುಂಬುತ್ತಿದೆ, ಹಾಗಾಗಿ ಹೀಗೆಲ್ಲಾ ಮಾಡುತ್ತಿದ್ದಾರೆ. ಜಾತಿ ಜನಗಣತಿಗೆ ಪ್ರಧಾನಿ ಮೋದಿ ವಿರೋಧ ಮಾಡುತ್ತಿದ್ದಾರೆ. ಜಾತಿ ವ್ಯವಸ್ಥೆಯಲ್ಲಿ ಆರ್​ಎಸ್​ಎಸ್​ ನಂಬಿಕೆ ಇಟ್ಟಿದೆ ಎಂದು ಹರಿಪ್ರಸಾದ್ ಆರೋಪಿಸಿದರು.

 ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸಿ.ಟಿ.ರವಿ ಅವರನ್ನು ಎನ್​​ಕೌಂಟರ್ ಮಾಡುತ್ತಿದ್ರು ಎನ್ನುವ ಹೇಳಿಕೆಗೆ ಪ್ರತಿಕ್ರಿಯಿಸಿ, ಪ್ರಲ್ಹಾದ್ ಜೋಶಿ ಅವರು ಅಮಿತ್ ಶಾ ಸಂತತಿಯವರು. ಫೇಕ್ ಎನ್​​ಕೌಂಟರ್​​ನಲ್ಲಿ ಅಮಿತ್ ಶಾ ಅವರನ್ನ ಗಡಿಪಾರು ಮಾಡಿದ್ರು. ಅವರು ಮಾಡಿದ್ದನ್ನ ಜೋಶಿ ಹೇಳಿದ್ದಾರೆ ಎಂದು ಲೇವಡಿ ಮಾಡಿದರು.

ಸಿ. ಟಿ. ರವಿ ಅವರು ಅಶ್ಲೀಲ ಪದ ಬಳಕೆ ಮಾಡಿರುವ ಬಗ್ಗೆ ಯಾವುದೇ ದಾಖಲಾತಿಗಳಿಲ್ಲ ಎಂಬ ಸಭಾಪತಿ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ರೀತಿ ಆಗಬಾರದಿತ್ತು. ಮೇಲ್ಮನೆಯಲ್ಲಿ ಇಂತಹ ಘಟನೆ ಮರುಕಳಿಸಬಾರದು. ಸಭಾಪತಿಗಳ ಹೇಳಿಕೆಗೆ ನಾವು ಏನು ಹೇಳುವುದಕ್ಕೆ ಆಗುವುದಿಲ್ಲ. ಸಭಾಪತಿಗಳು ಸಾಂವಿಧಾನಿಕ ಸ್ಥಾನದಲ್ಲಿದ್ದಾರೆ ಎಂದು ಹರಿಪ್ರಸಾದ್ ಹೇಳಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ