Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಡವರ ಅನ್ನಕ್ಕೆ ಕಾಂಗ್ರೆಸ್ ಕನ್ನ-ಹರೀಶ್ ಗೌಡ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ಬಡವರ
BPL ಪಡಿತರ ಕಾರ್ಡ್ಗಳನ್ನು ರದ್ದುಪಡಿಸುವ ಕ್ರಮವು ಖಂಡನೀಯವಾಗಿದ್ದು, ಬಡವರ ಅನ್ನಕ್ಕೆ ಕನ್ನಹಾಕುತ್ತಿದ್ದು ಕೂಡಲೇ ಈ ಆದೇಶ ವಾಪಸ್ಸು ಪಡೆಯುವಂತೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಒತ್ತಾಯಿಸಿದ್ದಾರೆ‌.

ಈ ಕುರಿತು ಹೇಳಿಕೆ ನೀಡಿದ ಅವರು, ಜನರಿಗೆ ಅನ್ನ ಕೊಡಬೇಕಿದ್ದ ಸರ್ಕಾರವೇ ಬಡವರ ಅನ್ನಕ್ಕೆ ಕನ್ನ ಹಾಕುವ ಕೆಲಸ ಮಾಡುತ್ತಿದೆ. ಯಾರೂ ಹಸಿವಿನಿಂದ ಸಾಯಬಾರದು ಎಂಬ ಪ್ರಜ್ಞೆ ಸರ್ಕಾರಕ್ಕೆ ಇರಬೇಕು ಎಂದು ಕಿಡಿಕಾರಿದರು.

ಬಿಪಿಎಲ್‌ಕಾರ್ಡ್‌ಕಳೆದುಕೊಂಡವರು ಯಾರೂ ಶ್ರೀಮಂತರಲ್ಲ, ಕಾರಿನಲ್ಲಿ ಓಡಾಡುವುದಿಲ್ಲ. ಗಾರ್ಮೆಂಟ್‌ಕೆಲಸಕ್ಕೆ ಹೋಗುವ ಕುಟುಂಬ, ಅಂಗವಿಕಲರು, ವೃದ್ಧರು ಹೆಚ್ಚಾಗಿ ತೊಂದರೆಗೆ ಒಳಗಾಗುತ್ತಿದ್ದಾರೆ‌. ಇಂತಹ ಬಡ ಕುಟುಂಬದ ಜನರ ಮನೆಗೆ ಸಿಎಂ ಸಿದ್ದರಾಮಯ್ಯ ಕನ್ನ ಹಾಕಿದ್ದಾರೆ ಎಂದು ದೂರಿದರು.

ರಾಜ್ಯದಲ್ಲಿ ಸುಮಾರು 11 ಲಕ್ಷ ಬಿಪಿಎಲ್‌ಕಾರ್ಡ್‌ಗಳನ್ನು ರದ್ದುಗೊಳಿಸಲು ಕಾಂಗ್ರೆಸ್‌ಸರ್ಕಾರವು ಮುಂದಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಯಾವುದೇ ಪರಿಶೀಲನೆಯಾಗಲಿ ತಜ್ಞರ ಮಾರ್ಗದರ್ಶನವಾಗಲಿ ಪಡೆಯದೇ ಅವೈಜ್ಞಾನಿಕವಾದ ಆದೇಶ ಜಾರಿ ಮಾಡಲು ಹೊರಟಿದ್ದಾರೆ. ಈ ಮೂಲಕ ಬಿಪಿಎಲ್ ಕಾರ್ಡ್ ರದ್ದು ಮಾಡಿದರೆ ಬಡವರು, ರೈತರು, ಸಾಮಾನ್ಯ ವರ್ಗದ ಜನರು ಆರ್ಥಿಕ ಕಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂದು ಹರೀಶ್ ಗೌಡ ಹೇಳಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ