Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೊಕಾರೊ ಸ್ಟೀಲ್ ಪ್ಲಾಂಟ್‌ಗೆ ಭೇಟಿ ನೀಡಿ ಪರಿಶೀಲಿಸಿದ ಹೆಚ್.ಡಿ ಕುಮಾರಸ್ವಾಮಿ

Advertisement
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಐಕಾನಿಕ್ ಬೊಕಾರೊ ಸ್ಟೀಲ್ ಪ್ಲಾಂಟ್‌ಗೆ ಕೇಂದ್ರ ಸರ್ಕಾರದ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡಿ ಮತ್ತು ಪರಿಶೀಲಿಸಲು ಜಾರ್ಖಂಡ್‌ಗೆ ಆಗಮಿಸಿದರು.


ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರು ಜಾರ್ಖಂಡ್ ರಾಜ್ಯದಿಂದ ಗಾರ್ಡ್ ಆಫ್ ಆನರ್ ಸ್ವೀಕರಿಸಿ ಗೌರವಿಸಲ್ಪಟ್ಟರು. ರಾಜ್ಯ ಸರ್ಕಾರ ಕುಮಾರ ಸ್ವಾಮಿ ಅವರಿಗೆ ಆತ್ಮೀಯ ಸ್ವಾಗತ ನೀಡಿ ಅದ್ಧೂರಿಯಾಗಿ ಆತಿಥ್ಯ ನೀಡಿದ್ದಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕೃತಜ್ಞತೆಗಳನ್ನು ಸಲ್ಲಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಮಾರ್ಗದರ್ಶನದಲ್ಲಿ, 2030 ರ ವೇಳೆಗೆ 300 MT ಉಕ್ಕಿನ ಉತ್ಪಾದನೆಯ ಗುರಿ ಸಾಧಿಸಲು ಮತ್ತು AtmanirbharBharat ಅಡಿಯಲ್ಲಿ ಭಾರತದ ಸ್ವಾವಲಂಬನೆಯನ್ನು ಬಲಪಡಿಸಲು ಬದ್ಧರಾಗಿದ್ದೇವೆ. ಈ ಮಿಷನ್ ಯೋಜನೆಯನ್ನು ಅನುಷ್ಠಾನ ಮಾಡಲು ಪರಿಣಾಮಕಾರಿ ಚರ್ಚೆಗಳಿಗಾಗಿ ಉತ್ಸುಕನಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಕುಮಾರಸ್ವಾಮಿ ಭೇಟಿ ನೀಡಿದ ಸಂದರ್ಭದಲ್ಲಿ ಬೊಕಾರೊ ಸ್ಟೀಲ್ ಪ್ಲಾಂಟ್‌ನ ಆಡಳಿತ ಮಂಡಳಿಯ ಅಧಿಕಾರಿಗಳು ಸಂಪೂರ್ಣ ಸ್ಥಾವರದ ವಿವರವಾದ 3D ನಕ್ಷೆಯನ್ನು ಪ್ರಸ್ತುತಪಡಿಸಿದರು. ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ಸ್ಥಳದಲ್ಲಿ ದೃಢವಾದ ಸುರಕ್ಷತಾ ಕಾರ್ಯವಿಧಾನಗಳ ಬಗ್ಗೆ ಸಮಗ್ರವಾಗಿ ಕೈಗೊಳ್ಳುವಂತೆ ವಿವರಿಸಿದರು. 

ಬೊಕಾರೊ ಸ್ಟೀಲ್ ಉನ್ನತ-ಗುಣಮಟ್ಟದ DMR ಪ್ಲೇಟ್‌ಗಳನ್ನು ತಯಾರಿಸುತ್ತಿದೆ ಎಂದು ತಿಳಿಸಿದ ಕುಮಾರಸ್ವಾಮಿ ರಕ್ಷಣಾ ವಲಯವನ್ನು ವಿಶೇಷವಾಗಿ ಭಾರತೀಯ ರಕ್ಷಣಾ ವಲಯವನ್ನು ಬೆಂಬಲಿಸುತ್ತದೆ. ಇದು SteelMinIndia ಮತ್ತು AtmanirbharBharat ಅಡಿಯಲ್ಲಿ ಭಾರತದ ಸ್ವಾವಲಂಬನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದರು.



ಈ ಸಂದರ್ಭದಲ್ಲಿ ಸ್ಟೀಲ್ ಮತ್ತು ಹೆವಿ ಇಂಡಸ್ಟ್ರೀಸ್  ವರ್ಮಾ ಮತ್ತು SAIL CMD ಅಮರೇಂದು ಪ್ರಕಾಶ್ ಸೇರಿದಂತೆ ಮತ್ತಿತರರು ಜೊತೆಗಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ