Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಹಾಯವಾಣಿ ಮತ್ತು ಆಪ್ತ ಸಮಾಲೋಚನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎಸ್.ಎಸ್.ಎಲ್.ಸಿ ಪರೀಕ್ಷೆಯು ವಿದ್ಯಾರ್ಥಿ ಜೀವನದ ಒಂದು ನಿರ್ಣಾಯಕ ಹಂತವಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪೆ
Çೀಷಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ಅತಿ ಹೆಚ್ಚು ಅಂಕ ಗಳಿಸುವಂತೆ ಒತ್ತಡ ಹೇರುತ್ತಿರುವುದು ಅವರ ಏಕಾಗ್ರತೆಯ ಮೇಲೆ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಭಯ ನಿವಾರಿಸಿ ಆತ್ಮಸ್ಥೈರ್ಯ ತುಂಬಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಪ್ರತಿ ವರ್ಷದಂತೆ ಈ ವರ್ಷವೂ "ಸಹಾಯವಾಣಿ" ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ವಿದ್ಯಾರ್ಥಿಗಳು ಮತ್ತು ಪೋಷಕರು ತಮ್ಮ ಸಮಸ್ಯೆ ಹಾಗೂ ಸಂದೇಹಗಳಿಗೆ ಪರಿಹಾರ ಪಡೆಯಲು ದೂರವಾಣಿ ಸಂಖ್ಯೆ 080-23310075 080-23310076 ಸಂಪರ್ಕಿಸಬಹುದು.

ಕಾರ್ಯನಿರ್ವಹಣೆಯ ವೇಳಾಪಟ್ಟಿ ಸಹಾಯವಾಣಿಯು ಮಲ್ಲೇಶ್ವರಂನಲ್ಲಿರುವ ಮಂಡಲಿಯ ಕಚೇರಿಯಲ್ಲಿ ಪ್ರತಿದಿನ 2026 ರ ಮಾರ್ಚ್ 05 ರಿಂದ 15 ರವರೆಗೆ ಪ್ರತಿದಿನ ಅಪರಾಹ್ನ 4.00 ರಿಂದ ಸಂಜೆ 8.00 ರವರೆಗೆ ಕಾರ್ಯನಿರ್ವಹಿಸಲಿದೆ. ಭಾನುವಾರ ರಜಾ ದಿನವಾಗಿರುವುದರಿಂದ ಬೆಳಿಗ್ಗೆ 11.00 ರಿಂದ ಸಂಜೆ 5.00 ರವರೆಗೆ ಕಾರ್ಯನಿರ್ವಹಿಸಲಿದೆ.

2026ರ ಮಾರ್ಚ್ 18 ರಿಂದ ಏಪ್ರಿಲ್ 02 ರವರೆಗೆ  ನಿಯಂತ್ರಣ ಕೊಠಡಿಯಲ್ಲಿ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಪರೀಕ್ಷಾ ದಿನಗಳಂದು ಮಾತ್ರ  ಕಾರ್ಯನಿರ್ವಹಿಸಲಿದೆ.

ವಿದ್ಯಾರ್ಥಿಗಳು ಮತ್ತು ಪೋಷಕರು ಮೇಲೆ ತಿಳಿಸಿರುವ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ತಮ್ಮ ಸಮಸ್ಯೆಗಳಿಗೆ, ಸಂದೇಹಗಳಿಗೆ ಪರಿಹಾರ ಪಡೆದುಕೊಳ್ಳಬಹುದು. ಹೆಚ್ಚಿನ ಸಂಖ್ಯೆಯಲ್ಲಿ  ಈ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ನಿರ್ದೇಶಕರಾದ (ಪರೀಕ್ಷೆಗಳು) ಹೆಚ್.ಎನ್.ಗೋಪಾಲಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ