Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Technology News

2 ದಿನ ಭಾರೀ ಮಳೆ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು ಯೆಲ್ಲೋ ಅಲರ್ಟ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೋಂಥಾ ಚಂಡಮಾರುತ ಒಡಿಶಾ ಹಾಗೂ ಆಂಧ್ರಪ್ರದೇಶದ ಕರಾವಳಿ ತೀರದ ಮೂಲಕ ಹಾದುಹೋಗಲಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 27 (ಇಂದಿನಿಂದ) ಅ. 29ರ ವರೆಗೂ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಇಂದು, ನಾಳೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈ ಅವಧಿಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 30ರಿಂದ ನವೆಂಬರ್ 2ರ ಅವಧಿಯಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ತಜ್ಞ ಸಿ. ಎಸ್. ಪಾಟೀಲ್ ತಿಳಿಸಿದ್ದಾರೆ.

ಮೋಂಥಾ ಚಂಡಮಾರುತವು ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ, ಚೆನ್ನೈನಿಂದ 520 ಕಿಲೋ ಮೀಟರ್​ ಮತ್ತು ಆಂಧ್ರಪ್ರದೇಶದ ಕಾಕಿನಾಡದಿಂದ 570 ಕಿಲೋ ಮೀಟರ್​ ದೂರದಲ್ಲಿದ್ದು, ವಾಯವ್ಯ ದಿಕ್ಕಿನಲ್ಲಿ ಮತ್ತಷ್ಟು ಚಲಿಸುವ ಮತ್ತು ತೀವ್ರಗೊಳ್ಳುವ ಹೆಚ್ಚಿನ ಸಂಭವನೀಯತೆಯಿದೆ. ನಾಳೆ (ಅಕ್ಟೋಬರ್ 28) ಸಂಜೆ ಅಥವಾ ರಾತ್ರಿ ಕಾಕಿನಾಡ ಕರಾವಳಿಯನ್ನ (ಮಚಲಿಪಟ್ಟಣ ಮತ್ತು ಕಳಿಂಗಪಟ್ಟಣಂ ನಡುವೆ) ದಾಟುವ ಸಾಧ್ಯತೆಯಿದ್ದು, ಈ ಅವಧಿಯಲ್ಲಿ ಗಾಳಿಯ ವೇಗ ಗಂಟೆಗೆ 90 ರಿಂದ 100 ಕಿ.ಮೀ., ಕೆಲವೊಮ್ಮೆ ಗಂಟೆಗೆ 110 ಕಿ.ಮೀ. ತಲುಪುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಯೆಲ್ಲೋ ಅಲರ್ಟ್: ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಅಲರ್ಟ್: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

​​

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು