Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಬಂದ್

Advertisement
ಚಂದ್ರವಳ್ಳಿ ನ್ಯೂಸ್, ಹಾಸನ:
ವರ್ಷಕ್ಕೊಂದು ಬಾರಿ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಸಾರ್ವಜನಿಕರ ದರ್ಶನಕ್ಕೆ ಬುಧವಾರವೇ ಬಂದ್ ಆಗಿದೆ.


ಅಕ್ಟೋಬರ್-23 ರಂದು ಗುರುವಾರ ದೇಗುಲದ ಬಾಗಿಲನ್ನು ಸಂಪೂರ್ಣವಾಗಿ ಮುಚ್ಚಲಾಗಿದ್ದು, ಮುಂದಿನ ವರ್ಷ ಅಕ್ಟೋಬರ್-29-10-2026 ರಿಂದ  ನವೆಂಬರ್-11-11-2026 ರವರೆಗೆ ತೆರೆಯಲಿದೆ. ಈ ವರ್ಷ ಭೇಟಿ ನೀಡಿದ ಭಕ್ತರ ಸಂಖ್ಯೆ ಕೂಡ ಹೆಚ್ಚಾಗಿದ್ದು, ಆದಾಯವೂ ಕಳೆದ ವರ್ಷಕ್ಕಿಂತ ಹೆಚ್ಚಾಗಿದೆ.


ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ 2025 ನೇ ವರ್ಷದ ಹಾಸನಾಂಬೆ ದರ್ಶನ ಮುಕ್ತಾಯ ಆಗಿದೆ. ಬುಧವಾರ ಸಾರ್ವಜನಿಕ ದರ್ಶನ ಮುಗಿದಿದ್ದು, ಉಳಿದಂತೆ ಸ್ಥಳೀಯರಿಗೆ ರಾತ್ರಿ ಕೂಡ ದರ್ಶನ ಆಗಿದೆ.

ಶಾಸ್ತ್ರದ ಪ್ರಕಾರ ದೇವಾಲಯದ ಬಾಗಿಲು ಬಂದ್ ಮಾಡಲಾಗಿದೆ. ಎಲ್ಲರ ಸಹಕಾರದಿಂದ, ಶಾಸಕರು, ಸಂಸದರ ಸಹಕಾರ ಹಾಗೂ ಜಿಲ್ಲಾಡಳಿತ ಸಹಕಾರದಿಂದ ಹಾಸನಾಂಬೆ ದರ್ಶನೋತ್ಸವ ಯಶಸ್ವಿಯಾಗಿ ನಡೆದಿದೆ. ಅದಿಕಾರಿಗಳು ಶ್ರಮ‌ವಹಿಸಿ ಕೆಲಸ ಮಾಡಿದ್ದಾರೆ ಎಂದರು.

ಹಾಸನಾಂಬೆ ಉತ್ಸವ ಯಶಸ್ವಿಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಎಂದ ಸಚಿವರು, ಹಿಂದಿನ ಎಲ್ಲ ವರ್ಷಗಳಿಗಿಂತ ಈ ಬಾರಿ ಅತ್ಯಂತ ಯಶಸ್ವಿಯಾಗಿ ದರ್ಶನ ಭಾಗ್ಯ ಎಲ್ಲರಿಗೂ ದೊರೆತಿದೆ. ಸಾಮಾನ್ಯ ಜನರಿಗೆ ನೂಕು ನುಗ್ಗಲು ಇಲ್ಲದೆ ಸರಳವಾಗಿ ಭಕ್ತರ ದರ್ಶನ ಆಗಿದೆ. ಇದು ನಮಗೆ ಅತೀವ ಸಂತೋಷ ನೀಡಿದೆ. ಎಲ್ಲಾ ಜನರು ನಗುನಗುತ್ತಾ ದರ್ಶನ ಮಾಡಿದ್ದಾರೆ ಎಂದು ಸಚಿವರು ತಿಳಿಸಿದರು.


ರಾಜ್ಯದ ಮೂಲೆ ಮೂಲೆಗಳಿಂದ, ಹೊರ ರಾಜ್ಯಗಳಿಂದ ಭಕ್ತರು ಬಂದಿದ್ದಾರೆ. ಹಾಸನದ ಕೀರ್ತಿ ಎಲ್ಲೆಡೆ ಪ್ರಜ್ಚಲಿಸಿದೆ. ಈ ವರ್ಷ 26,13,000 ಭಕ್ತರು ದರ್ಶನ ಮಾಡಿದ್ದಾರೆ. ಟಿಕೆಟ್ ಹಾಗೂ ಲಡ್ಡು ಮಾರಾಟದಿಂದ 2,18,20,000 ರೂ. ಆದಾಯ ಬಂದಿದೆ. ಕಳೆದ ವರ್ಷಕ್ಕಿಂದ ಆದಾಯ ಕೂಡ ಹೆಚ್ಚಾಗಿದೆ ಎಂದು ಸಚಿವರು ತಿಳಿಸಿದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ