ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
'ಜನಸೇವೆಯೇ ಜನಾರ್ದನ ಸೇವೆ' ಎಂಬ ಧ್ಯೇಯದೊಂದಿಗೆ ಸಾರ್ವಜನಿಕರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸುವ ನಿಟ್ಟಿನಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ನಗರದ ಗೃಹ ಕಚೇರಿ 'ಕೃಷ್ಣಾ' ಬಳಿ ಸಾರ್ವಜನಿಕರನ್ನು ಭೇಟಿಯಾಗಿ ಅವರ ಮನವಿಗಳನ್ನು ಸ್ವೀಕರಿಸಿದರು.
ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ನಾಗರಿಕರು ತಮ್ಮ ಸಮಸ್ಯೆಗಳು, ಕುಂದುಕೊರತೆಗಳು ಹಾಗೂ ವಿವಿಧ ಬೇಡಿಕೆಗಳ ಕುರಿತು ಅವರಿಗೆ ನೇರವಾಗಿ ಅಹವಾಲು ಸಲ್ಲಿಸಿದರು. ಸಾರ್ವಜನಿಕರ ಕುಂದುಕೊರತೆಗಳನ್ನು ತಾಳ್ಮೆಯಿಂದ ಆಲಿಸಿದ ಅವರು, ಸೂಕ್ತ ಕ್ರಮಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಅಗತ್ಯ ಸೂಚನೆ ಹಾಗೂ ನಿರ್ದೇಶನ ನೀಡಿದರು.
ಬ ಬಳಿಕ ಮಾತನಾಡಿದ ಅವರು, "ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಅವರಿಗೆ ನ್ಯಾಯ ಒದಗಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಜನಸಾಮಾನ್ಯರ ನೆರವಿಗೆ ಆಡಳಿತ ವ್ಯವಸ್ಥೆ ಸದಾ ಬದ್ಧವಾಗಿದೆ," ಎಂದು ತಿಳಿಸಿದರು.



