Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ತಡೆ ನೀಡಿದ ಹೈಕೋರ್ಟ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ಕಾರದ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ರಾಜ್ಯದ ಪ್ರಮುಖ ದಿನ ಪತ್ರಿಕೆಗಳ ಮುಖಪುಟದಲ್ಲಿ ಭ್ರಷ್ಟಾಚಾರ ದರ ಪಟ್ಟಿ
ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿದ್ದ ಆರೋಪದಲ್ಲಿ ಕೆಪಿಸಿಸಿ ಮತ್ತು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ.

ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಎಸ್.ಕೇಶವ ಪ್ರಸಾದ್ ಎಂಬವರು ಸಲ್ಲಿಸಿದ್ದ ಖಾಸಗಿ ದೂರಿನನ್ವಯ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಕೆಪಿಸಿಸಿ ಮತ್ತು ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ಏಕ ಸದಸ್ಯಪೀಠವು ಈ ಪ್ರಕರಣಕ್ಕೆ ತಡೆ ನೀಡಿ ಆದೇಶ ಮಾಡಿ ಪ್ರತಿವಾದಿಯಾಗಿರುವ ದೂರುದಾರರಿಗೆ ನೋಟಿಸ್ ಜಾರಿ ಮಾಡಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿ ರಾಹುಲ್ ಗಾಂಧಿ ವಿರುದ್ಧದ ಪ್ರಕರಣಕ್ಕೂ ಹೈಕೋರ್ಟ್ ಜನವರಿ ತಿಂಗಳಲ್ಲಿ ತಡೆ ನೀಡಿತ್ತು.


ಏನಿದು ಪ್ರಕರಣ:
ಕಳೆದ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರವನ್ನು ಪ್ರಧಾನ ಅಸ್ತ್ರವಾಗಿಸಿ ಪ್ರಚಾರ ಮಾಡಿತ್ತು. ಅಲ್ಲದೆ
2023ರ ಮೇ 5ರಂದು ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ಭ್ರಷ್ಟಾಚಾರ ದರ ಪಟ್ಟಿ ಎಂಬ ಹೆಸರಿನ ಅಡಿ ವಿವಿಧ ಹುದ್ದೆಗಳಿಗೆ ಬಿಜೆಪಿ ಲಂಚ ನಿಗದಿಪಡಿಸಿದೆ ಎಂದು ಆರೋಪಿಸಿ ಕಾಂಗ್ರೆಸ್ ಜಾಹೀರಾತು ನೀಡಿತ್ತು.

ಕೊರೊನಾ ಸಾಮಗ್ರಿ ಪೂರೈಕೆ, ಲೋಕೋಪಯೋಗಿ ಗುತ್ತಿಗೆಗಳು, ಮಠಗಳಿಗೆ ಅನುದಾನ, ಶಾಲೆಗಳಿಗೆ ಮೊಟ್ಟೆ ಪೂರೈಕೆ, ರಸ್ತೆ ಕಾಮಗಾರಿಗಳಲ್ಲಿ ಶೇ 25-30 ಕಮಿಷನ್ ಪಡೆಯಲಾಗುತ್ತಿದೆ. ಪತ್ರಿಕೆಗಳಿಗೆ ನೀಡಿದ ಜಾಹೀರಾತಿನ ಕೊನೆಯಲ್ಲಿ ಶೇ.40 ಕಮಿಷನ್​​ನ (ಬಿಜೆಪಿ) ಸರ್ಕಾರವು ರೂ.1.5 ಲಕ್ಷ ಕೋಟಿಯನ್ನು ಕಳೆದ ನಾಲ್ಕು ವರ್ಷಗಳಲ್ಲಿ ಲೂಟಿ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿ ಜಾಹೀರಾತು ನೀಡಿತ್ತು.

ಈ ಸಂಬಂಧ ಅರ್ಜಿದಾರರ ವಿರುದ್ಧ ದೂರು ದಾಖಲಿಸಿದ್ದ ಬಿಜೆಪಿ, ಡಬಲ್ ಇಂಜಿನ್ ಸರ್ಕಾರಕ್ಕೆ ಬದಲಾಗಿ ಟ್ರಬಲ್ ಇಂಜಿನ್ ಸರ್ಕಾರ ಎಂದು ಹೇಳುವ ಮೂಲಕ ಬಿಜೆಪಿಯ ವರ್ಚಸ್ಸಿಗೆ ಕಾಂಗ್ರೆಸ್ ಹಾನಿಯನ್ನುಂಟು ಮಾಡಿದೆ. ಆ ಮೂಲಕ ಚುನಾವಣೆಯಲ್ಲಿ ಗೆಲುವಿಗೆ ಅಡ್ಡಿಪಡಿಸಲಾಗಿದೆ. ಕೊನೆಯಲ್ಲಿ ಕಾಂಗ್ರೆಸ್​​ಗೆ ಮತ ನೀಡಿ ಎಂದು ಆರೋಪಿಗಳು ಕೇಳಿದ್ದಾರೆ. ಸುಳ್ಳು ಜಾಹೀರಾತು ನೀಡಲು ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಹಾಗೂ ರಾಹುಲ್ ಗಾಂಧಿ ನೇರ ಕಾರಣವಾಗಿದ್ದಾರೆ ಎಂದು ದೂರುದಾರರು ಆರೋಪಿಸಿ ಕೋರ್ಟ್ ಗೆ ಹೋಗಿದ್ದರು.

ರಾಹುಲ್ ಗಾಂಧಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಈ ಸುಳ್ಳು ಜಾಹೀರಾತನ್ನು ಹಂಚಿಕೊಳ್ಳುವ ಮೂಲಕ ಬಿಜೆಪಿಗೆ ಮಾನಹಾನಿ ಮಾಡುವ ಪ್ರಯತ್ನ ಮಾಡಲಾಗಿದೆ. ಹೀಗಾಗಿ, ಕಾಂಗ್ರೆಸ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್ 499 ಮತ್ತು 500ರಡಿ ಮಾನಹಾನಿ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ಖಾಸಗಿ ದೂರು ದಾಖಲಿಸಿತ್ತು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ