Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎರಡು ದಿನ ಭಾರೀ ಮಳೆ ಮುನ್ಸೂಚನೆ, ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್'!

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತೀವ್ರ ಬೇಸಿಗೆಯ ಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು
, ಮುಂಗಾರು ಆರಂಭಕ್ಕೆ ಮುನ್ನವೇ ವರುಣನ ಅಬ್ಬರ ಜೋರಾಗಿದೆ. ಇದೀಗ ಭಾರತೀಯ ಹವಾಮಾನ ಇಲಾಖೆ ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಬಿರುಗಾಳಿ ಸಹಿತ ಮಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿದ್ದು, ಹೈ ಅಲರ್ಟ್ ಘೋಷಿಸಿದೆ.

ಈ 9 ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಣೆ
ಮಳೆಯ ಆರ್ಭಟ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ರಾಜಧಾನಿ ಬೆಂಗಳೂರು ಸೇರಿದಂತೆ ಒಟ್ಟು 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಪ್ರಕಟಿಸಿದೆ.

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ.

17 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಮುನ್ಸೂಚನೆ-
ಉಳಿದಂತೆ ರಾಜ್ಯದ ಕರಾವಳಿ
, ಮಲೆನಾಡು ಹಾಗೂ ಉತ್ತರ ಒಳನಾಡಿನ ಒಟ್ಟು 17 ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ದಾವಣಗೆರೆ, ವಿಜಯನಗರ, ಬಳ್ಳಾರಿ, ಚಿತ್ರದುರ್ಗ, ‌ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ.

ಮುಂದಿನ ಎರಡು ದಿನಗಳ ಕಾಲ ಸಿಡಿಲು ಮತ್ತು ಬಿರುಗಾಳಿಯ ತೀವ್ರತೆ ಹೆಚ್ಚಿರಲಿದ್ದು, ಸಾರ್ವಜನಿಕರು ಹಾಗೂ ರೈತರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಮತ್ತು ಜಾಗರೂಕರಾಗಿರುವಂತೆ ಹವಾಮಾನ ಇಲಾಖೆ ಸೂಚಿಸಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!