Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೀಘ್ರದಲ್ಲಿ ಹೈಟೆಕ್ ಮೀನು ಮಾರುಕಟ್ಟೆ ಸ್ಥಾಪನೆ-ಮಂಜುನಾಥ್ ಸುಣಗಾರ್

Advertisement
Advertisement

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ಮೀನುಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು
, ಅವುಗಳನ್ನು ಹಂತಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಮೀನುಗಾರರ ಘಟಕದ ರಾಜ್ಯಾಧ್ಯಕ್ಷ ಮಂಜುನಾಥ್ ಸುಣಗಾ‌ರ್ ತಿಳಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೊಡ್ಡಬಳ್ಳಾಪುರ ನಗರದಲ್ಲಿ ಶೀಘ್ರದಲ್ಲೇ ಹೈಟೆಕ್‌ಮೀನುಗಾರರ ಮಾರುಕಟ್ಟೆ ಆರಂಭಿಸಲು ತೀರ್ಮಾನಿಸಲಾಗಿದ್ದು, ಜೊತೆಗೆ ಮೀನು ಹೋಟೆಲ್ ತೆರೆಯುವ ಯೋಜನೆಯೂ ರೂಪಿಸಲಾಗಿದೆ ಎಂದು ಹೇಳಿದರು.

ಮಳೆ ಕೊರತೆಯಿಂದಾಗಿ ಮೀನುಗಾರರು ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದು, ಈ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತಂದು ಮೀನುಗಾರರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. 

ಕೈಗಾರಿಕೆಗಳಿಂದ ಹೊರಬರುವ ರಾಸಾಯನಿಕಯುಕ್ತ ನೀರು ಕೆರೆಗಳಿಗೆ ಸೇರಿ ನೀರು ಕಲುಷಿತವಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇದರಿಂದ ಮೀನುಗಳು ಸಾವನ್ನಪ್ಪುತ್ತಿರುವ ಘಟನೆಗಳು ವರದಿಯಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳಿಂದ ವರದಿ ಪಡೆದು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

 ಘಾಟಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಆ‌ರ್.ವಿ. ಮಹೇಶ್ ಕುಮಾರ್‌ಮಾತನಾಡಿ ಮೀನುಗಾರರ ಸಮಸ್ಯೆಗಳ ಪರಿಹಾರಕ್ಕಾಗಿ ಮಂಜುನಾಥ್ ಸುಣಗಾ‌ರ್ ಅವರು ನಿರಂತರವಾಗಿ ಶ್ರಮಿಸುತ್ತಿದ್ದು, ಸರ್ಕಾರದ ವಿವಿಧ ಸೌಲಭ್ಯಗಳನ್ನು ಮೀನುಗಾರರಿಗೆ ನೇರವಾಗಿ ತಲುಪಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅವರ ಸೇವೆಯನ್ನು ಪರಿಗಣಿಸಿ ಸರ್ಕಾರ ಅವರನ್ನು ವಿಧಾನ ಪರಿಷತ್‌ಸದಸ್ಯರನ್ನಾಗಿ ನೇಮಕ ಮಾಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ನಗರಸಭಾ ಸದಸ್ಯ ಕಾಂತರಾಜ್ ಸೇರಿದಂತೆ ಮೀನುಗಾರರ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಬಿಳಿ ವಸ್ತ್ರಗಳೊಂದಿಗೆ ಕಂಗೊಳಿಸಿದ ಶಾಲಾ ಮಕ್ಕಳು  ಅಖಿಲೇಶ್ ಯಾದವ್‌ರವರ ಹುಟ್ಟುಹಬ್ಬ ಆಚರಿಸಿದ ಸಮಾಜವಾದಿ ಪಾರ್ಟಿಎಸ್‌ಐಆರ್ ಮತದಾರರ ಪಟ್ಟಿಯ ಶುದ್ಧೀಕರಣವೋ ಅಥವಾ ಪ್ರಜಾಪ್ರಭುತ್ವದ ವಿಶ್ವಾಸ ಪರೀಕ್ಷೆಯೋ:ಪತ್ರಕರ್ತರು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಬೇಕು-ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಆತ್ಮೀಯವಾಗಿ ಬೀಳ್ಕೊಟ್ಟ ರಾಜ್ಯಪಾಲ ಗೆಹ್ಲೋಟ್ ಹಾಗೂ ಡಿ.ಕೆ. ಶಿವಕುಮಾರ್"ಅವರಿಗೆ ದೇಶ ಮೊದಲಲ್ಲ, ದೇಣಿಗೆ ಮೊದಲು": ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಗುಡುಗು!ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ-1 ರಿಂದಲೇ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ!ಬೆಂಗಳೂರಿನಲ್ಲಿ 'ಸುರಕ್ಷಿತ ಪಾದಚಾರಿ ಮಾರ್ಗ' ಬೃಹತ್ ಕಾರ್ಯಾಚರಣೆ ಆರಂಭ!ನಾನು ಮಾಜಿ ಸಿಎಂ; ಸಿದ್ದರಾಮಯ್ಯ ಮಾರ್ಮಿಕ ನುಡಿ!ಬಿಜೆಪಿ ಅಧಿಕಾರಕ್ಕೆ ಬಂದರೆ ಹುಂಡಿ ಹಣ ಕಳ್ಳರಿದ್ದಾರೆ ಎಂದು ಬೋರ್ಡ್ ಹಾಕಬೇಕಾಗುತ್ತದೆ: ಹರಿಪ್ರಸಾದ್ ತೀಕ್ಷ್ಣ ವ್ಯಂಗ್ಯ!