Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಚಿತ್ರದುರ್ಗ ವೈದ್ಯಕೀಯ ಕಾಲೇಜ್ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕಿನ ಗುಡ್ಡದರಂಗವ್ವನಹಳ್ಳಿಯ ಜ್ಞಾನಗಂಗೋತ್ರಿ ಕ್ಯಾಂಪಸ್‍ನಲ್ಲಿ ಚಿತ್ರದುರ್ಗ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಸಮುದಾಯ ವೈದ್ಯಕೀಯ ವಿಭಾಗದ ವತಿಯಿಂದ ಪ್ರಥಮ ಹಾಗೂ ದ್ವಿತೀಯ ಹಂತದ ಎಂಬಿಬಿಎಸ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಎರಡು ದಿನಗಳ ಸಮಗ್ರ ಆರೋಗ್ಯ ತಪಾಸಣಾ ಶಿಬಿರವು ಯಶಸ್ವಿಯಾಗಿ ಜರುಗಿತು.


      ಚಿತ್ರದುರ್ಗ ವೈದ್ಯಕೀಯ ಕಾಲೇಜು ಡೀನ್ ಹಾಗೂ ನಿರ್ದೇಶಕ ಡಾ. ಬಿ.ವೈ.ಯುವರಾಜ್ ಶಿಬಿರಕ್ಕೆ ಚಾಲನೆ ನೀಡಿ, “ವಿದ್ಯಾರ್ಥಿಗಳ ಆರೋಗ್ಯದ ಕಾಳಜಿ ಸಂಸ್ಥೆಯ ಪ್ರಮುಖ ಜವಾಬ್ದಾರಿಯಾಗಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗದ ಮಾರ್ಗಸೂಚಿಗಳಂತೆ ಈ ಶಿಬಿರ ನಡೆಸಲಾಗುತ್ತಿದ್ದು, ಇದು ಭವಿಷ್ಯದ ವೈದ್ಯರ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಪೂರಕವಾಗಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ. ರೇಣುಪ್ರಸಾದ್ ಮಾತನಾಡಿ, ಯುವಜನರಲ್ಲಿ ಜೀವನಶೈಲಿ ಸಂಬಂಧಿತ ರೋಗಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಇಂತಹ ಶಿಬಿರಗಳು ಸಹಕಾರಿ. ವಿದ್ಯಾರ್ಥಿಗಳು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಕಿವಿಮಾತು ಹೇಳಿದರು.

ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಮಾತನಾಡಿ, ಶೈಕ್ಷಣಿಕ ಒತ್ತಡದ ನಡುವೆ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮತೋಲನ ಕಾಯ್ದುಕೊಳ್ಳುವುದು ಅತ್ಯಗತ್ಯ ಎಂದರು.

ಶಿಬಿರದಲ್ಲಿ ಸುಮಾರು 300 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮೂರು ಹಂತಗಳಲ್ಲಿ ತಪಾಸಣೆ ನಡೆಸಲಾಗಿದ್ದು, ರಕ್ತ ಪರೀಕ್ಷೆ, ಸಕ್ಕರೆ ಮಟ್ಟ, ಎಚ್‍ಬಿಎ1ಸಿ, ಯಕೃತ್ ಮತ್ತು ಮೂತ್ರಪಿಂಡ ಕಾರ್ಯ ಪರೀಕ್ಷೆ ಸೇರಿದಂತೆ ಸಮಗ್ರ ತಪಾಸಣೆ ಮಾಡಲಾಯಿತು. ಜನರಲ್ ಮೆಡಿಸಿನ್, ನೇತ್ರಶಾಸ್ತ್ರ ಇಎನ್‍ಟಿ, ಚರ್ಮರೋಗ ಹಾಗೂ ಸ್ತ್ರೀರೋಗ ವಿಭಾಗದ ತಜ್ಞರು ವಿದ್ಯಾರ್ಥಿಗಳಿಗೆ ವೈದ್ಯಕೀಯ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥೆ ಡಾ.ಎಲ್.ಎಚ್.ಅಶ್ವಿನಿ ಸೇರಿದಂತೆ ಅಕಾಡೆಮಿಕ್ ರಿಜಿಸ್ಟ್ರಾರ್, ರಿಸರ್ಚ್ ರಿಜಿಸ್ಟ್ರಾರ್, ಹಣಕಾಸು ಸಲಹೆಗಾರರು ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ