ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜನತಾ ದಳ (ಜಾತ್ಯತೀತ) ಪಕ್ಷದ ಕೇಂದ್ರ ಕಚೇರಿಯಾದ ಜೆ.ಪಿ. ಭವನದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದರು.
ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ತಮ್ಮ ಕುಂದುಕೊರತೆಗಳು, ವೈಯಕ್ತಿಕ ಮತ್ತು ಸ್ಥಳೀಯ ಸಮಸ್ಯೆಗಳ ಕುರಿತು ಮನವಿ ಪತ್ರಗಳನ್ನು ಸಲ್ಲಿಸಿದರು. ಪ್ರತಿಯೊಬ್ಬರ ಮನವಿಯನ್ನು ಆಲಿಸಿದ ಕುಮಾರಸ್ವಾಮಿ ಅವರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಇದೇ ವೇಳೆ ಮಾತನಾಡಿದ ಅವರು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ತಮ್ಮ ಮೊದಲ ಆದ್ಯತೆಯಾಗಿದ್ದು, ಜನರ ಧ್ವನಿಯಾಗಿ ಕಾರ್ಯನಿರ್ವಹಿಸಲು ಜೆ.ಡಿ.ಎಸ್ ಕಚೇರಿ ಸದಾ ಬದ್ಧವಾಗಿದೆ ಎಂದು ಹೇಳಿದರು.




