Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಕ್ಕುಂಡಿ ಸ್ತಬ್ಧಚಿತ್ರಕ್ಕೆ ಓಟ್ ಮಾಡಲು ಹೇಮಂತ್ ನಿಂಬಾಳ್ಕರ್ ಮನವಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್ಲೈನ್ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ.

ಬಾರಿ ಕರ್ನಾಟಕವು ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರದೊಂದಿಗೆ ಭಾಗವಹಿಸಿತ್ತು. ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಓಟ್ ಮಾಡಿ ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರು ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರವು ಅತ್ಯುತ್ತಮ ಸ್ತಬ್ಧಚಿತ್ರದ ಆಯ್ಕೆಗಾಗಿ ಸಾರ್ವಜನಿಕರು ಆನ್ ಲೈನ್, ಇಮೇಲ್ ಮತ್ತು ಎಸ್ಎಂಎಸ್ ಮೂಲಕ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಜನವರಿ 28 ಮಧ್ಯರಾತ್ರಿ 12 ವರೆಗೆ ಓಟ್ ಮಾಡಲು ಅವಕಾಶವಿದೆ. ಸಾರ್ವಜನಿಕರು ನಿಗದಿತ ಅವಧಿಯೊಳಗೆ ಓಟ್ ಮಾಡಿ ರಾಜ್ಯದ ಸ್ತಬ್ಧಚಿತ್ರವನ್ನು ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಓಟ್ ಮಾಡುವ ವಿಧಾನದ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಿರುಚಿತ್ರವನ್ನು ಸಹ ಬಿಡುಗಡೆಗೊಳಿಸಿದೆ. ಇದನ್ನು ಅನುಸರಿಸಿ, Lakkundi Cradle of stone Craft ವಿಷಯದ ಸ್ತಬ್ಧಚಿತ್ರಕ್ಕೆ ಹೆಚ್ಚು ಹೆಚ್ಚು ಓಟ್ ಮಾಡುವ ಮೂಲಕ ಬೆಂಬಲ ಹಾಗೂ ಮೆಚ್ಚುಗೆ ಸೂಚಿಸಬೇಕೆಂದೂ ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

https://www.mygov.in/group-poll/vote-your-favourite-tableau-and-marching-contingent-republic-day-parade-2025/  ಕೊಂಡಿಯನ್ನು ಕ್ಲಿಕ್ ಮಾಡಿ, Login to participate  ಮೇಲೆ ಕ್ಲಿಕ್ ಮಾಡಿ, ತಮ್ಮ ನೋಂದಾಯಿತ ಮೊಬೈಲ್ ನಂಬರ್ ಅಥವಾ ಇಮೇಲ್ ವಿವರ ನಮೂದಿಸಿ, ತಾವು ಸ್ವೀಕರಿಸುವ ಒಟಿಪಿ ನಮೂದಿಸಿ, ನಂತರ Resend. OTP/ Submitted  ಇದರಲ್ಲಿ  submitt   ಕ್ಲಿಕ್ ಮಾಡಿ, ಎಲ್ಲಾ ಸ್ತಬ್ಧಚಿತ್ರಗಳ ಮಾಹಿತಿ ಕಾಣುತ್ತದೆ. Lakkundi : cradle of stone craft ಕ್ಲಿಕ್ ಮಾಡಿ ತಮ್ಮ ಮತವನ್ನು ದಾಖಲಿಸಬಹುದು.

ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ MYGOVPOLL 357037,12 ಟೈಫ್ ಮಾಡಿ 7738299899 ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಓಟ್ ಮಾಡಬಹುದಾಗಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ