Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕಮಗಳೂರಿನಲ್ಲಿ ತಲೆ ಎತ್ತಿದ ಮಂಗನ ಕಾಯಿಲೆ

Advertisement
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ
ಭೀತಿ ಮತ್ತೆ ಆವರಿಸಿದೆ. ವರ್ಷಪೂರ್ತಿ ದಾಖಲೆ ಮಳೆ ಸುರಿಯುವ ಚಿಕ್ಕಮಗಳೂರಿನಲ್ಲಿ ಈ ವರ್ಷ ಜನವರಿಯಲ್ಲಿ ಮಂಗನ ಕಾಯಿಲೆ ಆತಂಕ ಎದುರಾಗಿದೆ.

ಹಗಲಲ್ಲಿ ರಣ ಬಿಸಿಲು, ಸಂಜೆಯಾಗುತ್ತಿದ್ದಂತೆ ಭಾರೀ ಚಳಿ ಈ ರೀತಿಯಾದ ಹವಾಮಾನ ವೈಪರಿತ್ಯಕ್ಕೆ ಜನ ಹೈರಾಣಾಗಿದ್ದಾರೆ. ಈ ಮಧ್ಯೆ ಮಂಗನ ಕಾಯಿಲೆ ಕೂಡ ಜನರಲ್ಲಿ ಭೀತಿ ಹುಟ್ಟಿಸಿದೆ. ಮಲೆನಾಡಿಗರು ಮಂಗನಕಾಯಿಲೆಯಿಂದ ಕಂಗಾಲಾಗಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ಮತ್ತಿಖಂಡ‌ ಗ್ರಾಮದಲ್ಲಿ ತೀವ್ರ ಸ್ವರೂಪ ಪಡೆದಿರುವ ಮಂಗನ ಕಾಯಿಲೆ
25 ವರ್ಷದ ಯುವಕನಲ್ಲಿ ಕಾಣಿಸಿಕೊಂಡಿದೆ.‌

ತೀವ್ರ ಜ್ವರದಿಂದ‌ ಬಳಲುತ್ತಿದ್ದ ಯುವಕನ ರಕ್ತ ಪರೀಕ್ಷೆಯಲ್ಲಿ‌ ಮಂಗನ ಕಾಯಿಲೆ ಬಂದಿರುವುದು ದೃಢವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಯುವಕನನ್ನ ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಳೆದ‌ ವರ್ಷ ಚಿಕ್ಕಮಗಳೂರು ಜಿಲ್ಲೆಯಲ್ಲಿ 132 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡು ನಾಲ್ವರನ್ನು ಬಲಿ ಪಡೆದಿತ್ತು.

ಕಾಡಂಚಿನ ತಾಲೂಕುಗಳಾದ ಚಿಕ್ಕಮಗಳೂರು, ಕೊಪ್ಪ, ಎನ್​ಆರ್​ಪುರ, ಶೃಂಗೇರಿ ತಾಲೂಕುಗಳಲ್ಲಿ ಮಂಗನ ಕಾಯಿಲೆ ತನ್ನ ರುದ್ರರೂಪ ತಾಳುವ ಮುನ್ನ ಆರೋಗ್ಯ ಇಲಾಖೆ ಮಂಗನ ಕಾಯಿಲೆ ಅಲರ್ಟ್ ಘೋಷಣೆ ಮಾಡಿ‌ ಮಂಗನ ಕಾಯಿಲೆ ‌ಪತ್ತೆಯಾಗಿರುವ ಮತ್ತಿಖಂಡ‌ ಗ್ರಾಮದಲ್ಲಿ ಉಣ್ಣೆಗಳನ್ನ ಸಂಗ್ರಹ ಮಾಡಲಾಗಿದೆ. ಅರಣ್ಯದಲ್ಲಿ ಮಂಗಗಳು ಸಾವನ್ನಪ್ಪಿರುವ ಕುರಿತು ಮಾಹಿತಿ ಸಂಗ್ರಹ ಮಾಡಲಾಗಿದೆ.

ಜಿಲ್ಲೆಯಾದ್ಯಂತ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದ್ದು, ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿ ಸುತ್ತಮುತ್ತಲಿನ ಗ್ರಾಮದಲ್ಲಿ DMPA ತೈಲ ಸೇರಿದಂತೆ ಮನೆಗಳಿಗೆ ತೆರಳಿ ಜಾಗೃತಿ ಮೂಡಿಸಿದ್ದು ಅರಣ್ಯಗಳಿಗೆ ತೆರಳದಂತೆ ಎಚ್ಚರಿಕೆ ನೀಡಿದೆ.

ಮಲೆನಾಡಿನ ತಾಲೂಕುಗಳಲ್ಲಿ ಮಂಗನ ಕಾಯಿಲೆ ಎಂಬ ಮಹಾಮಾರಿ ಸದ್ದಿಲ್ಲದೆ ಅಟ್ಯಾಕ್ ಮಾಡುತ್ತಿದ್ದು ಕೂಡಲೇ ಎಚ್ಚೆತ್ತುಕೊಳ್ಳದಿದ್ದರೆ ಮತ್ತಷ್ಟು ಅನಾಹುತವಾಗುವುದರಲ್ಲಿ ಎರಡು ಮಾತಿಲ್ಲ. ಹೀಗಾಗಿ, ಜಿಲ್ಲಾ ಆರೋಗ್ಯ ಇಲಾಖೆ ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಿದೆ. ಆದರೆ, ಆರೋಗ್ಯ ಇಲಾಖೆ ನೀಡಿರುವ ಮಾರ್ಗದರ್ಶನವನ್ನು ಗ್ರಾಮಸ್ಥರು ಹೇಗೆ ಪಾಲಿಸುತ್ತಾರೆ ಅನ್ನೋದೆ ಯಕ್ಷ ಪ್ರಶ್ನೆಯಾಗಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ