Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸ್ಟಿಂಗ್ ಆಪರೇಷನ್ ರೂವಾರಿ ರೌಡಿಶೀಟರ್ ಫೋಟೋ ಬಿಡುಗಡೆ ಮಾಡಿದ ಹೆಚ್.ಡಿ.ಕುಮಾರಸ್ವಾಮಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ‘ಸ್ಟಿಂಗ್ ಆಪರೇಷನ್’ ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ, ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ, ಸ್ಟಿಂಗ್ ಆಪರೇಷನ್ ಮಾಡಿರುವ ಪ್ರಮುಖ ಆರೋಪಿಯ ಫೋಟೋ ಬಿಡುಗಡೆ ಮಾಡುವ ಮೂಲಕ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದರು.

ಜೆಡಿಎಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿದ ಕುಮಾರಸ್ವಾಮಿ, ಬಾಗೇಪಲ್ಲಿ ಮೂಲದ ಪ್ರಶಾಂತ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಜೊತೆಗಿರುವ ಆಪ್ತ ಫೋಟೋವನ್ನು ಬಿಡುಗಡೆ ಮಾಡಿದರು. "ಸುರ್ಜೇವಾಲಾ ಜೊತೆ ರೌಡಿಶೀಟರ್ ಪ್ರಶಾಂತ್ ಆತ್ಮೀಯವಾಗಿ ತಬ್ಬಿಕೊಂಡು ನಿಂತಿದ್ದಾನೆ. ಈತನನ್ನು ವಶಕ್ಕೆ ಪಡೆದು, ಬೆದರಿಸಿ ನನ್ನ ಹೆಸರನ್ನು ಹೇಳಿಸಲು ಸಂಚು ರೂಪಿಸಲಾಗಿದೆ.

 ಅಸಲಿ '420'ಗಳು ವಿಧಾನಸೌಧದಲ್ಲಿ ಕುಳಿತಿದ್ದಾರೆ. ನನ್ನ ಹಾಗೂ ನನ್ನ ಕಾರ್ಯಕರ್ತರ ತನಿಖೆ ಮಾಡುತ್ತೇವೆ ಎನ್ನುತ್ತಿದ್ದಾರೆ. ಅಧಿಕಾರ ಇದೆ ಎಂದು ಯಾರ ಕುಟುಂಬವನ್ನಾದರೂ ಹಾಳು ಮಾಡುತ್ತೀರಾ? ಮೊದಲು ಗೃಹ ಸಚಿವರು ತಮ್ಮ ನಾಲಿಗೆಗೆ ಲಗಾಮು ಹಾಕಿಕೊಂಡು ಮಾತನಾಡಲಿ" ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸ್ ಕಚೇರಿ ಮೆಟ್ಟಿಲುಗಳ ಮೇಲೆ ಧರಣಿ:
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಮೆಟ್ಟಿಲುಗಳ ಮೇಲೆಯೇ ಕುಳಿತು ಸ್ವಲ್ಪ ಕಾಲ ಧರಣಿ ನಡೆಸಿದ ಕುಮಾರಸ್ವಾಮಿ, "ತನಿಖೆ ಮಾಡುವುದಿದ್ದರೆ ನನ್ನಿಂದಲೇ ಶುರುಮಾಡಿ. ನಮ್ಮ ಕಾರ್ಯಕರ್ತರ ಮೇಲೇಕೆ ಪ್ರಹಾರ? ನಾನು ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೂ ಸಿದ್ಧನಿದ್ದೇನೆ. ಅಧಿಕಾರಿಗಳ ಬಗ್ಗೆ ನನಗೆ ಗೌರವವಿದೆ, ಆದರೆ ಸರ್ಕಾರದ ಒತ್ತಡಕ್ಕೆ ನೀವು ಸಿಲುಕಿದ್ದೀರಿ. ಗೃಹ ಸಚಿವರು ಇಲ್ಲಿಗೆ ಬಂದು ಸಮಜಾಯಿಷಿ ನೀಡಲಿ, ಅಲ್ಲಿಯವರೆಗೂ ಎದ್ದೇಳಲ್ಲ" ಎಂದು ಪಟ್ಟು ಹಿಡಿದರು. ಅಲ್ಲದೆ, ಇಷ್ಟೆಲ್ಲ ಆಗುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದಿಂದ ಯಾವುದೇ ಭರವಸೆ ಸಿಕ್ಕಿಲ್ಲ, ಕೇವಲ ಕಮಿಷನರ್ ಅವರ ಮನವಿಗೆ ಗೌರವ ಕೊಟ್ಟು ಧರಣಿ ನಿಲ್ಲಿಸಿದ್ದೇನೆ ಎಂದರು. ಮಾಧ್ಯಮದ ಹೆಸರನ್ನು ದುರುಪಯೋಗಪಡಿಸಿಕೊಂಡ ಮುಖ್ಯ ಆರೋಪಿಯನ್ನು ತಕ್ಷಣ ಬಂಧಿಸಬೇಕು ಮತ್ತು ಸಿಎಂ ಜೊತೆಗೂಡಿ ಆತ ಏನೇನು ಮಾಡಿದ್ದಾನೆ ಎಂಬುದು ಹೊರಬರಬೇಕು ಎಂದು ಒತ್ತಾಯಿಸಿದರು.

ಪೊಲೀಸರಿಗೆ ಎರಡು ದಿನಗಳ ಗಡುವು
ಪೊಲೀಸರಿಗೆ ಎರಡು ದಿನಗಳ ಗಡುವು ನೀಡುವುದಾಗಿ ತಿಳಿಸಿದ ಹೆಚ್‌ಡಿಕೆ, ಅಷ್ಟರಲ್ಲಿ ಪ್ರಮುಖ ಆರೋಪಿ ಅರೆಸ್ಟ್ ಆಗದಿದ್ದರೆ ಎಲ್ಲಾ ಶಾಸಕರ ಸಭೆ ಕರೆದು ರಾಜ್ಯವ್ಯಾಪಿ ಬೃಹತ್ ಹೋರಾಟ ರೂಪಿಸುವುದಾಗಿ ಎಚ್ಚರಿಕೆ ನೀಡಿದರು. ಜೊತೆಗೆ, ನಾಳೆ ಕೆಪಿಎಸ್‌ಸಿ ಆಕಾಂಕ್ಷಿಗಳೊಂದಿಗೆ ಸುದೀರ್ಘ ಸಂವಾದ ನಡೆಸುವುದಾಗಿ ತಿಳಿಸಿದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ಕಾರದ ದ್ವಂದ್ವ ನೀತಿ ಅಂತ್ಯಗೊಳ್ಳಲಿ; ಮದ್ಯ ಮಾರಾಟ ರದ್ದುಗೊಳಿಸಲು ಕ್ರಮ ಕೈಗೊಳ್ಳಲಿಕಲ್ಯಾಣದ ಸಂಕಟದಲ್ಲಿ ಮರಣವೇ ಮಹಾನವಮಿಸಿಜೆಪಿಗೆ ಕಾಂಗ್ರೆಸ್ ನೆರವು: 'ಖಜಾನೆ ಎಟಿಎಂ ಆಯಿತೇ?' - ಆರ್. ಅಶೋಕ್ ತೀವ್ರ ವಾಗ್ದಾಳಿಎ-ಖಾತಾ ಆಸ್ತಿ ಮಾಲೀಕರಿಗೆ ಮನೆಬಾಗಿಲಲ್ಲೇ ಆನ್‌ಲೈನ್ ಮೂಲಕ ಇ-ಖಾತಾ ಪಡೆಯಲು ಅವಕಾಶ!ಗೂಗಲ್ ಮ್ಯಾಪ್ ಹೇಳಿದಂತೆ ಕೇಳಿ ದಾರಿತಪ್ಪಿ ಕಾರು ಸಮೇತ ಕಂದಕಕ್ಕೆ ಬಿದ್ದ ಇನ್ಫೋಸಿಸ್ ಟೆಕ್ಕಿಗಳು!ಲೈಂಗಿಕ ಕಿರುಕುಳ ಆರೋಪ: ತಲೆಮರೆಸಿಕೊಂಡಿದ್ದ ಚರ್ಚ್‌ಪಾದ್ರಿ ಪೋಕ್ಸೋ ಅಡಿಯಲ್ಲಿ ಬಂಧನಹಾರನಕಣಿವೆ ರಂಗನಾಥಸ್ವಾಮಿ ಅಂಬಿನೋತ್ಸವ: ಬುಡಕಟ್ಟು ಸಂಸ್ಕೃತಿ ಮತ್ತು ಪವಾಡದ ಅಪೂರ್ವ ಧಾರ್ಮಿಕ ಸಂಗಮಪ್ರಜ್ಞೆಯ ಜಾಗೃತಿ, ಬದುಕಿನ ಸಂಸ್ಕೃತಿ:ತಂತ್ರಜ್ಞಾನದ ಅತಿರೇಕ -ಸಾಮಾಜಿಕ ಸಾಮರಸ್ಯಕ್ಕೆ ಗಂಡಾಂತರ— ಜಾಗೃತಿ ಅಗತ್ಯಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ