Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗಾಗಿ ಸಹಾಯವಾಣಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಂಡು ಹಿಡಿಯುವ ಹಾಗೂ ಭಯರಹಿತವಾಗಿ ಪರೀಕ್ಷೆ ಬರೆಯಲು ಅತ್ಮಸ್ಥೆರ್ಯ ತುಂಬುವ ಸದುದ್ದೇಶದಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಹಿಂದಿನ ವರ್ಷಗಳಂತೆ ವರ್ಷವೂ 'ಸಹಾಯವಾಣಿ' ಕೌನ್ಸಿಲಿಂಗ್ ಕಾರ್ಯಕ್ರಮವನ್ನು ಮಾರ್ಚ್ 10 ರಿಂದ ಅಪರಾಹ್ನ 02.30 ಗಂಟೆಗೆ ಪ್ರಾರಂಭಿಸಲಾಗುವುದು.

ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಮಕ್ಕಳು ಗಳಿಸಬೇಕೆಂದು ಪೋಷಕರ ಅಭಿಲಾಷೆಯಾಗಿರುತ್ತದೆ. ವಿದ್ಯಾರ್ಥಿಗಳ ಸಾಮರ್ಥ್ಯ, ಬುದ್ದಿಶಕ್ತಿ, ಆಸಕ್ತಿ, ಕ್ರಿಯಾಶೀಲತೆ, ಕಠಿಣ ಪರಿಶ್ರಮ ಇವುಗಳನ್ನು ಗಣನೆಗೆ ತೆಗೆದುಕೊಳ್ಳದೆ ಹೆಚ್ಚು ಅಂಕಗಳನ್ನು ಗಳಿಸಿ ಎಂದು ಅವರ ಮೇಲೆ ಒತ್ತಡವನ್ನು ಪೋಷಕರು/ಶಿಕ್ಷಕರು ಹಾಕುತ್ತಿರುವುದು ಇತ್ತೀಚಿನ ಸಮಸ್ಯೆಯಾಗಿದೆ. ಇದರಿಂದ ವಿದ್ಯಾರ್ಥಿಗಳು ಅಧ್ಯಯನದ ಗಮನಹರಿಸಲಾಗದಿರುವುದು, ಏಕಾಗ್ರತೆಯನ್ನು ಕಳೆದುಕೊಳ್ಳುತ್ತಿರುವುದು ಕಂಡು ಬಂದಿದ್ದು, ಸಮಸ್ಯೆ ನಿವಾರಣೆಯಾಗದೆ ವಿದ್ಯಾರ್ಥಿ ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸಾಧ್ಯವಾಗುವುದಿಲ್ಲ. ಸಮಸ್ಯೆಗಳ ನಿವಾರಣೆ ಮಾಡಿ, ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸ್ಪೂರ್ತಿ ನೀಡಬೇಕಾದ ಅವಶ್ಯಕತೆ ಇದೆ.

ಮಾರ್ಚ್ 10 ರಿಂದ 19 ರವರೆಗೆ ಪ್ರತಿದಿನ ಅಪರಾಹ್ನ 2.30 ರಿಂದ ಸಂಜೆ 6.30 ಗಂಟೆಯವರೆಗೆ ಹಾಗೂ ಮಾರ್ಚ್ 16 ರಂದು ಬೆಳಿಗ್ಗೆ 11.00 ಗಂಟೆಯಿಂದ ಸಂಜೆ 5.00 ಕಾರ್ಯನಿರ್ವಹಿಸಲಾಗುತ್ತದೆ.

ಮಾರ್ಚ್ 21 ರಿಂದ ಏಪ್ರಿಲ್ 04 ರವರೆಗೆ ನಿಯಂತ್ರಣ  ಕೊಠಡಿಯಾಗಿ ಬೆಳಿಗ್ಗೆ 10.00 ರಿಂದ ಮಧ್ಯ್ಯಾಹ್ನ 2.00 ಗಂಟೆಯವರೆಗೆ ಪರೀಕ್ಷಾ ದಿನಗಳಂದು ಮಾತ್ರ ಕಾರ್ಯನಿರ್ವಹಿಸಲಾಗುತ್ತದೆ.
ಸಹಾಯವಾಣಿ ಸಂಖ್ಯೆ  080-23310075, 080-23310076  ದೂರವಾಣಿ ಸಂಖ್ಯೆಗಳನ್ನು ಮೀಸಲಿಡಲಾಗಿದ್ದು, ಪೋಷಕರು, ವಿದ್ಯಾರ್ಥಿಗಳು ಸದರಿ ದೂರವಾಣಿ ಸಂಖ್ಯೆಗೆ ಕರೆಮಾಡಿ ತಮ್ಮ ಸಮಸ್ಯೆಗಳಿಗೆ, ಸಂದೇಹಗಳಿಗೆ ಪರಿಹಾರ ಪಡೆದುಕೊಳ್ಳಬಹುದು. ಹೆಚ್ಚಿನ ರೀತಿಯಲ್ಲಿ ವಿದ್ಯಾರ್ಥಿಗಳು, ಪೋಷಕರು ಸದರಿ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ