Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿ. ಸೋಮಣ್ಣ ಜಂಟಿ ರೈಲು ಪರಿವೀಕ್ಷಣೆ: ಸಾರ್ವಜನಿಕರ ಅಹವಾಲು ಸ್ವೀಕಾರ

Advertisement
Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಇಂದು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಮೈಸೂರು ನಿಲ್ದಾಣದವರೆಗೆ ವಿಂಡೋ ಟ್ರೈಲಿಂಗ್ ಮೂಲಕ ರೈಲು ಮಾರ್ಗದ ಸಮಗ್ರ ಪರಿವೀಕ್ಷಣೆ ನಡೆಸಿದರು.


​ಅಭಿವೃದ್ಧಿ ಕಾಮಗಾರಿಗಳ ಪರಾಮರ್ಶೆ:
ಬೆಂಗಳೂರಿನಿಂದ ರಾಮನಗರ
, ಚನ್ನಪಟ್ಟಣ, ಮಂಡ್ಯ ಮಾರ್ಗವಾಗಿ ಮೈಸೂರುವರೆಗೆ ಸಾಗುವ ಈ ಪ್ರಮುಖ ರೈಲು ಮಾರ್ಗದಲ್ಲಿ ಪ್ರಸ್ತುತ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಸಚಿವರು ವೀಕ್ಷಿಸಿದರು. ಮುಂದಿನ ದಿನಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೈಗೊಳ್ಳಬೇಕಿರುವ ಜನೋಪಯೋಗಿ ಕೆಲಸಗಳ ಬಗ್ಗೆಯೂ ಈ ಸಂದರ್ಭದಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು.

​ಜನರ ಅಹವಾಲು ಆಲಿಕೆ:
ಪರಿವೀಕ್ಷಣೆಯ ವೇಳೆ ಪ್ರತಿಯೊಂದು ರೈಲು ನಿಲ್ದಾಣಗಳಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿದ ಸಚಿವರು
, ರೈಲ್ವೆ ಇಲಾಖೆಗೆ ಸಂಬಂಧಿಸಿದ ಸ್ಥಳೀಯ ಸಮಸ್ಯೆಗಳು ಮತ್ತು ಬೇಡಿಕೆಗಳ ಬಗ್ಗೆ ಅಹವಾಲುಗಳನ್ನು ಸ್ವೀಕರಿಸಿದರು. ರೈಲ್ವೆ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಿದರು.

​ಕೇಂದ್ರ ಸರ್ಕಾರಕ್ಕೆ ಅಭಿನಂದನೆ:
"ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತೀಯ ರೈಲ್ವೆ ವಲಯವು ಅದ್ಭುತವಾಗಿ ರೂಪಾಂತರಗೊಳ್ಳುತ್ತಿದೆ. ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಶ್ಲಾಘನೀಯ," ಎಂದು ಹೆಚ್.ಡಿ. ಕುಮಾರಸ್ವಾಮಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೆ, ರಾಜ್ಯದ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೂ ಈ ಸಂದರ್ಭದಲ್ಲಿ ಧನ್ಯವಾದ ಅರ್ಪಿಸಿದರು.

​ಗಣ್ಯರ ಉಪಸ್ಥಿತಿ:
ಈ ಪರಿವೀಕ್ಷಣಾ ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
, ಮಾಜಿ ಸಚಿವರಾದ ಡಿ.ಸಿ. ತಮ್ಮಣ್ಣ, ಸಿ.ಎಸ್. ಪುಟ್ಟರಾಜು, ಸಾ.ರಾ. ಮಹೇಶ್, ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಹಾಗೂ ಈ ಭಾಗದ ಪ್ರಮುಖ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!