Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮ ಮರಳು ಗಣಿಗಾರಿಕೆ, ಸರ್ಕಾರದ ಪ್ರತಿಕ್ರಿಯೆಗೆ ಗಡವು ನೀಡಿದ ಹೈಕೋರ್ಟ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಕ್ರಮ ಮರಳು ಗಣಿಗಾರಿಕೆ ಆರೋಪಗಳ ಕುರಿತು ಸ್ವಯಂ ಪ್ರೇರಿತವಾಗಿ ದಾಖಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿ ರಾಜ್ಯ ಸರ್ಕಾರಕ್ಕೆ ಪ್ರತಿಕ್ರಿಯೆ ಸಲ್ಲಿಸಲು ಕರ್ನಾಟಕ ಹೈಕೋರ್ಟ್ ನಾಲ್ಕು ವಾರಗಳ ಗಡವು ನೀಡಿದೆ.
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ ಪೂನಾಚಾ ಅವರ ವಿಭಾಗೀಯ ಪೀಠವು ಈ ಕುರಿತು ಸೂಚಿಸಿ ಮುಂದಿನ ವಿಚಾರಣೆಯನ್ನು ಏಪ್ರಿಲ್-
7ಕ್ಕೆ ಮುಂದೂಡಿದೆ.


ಕಳೆದ ಜನವರಿ 28ರಂದು ಪ್ರಕಟವಾದ ಮಾಧ್ಯಮ ವರದಿಗಳನ್ನು ಪರಿಗಣಿಸಿ ಜನವರಿ 31ರಂದು ಹೈಕೋರ್ಟ್ ವಿಭಾಗೀಯ ಪೀಠವು ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಲು ಆದೇಶಿಸಿತ್ತು. ಇದೊಂದು ಗಂಭೀರ ವಿಷಯವಾಗಿದೆ. ಕೇಂದ್ರ ಸಂಸ್ಥೆ, ವಿಶೇಷವಾಗಿ ರಚಿಸಲಾದ ತನಿಖಾ ಸಂಸ್ಥೆ ಅಥವಾ ವಿಶೇಷ ತನಿಖಾ ತಂಡದ ಮೂಲಕ ನ್ಯಾಯಾಲಯ ಮೇಲ್ವಿಚಾರಣೆಯಲ್ಲಿ ಇದರ ತನಿಖೆಯ ಅಗತ್ಯವಿದೆ ಎಂದು ಪೀಠ ಅಭಿಪ್ರಾಯಪಟ್ಟಿತ್ತು.


ಜನವರಿ 27ರಂದು ವಿಧಾನಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಅಕ್ರಮ ಮರಳು ಗಣಿಗಾರಿಕೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಹೇಳಿದ್ದರು.
ಇದನ್ನು ಉಲ್ಲೇಖಿಸಿದ ವಿಭಾಗೀಯ ಪೀಠ
, ರಾಜ್ಯದ ಗೃಹ ಸಚಿವರೇ ಮರಳು ಮಾಫಿಯಾಗಳ ವಿರುದ್ಧ ಕ್ರಮ ಕೈಗೊಳ್ಳಲು ಅಸಹಾಯಕತೆ ವ್ಯಕ್ತಪಡಿಸಿದರೆ, ರಾಜ್ಯದ ಆಡಳಿತದಿಂದ ಈ ಅಕ್ರಮ ಚಟುವಟಿಕೆ ನಿಯಂತ್ರಿಸುವ ನಿರೀಕ್ಷೆ ಇಡಲು ಸಾಧ್ಯವಿಲ್ಲ ಎಂದು ಜನವರಿ 31ರ ಆದೇಶದಲ್ಲಿ ಹೈಕೋರ್ಟ್ ತಿಳಿಸಿತ್ತು.

ಮರಳು ತೆಗೆಯಲು ಟೆಂಡರ್‌ ಆಹ್ವಾನಿಸಿದ್ದರೂ ಅವುಗಳ ತೆರವು ಆಗಿಲ್ಲ ಎಂಬ ಮಾಧ್ಯಮಗಳ ವರದಿ ಗಮನಿಸಿರುವ ಪೀಠವು, ಈ ದೊಡ್ಡ ಹಣದ ವ್ಯವಹಾರದಲ್ಲಿ ಅನೇಕ ದೊಡ್ಡ ಮೀನುಗಳು ಭಾಗಿಯಾಗಿದ್ದು, ಗಣಿಗಾರಿಕೆ ಕಾನೂನು ಬದ್ಧಗೊಳಿಸಲು ಆಸಕ್ತಿ ತೋರಿಸುತ್ತಿಲ್ಲ ಎಂದು ಹೇಳಿತ್ತು. ಇದಲ್ಲದೆ, ಕೃಷ್ಣಾ ನದಿ ತಟ ಪ್ರದೇಶದಲ್ಲಿ ರಾತ್ರಿ ವೇಳೆ ಮರಳು ಗಣಿಗಾರಿಕೆ ನಡೆಯುತ್ತಿದೆ ಎಂಬ ವರದಿಗಳು, ಧೂಳು ಬೆಳೆಗಳ ಮೇಲೆ ಕುಳಿತು ರೈತರಿಗೆ ಹಾನಿ ಉಂಟಾಗುತ್ತಿದೆ ಎಂಬ ದೂರುಗಳು ಸೇರಿದಂತೆ ಹಲವು ವಿಷಯಗಳನ್ನು ಪೀಠ ಉಲ್ಲೇಖಿಸಿದೆ. ರಾಯಚೂರು ಜಿಲ್ಲೆಯ ಮಹಿಳಾ ಶಾಸಕಿ ಕರೇಮ್ಮ ಜಿ. ನಾಯಕ್ ಅವರು ತಮ್ಮ ಕ್ಷೇತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಕುರಿತು ಪ್ರಶ್ನೆ ಎತ್ತಿದ ಬಳಿಕ ಮರಳು ಮಾಫಿಯಾದಿಂದ ಜೀವ ಬೆದರಿಕೆ ಬಂದಿರುವುದಾಗಿ ಹೇಳಿದ ವರದಿಗಳನ್ನೂ ನ್ಯಾಯಪೀಠ ತನ್ನ ಆದೇಶದಲ್ಲಿ ಪ್ರಸ್ತಾಪಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ