Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೀವ ಪಣಕ್ಕಿಟ್ಟು ಹೋರಾಡಿದ ವೀರವನಿತೆ ಒನಕೆ ಓಬವ್ವ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ ಮಾಡಲಾಯಿತು.


ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ವೀರವನಿತೆ ವನಿಕೆ ಓಬವ್ವ ಭಾವಚಿತ್ರಕ್ಕೆ ಪುಷ್ಷ ನಮನ ಅರ್ಪಿಸಿದ ತಾಲ್ಲೂಕು ದಂಡಾಧಿಕಾರಿ   ಶ್ರೀ.ವಿದ್ಯಾ ವಿಭಾ  ರಾಥೋಡ್ ಮಾತನಾಡಿ ಚಿತ್ರದುರ್ಗದ ಕೋಟೆಯಲ್ಲಿ ಸಾಮಾನ್ಯ ಮಹಿಳೆಯಾಗಿದ್ದ ಓಬವ್ವ, ತನ್ನ ನಾಡಿನ ರಕ್ಷಣೆಗೆ ಏಕಾಂಗಿಯಾಗಿ ಹೋರಾಡಿದ ಇತಿಹಾಸ ಸ್ಮರಣೀಯವಾಗಿದೆ. ಒನಕೆ ಓಬವ್ವ ನಾಡಿನ ಮಹಿಳೆಯ ಧೈರ್ಯ, ಸಂಕಲ್ಪ ಶಕ್ತಿ ಹಾಗೂ ದೇಶಪ್ರೇಮದ ಜೀವಂತ ಪ್ರತೀಕ' ಎಂದು  ಸ್ಮರಿಸಿದರು.

ನಂತರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ  ನಿಕಟ ಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ್ ಮಾತನಾಡಿಒನಕೆ ಓಬವ್ವ 18 ನೆಯ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮದ್ದಹನುಮಪ್ಪನ ಹೆಂಡತಿ.ಓನಿಕೆ ಓಬವ್ವ ನಾಡಿನ ರಕ್ಷಣೆಗಾಗಿ

ತನ್ನ ಜೀವ ಪಣಕ್ಕಿಟ್ಟು ಹೋರಾಡಿ ಇವರನ್ನು ಕನ್ನಡ ನಾಡಿನ ವೀರ ವನಿತೆಯರಾದ ಕಿತ್ತೂರು ಚೆನ್ನಮ್ಮ,ರಾಣಿ ಅಬ್ಬಕ್ಕರ ಸಾಲಿನಲ್ಲಿ ಪರಿಗಣಿಸಲಾಗುತ್ತದೆ.

ಒಬ್ಬ ಸಾಮಾನ್ಯ ಮಹಿಳೆ ತನ್ನ ನಾಡಿಗಾಗಿ ಪ್ರಾಣ ತ್ಯಾಗ ಮಾಡಿದ ಇತಿಹಾಸ ಓಬವ್ವ ಅವರದು. ಆದರೆ ಅವರ ಸಾವಿನ ಕುರಿತು ಇತಿಹಾಸದಲ್ಲಿ ಸ್ಪಷ್ಟತೆ ಇಲ್ಲ. ಓಬವ್ವ ಯುದ್ಧದಲ್ಲಿ ಮರಣ ಹೊಂದಿಲ್ಲ ಎನ್ನುವ ಉಲ್ಲೇಖಗಳೂ ಕಂಡು ಬರುತ್ತವೆ. ಇತಿಹಾಸದ ನೈಜತೆಯನ್ನು ಹೊಸ ಪೀಳಿಗೆಗೆ ಪರಿಚಯಿಸುವುದು  ಅಗತ್ಯ' ಎಂದು ಹೇಳಿದರು.

ಈ ಸಂದಭರ್ದಲ್ಲಿ  ಛಲವಾದಿ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಗುರುರಾಜಪ್ಪ, ನಗರಸಭೆ ನಾಮನಿರ್ದೇಶಿತ ಸದಸ್ಯ ಕಾಂತರಾಜು,ಕನ್ನಡ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ನಾಗರಾಜ್ ಕೋಡಿಗೆಹಳ್ಳಿ ಗ್ರಾ.ಪಂ. ಸದಸ್ಯೆ ನಾಗರತ್ನಮ್ಮ, ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ