Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜುಲೈ-4-5 ರಂದು ಹೇಮಾವತಿ ಲಿಂಕ್ ಕೆನಾಲ್ ಸಭೆ-ಡಿಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೇಮಾವತಿ ಲಿಂಕ್ ಕೆನಾಲ್ ಸಭೆಯನ್ನು ಜೂನ್-30ರ ಬದಲು ಜುಲೈ 4-5ಕ್ಕೆ ಮುಂದೂಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಸೋಮಣ್ಣ ಅವರ ಮನವಿ ಮೇರೆಗೆ ಇದೇ ತಿಂಗಳು 30ರಂದು ಸಭೆ ನಡೆಯಬೇಕಿತ್ತು. ಸೋಮಣ್ಣ ಅವರಿಗೆ ಅನುಕೂಲವಾಗುವಂತೆ ಸಭೆ ಮುಂದೂಡಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಡಿಸಿಎಂ ತಿಳಿಸಿದರು.

ಎತ್ತಿನಹೊಳೆ ಯೋಜನೆ ಕಾಮಗಾರಿಯ ಗುತ್ತಿಗೆದಾರರ ಸಭೆಯನ್ನು ತುಮಕೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು. ಪರಮೇಶ್ವರ್ ಅವರ ಅನುಪಸ್ಥಿತಿ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಸಭೆಯನ್ನು ಸ್ಥಳಾಂತರಿಸಲಾಗಿದ್ದು  ನಾಳೆ ಅಥವಾ ನಾಡಿದ್ದು ನಡೆಯಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ನಿಗದಿತ ಸಮಯದ ಒಳಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ. ಹೀಗಾಗಿ ಈ ಯೋಜನೆ ಕಾಮಗಾರಿ ಪರಿಶೀಲನೆ ಮಾಡಲಾಗುತ್ತಿದೆ. ಎತ್ತಿನಹೊಳೆ ಕಾಮಗಾರಿ ಮಾಡಲು ಎಲ್ಲೆಲ್ಲಿ ಸಮಸ್ಯೆ ಇದೆ ಎಂದು ಪರಿಶೀಲನೆ ಮಾಡಲು ತುಮಕೂರಿಗೆ ಭೇಟಿ ನೀಡಿದ್ದೇನೆ ಎಂದು ಉಪಮುಖ್ಯಮಂತ್ರಿಗಳು ತಿಳಿಸಿದರು.


ದೊಡ್ಡಬಳ್ಳಾಪುರ, ಕೊರಟಗೆರೆಗೆ ಈಗಾಗಲೇ ಭೇಟಿ ನೀಡಿದ್ದೇನೆ. ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರಾಗಿದ್ದ ಪರಮೇಶ್ವರ್ ಅವರ ಜೊತೆ ಚರ್ಚೆ ಮಾಡಿದ್ದೇನೆ. ಈ ಭಾಗದಲ್ಲಿ ನೀರನ್ನು ಯಾವ ರೀತಿ ಸಂಗ್ರಹಿಸುವುದು ಎಂಬ ತಾಂತ್ರಿಕ ಸಾಧ್ಯತೆಗಳ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಅವರು ತಿಳಿಸಿದರು. ಸ್ಥಳೀಯ ನಾಯಕರು, ಗ್ರಾಮಸ್ಥರ ಜೊತೆ ಈಗಾಗಲೇ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಸಾರ್ವಜನಿಕರು ತಮ್ಮ ನೋವು ಹೇಳಿಕೊಂಡಿದ್ದಾರೆ. ಒಂದು ಕಡೆ ಅಣೆಕಟ್ಟು ನಿರ್ಮಾಣ ಮಾಡಬೇಕೆ, ಎರಡು ಕಡೆ ಮಾಡಬೇಕೆ ಅಥವಾ ಜನರ ಸಲಹೆಯಂತೆ ಕೆರೆಗಳನ್ನು ಬಳಸಿಕೊಂಡು ನೀರು ಸಂಗ್ರಹಿಸಬಹುದೇ ಎಂಬ ಸಾಧ್ಯತೆಗಳನ್ನು ಅಧ್ಯಯನ ಮಾಡಲಾಗುವುದು ಎಂದು ಸಚಿವ ಡಿ.ಕೆ ಶಿವಕುಮಾರ್ ಹೇಳಿದರು.

ಶಾಸಕರಿಂದ ಮಾಹಿತಿ ಸಂಗ್ರಹ-
ಶಾಸಕ ಬಿ.ಆರ್ ಪಾಟೀಲ್ ಭೇಟಿ ಕುರಿತು ಕೇಳಿದ ಪ್ರಶ್ನೆಗೆ
, ಪಕ್ಷದ ಅಧ್ಯಕ್ಷನಾಗಿ ವಾಸ್ತವಾಂಶ ತಿಳಿಯಬೇಕಾಗಿತ್ತು. ಹೀಗಾಗಿ ಅವರನ್ನು ಕರೆಸಿ ಮಾತನಾಡಿದೆ. ಅವರು ತಮ್ಮ ವಿಚಾರ ಹೇಳಿದ್ದಾರೆ. ನಾನು ಸಿಎಂ ಜೊತೆ ಚರ್ಚೆ ಮಾಡುತ್ತೇನೆ. ಸಚಿವ ಜಮೀರ್ ಅವರೊಂದಿಗೂ ಮಾತನಾಡುತ್ತೇವೆ. ಈ ಮಧ್ಯೆ ನಮ್ಮ ಪಕ್ಷದ ವರಿಷ್ಠರೂ ಕೂಡ ಆಗಮಿಸುತ್ತಿದ್ದು, ಎಲ್ಲರ ಜೊತೆ ಮಾತನಾಡಿ ಮಾಹಿತಿ ಪಡೆಯಲಿದ್ದಾರೆ ಎಂದು ಉಪಮುಖ್ಯಮಂತ್ರಿ ಶಿವಕುಮಾರ್ ತಿಳಿಸಿದರು.

ಸರ್ಕಾರದ ವಿರುದ್ಧ ಹಲವು ಶಾಸಕರು ಧ್ವನಿ ಎತ್ತಿದ್ದು ಮುಖ್ಯಮಂತ್ರಿಗಳು ಆಡಳಿತದಲ್ಲಿ ಹಿಡಿತ ಕಳೆದುಕೊಳ್ಳುತ್ತಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ, ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಏನಾದರೂ ಇದ್ದರೆ ನಮ್ಮ ಪಕ್ಷದ ವರಿಷ್ಠರ ಜೊತೆ ನಾನು ಹಾಗೂ ಮುಖ್ಯಮಂತ್ರಿಗಳು ಮಾತನಾಡುತ್ತೇವೆ. ಆಡಳಿತದಲ್ಲಿ ಯಾವುದೇ ಹಿಡಿತ ಕಳೆದುಕೊಂಡಿಲ್ಲ. ಇದು ಮಾಧ್ಯಮಗಳ ಸೃಷ್ಟಿ ಎಂದು ಶಿವಕುಮಾರ್ ತಿಳಿಸಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರು ಕಾಂಗ್ರೆಸ್ ಶಾಸಕರಿಗೆ ಪತ್ರ ಬರೆದಿರುವ ಬಗ್ಗೆ ಕೇಳಿದಾಗ, ಸುರೇಶ್ ಬಾಬು ಅವರು ಮೊದಲು ತಮ್ಮ ಪಕ್ಷ ಸರಿಪಡಿಸಿಕೊಳ್ಳಲಿ. ತಮ್ಮ ಕಾವಲಿಯಲ್ಲಿರುವ ತೂತು ಮುಚ್ಚಿಕೊಳ್ಳಲಿ. ಜಿ.ಟಿ ದೇವೇಗೌಡ ಸೇರಿದಂತೆ ಬೇರೆ ಶಾಸಕರ ವಿಚಾರ ಸರಿಪಡಿಸಲಿ ಎಂದು ಡಿಸಿಎಂ ತಿರುಗೇಟು ನೀಡಿದರು.


ಬಿಜೆಪಿ ಅವರು ಇಂದಿರಾ ಗಾಂಧಿ ಅವರನ್ನು ಹಿಟ್ಲರ್ ಗೆ ಹೋಲಿಕೆ ಮಾಡಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ಕೇಳಿದಾಗ, ಬಿಜೆಪಿಯಲ್ಲಿ ಸಮಸ್ಯೆ ಇದೆ. ತುರ್ತು ಪರಿಸ್ಥಿತಿ ನಂತರ ದೇಶದ ಜನ ಇಂದಿರಾ ಗಾಂಧಿ ಅವರ ನಾಯಕತ್ವದಲ್ಲೇ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದೆ. 1980ರಲ್ಲೂ ಇಂದಿರಾ ಅವರು ದೇಶವನ್ನು ಮುನ್ನಡೆಸಿದ್ದಾರೆ. ಆ ಸಮಯದಲ್ಲಿ ಜನತಾ ಪರಿವಾರ ಅಥವಾ ಬೇರೆಯವರು ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ. ಇಂದಿರಾ ಅವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಈಗ ಪ್ರಚಾರಕ್ಕಾಗಿ ಬಿಜೆಪಿ ಈ ವಿಚಾರವನ್ನು ಚರ್ಚೆಗೆ ತರುತ್ತಿದ್ದಾರೆ ಎಂದು ಶಿವಕುಮಾರ್ ಕಿಡಿಕಾರಿದರು.

ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿ 50 ವರ್ಷ ಆಗಿದೆ. ಈಗ ಅದು ಮುಗಿದ ಅಧ್ಯಾಯ. ಆಗಿನಿಂದ ಈಗಿನವರೆಗೂ ಕಾಂಗ್ರೆಸ್ ಆಡಳಿತದಲ್ಲಿ ದೇಶ ಬಲಿಷ್ಠವಾಗಿ ನಿಂತಿದೆ. ಬಿಜೆಪಿ ಆಡಳಿತದಲ್ಲಿ ಯಾವ ಪರಿಸ್ಥಿತಿ ಇದೆ ಎಂದು ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನಮ್ಮ ಸಹಮತವಿದೆ. ದೇಶ ಯಾವ ಪರಿಸ್ಥಿತಿಯಲ್ಲಿದೆ ಎಂದು ಬಿಜೆಪಿಯ ಸಂಸದರನ್ನೇ ವೈಯಕ್ತಿಕವಾಗಿ ಕೇಳಿ. ಅವರೇ ಹೇಳುತ್ತಾರೆ ಎಂದು ಡಿಕೆ ಶಿವಕುಮಾರ್ ಅವರು ಮಾರ್ಮಿಕವಾಗಿ ನುಡಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ