Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಗಸ್ಟ್-31ರವರೆಗೆ ಭಾರೀ ಮಳೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕ ರಾಜ್ಯದ ಹಲವೆಡೆ ಆಗಸ್ಟ್- 31ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆ.28ರವರೆಗೆ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ. ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಅಬ್ಬರದ ಮಳೆ ಸುರಿಯುವ ಸಾಧ್ಯತೆ ಇದೆ.  ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ  ಸಾಧ್ಯತೆ ಇದ್ದು ಆಗಸ್ಟ್ 28ರಂದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ಘೋಷಿಸಿದೆ.


ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಆ.29ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.


ಆ.30ರಂದು ಕರಾವಳಿ ಜಿಲ್ಲೆಗಳ ಜೊತೆಗೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಆ.31 ಮತ್ತು ಸೆ. 01ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮಳೆ-
ಆಗಸ್ಟ್ 27 ಗಣೇಶ ಹಬ್ಬದಂದೇ ಮಳೆ ಚಿತ್ರದುರ್ಗ, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಿದೆ. ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಆಗಾಗ ಹಗುರ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ