Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏಪ್ರಿಲ್ ಮೊದಲ ವಾರದಲ್ಲಿ ಭಾರೀ ಮಳೆ ಯೆಲ್ಲೋ ಅಲರ್ಟ್ ಘೋಷಣೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೇಸಿಗೆ ಆರಂಭದ ಏಪ್ರಿಲ್‌ ಮೊದಲ ವಾರದಲ್ಲಿ ಭಾರೀ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಪೂರ್ವ ಮುಂಗಾರು ಅವಧಿಗೂ ಮುನ್ನವೇ ಕರ್ನಾಟಕಕ್ಕೆ ಎಂಟ್ರಿ ಕೊಟ್ಟಿದ್ದು ಆರಂಭದಲ್ಲೇ  ಮಳೆ ಬೀಳುತ್ತಿದೆ. ಏಪ್ರಿಲ್‌ ಮೊದಲ ವಾರದಲ್ಲಿ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವ ಇದ್ದು ಯೆಲ್ಲೋ ಅಲರ್ಟ್‌ಘೋಷಣೆ ಮಾಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಶಿವಮೊಗ್ಗ,ತುಮಕೂರು, ಮಂಡ್ಯ, ಕೋಲಾರ,ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​ನಲ್ಲಿ ಸಾಧಾರಣ ಮಳೆಯಾಗಲಿದೆ.

ಏಪ್ರಿಲ್‌-2ರಂದು ಕರಾವಳಿಯ ಜಿಲ್ಲೆಗಳು ಸೇರಿದಂತೆ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಏಪ್ರಿಲ್‌-3ರಂದು ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಅತಿ ವೇಗದ ಗಾಳಿಯೊಂದಿಗೆ ಆಲಿಕಲ್ಲು ಮಳೆಯಾಗಲಿದೆ.

ಏಪ್ರಿಲ್‌-4 ಮತ್ತು ಏಪ್ರಿಲ್‌-5ರಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಹಾಗೂ ಉತ್ತರ ಒಳನಾಡಿನಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ