ಚಂದ್ರವಳ್ಳಿ ನ್ಯೂಸ್, ಡೆಹ್ರಾಡೂನ್:
ಬದರಿನಾಥದಿಂದ ಡೆಹ್ರಾಡೂನ್ಗೆ ತೆರಳುತ್ತಿದ್ದ ‘ಟ್ರಾನ್ಸ್ ಭಾರತ್ ಏವಿಯೇಷನ್’ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಶುಕ್ರವಾರ ಚಮೋಲಿ ಜಿಲ್ಲೆಯ ಜೋಶಿಮಠದ ಹಾಥಿ ಪರ್ವತ ಪ್ರದೇಶದ ಚೈನ್ ಗ್ರಾಮದ ಬಳಿ ಪತನಗೊಂಡಿದೆ.
ಕಾಪ್ಟರ್ನಲ್ಲಿ ಒಬ್ಬ ಪೈಲಟ್ ಹಾಗೂ ಐವರು ಪ್ರಯಾಣಿಕರು ಸೇರಿದಂತೆ ಒಟ್ಟು ಆರು ಜನರಿದ್ದರು. ಪ್ರಯಾಣದ ಮಧ್ಯೆ ನಾಪತ್ತೆಯಾಗಿದ್ದ ಹೆಲಿಕಾಪ್ಟರ್ ಪತ್ತೆಗಾಗಿ ಸಾಗಿಸಿದ ಹುಡುಕಾಟದ ವೇಳೆ ಘಟನೆ ಬೆಳಕಿಗೆ ಬಂದಿದೆ.
ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ: ಘಟನೆ ಸಂಬಂಧ ಟ್ವೀಟ್ (X) ಮಾಡಿರುವ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು, "ಜಿಲ್ಲಾಡಳಿತ, ವಿಪತ್ತು ನಿರ್ವಹಣಾ ಪಡೆ ಹಾಗೂ ಎಸ್ಡಿಆರ್ಎಫ್ ತಂಡಗಳು ಜಂಟಿಯಾಗಿ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಗಂಭೀರವಾಗಿ ಗಾಯಗೊಂಡವರನ್ನು ತಕ್ಷಣವೇ ಏರ್ ಲಿಫ್ಟ್ ಮಾಡಿ ಉನ್ನತ ಆಸ್ಪತ್ರೆಗಳಿಗೆ ರವಾನಿಸಲು ಸೂಚನೆ ನೀಡಲಾಗಿದ್ದು, ಪರಿಸ್ಥಿತಿಯ ಮೇಲೆ ನಿರಂತರ ನಿಗಾ ವಹಿಸಲಾಗಿದೆ" ಎಂದು ತಿಳಿಸಿದ್ದಾರೆ. ಪ್ರಸ್ತುತ ಸ್ಥಳದಲ್ಲಿ ಶೋಧ ಹಾಗೂ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.




