ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು.
ಈ ಮಹತ್ವದ ಭೇಟಿಯ ಸಂದರ್ಭದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು.
ಸಭೆಯಲ್ಲಿ ರಾಜ್ಯದ ಪ್ರಸ್ತುತ ರಾಜಕೀಯ ವಿದ್ಯಮಾನಗಳು, ಇತ್ತೀಚಿನ ಬೆಳವಣಿಗೆಗಳು ಹಾಗೂ ಮುಂಬರುವ ರಾಜಕೀಯ ತಂತ್ರಗಾರಿಕೆಗಳ ಕುರಿತು ಎರಡೂ ಪಕ್ಷಗಳ ನಾಯಕರು ವಿಸ್ತೃತವಾಗಿ ಚರ್ಚಿಸಿದರು. ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮತ್ತು ಕರ್ನಾಟಕದ ಜನರ ಹಿತದೃಷ್ಟಿಯಿಂದ ಒಟ್ಟಾಗಿ ಕಾರ್ಯನಿರ್ವಹಿಸುವ ಬಗ್ಗೆ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು.




