Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾರ್ಡ್​ಗಳ ಹೆಸರು ಬದಲಾವಣೆ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ರೇಟರ್​​​ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ವಾರ್ಡ್​ಗಳ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರ ಅನುಸರಿಸುವ ಮಾನದಂಡಗಳು ಮತ್ತು ಪ್ರಕ್ರಿಯೆಗಳ ಬಗ್ಗೆ ಮಾಹಿತಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ ಆದೇಶಿಸಿದೆ.

ಕೆಂಗೇರಿ ನಿವಾಸಿ ಹೆಚ್​.ಸಿ.ಬಸವರಾಜಪ್ಪ ಸೇರಿ ಹೆಮ್ಮಿಗೇಪುರ ಹಾಗೂ ಸುತ್ತಲಿನ ಪ್ರದೇಶಗಳ 15 ಮಂದಿ ನಿವಾಸಿಗಳು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಜಿಬಿಎ ವ್ಯಾಪ್ತಿಯ ಹೆಮ್ಮಿಗೇಪುರ ವಾರ್ಡ್​​ ಹೆಸರನ್ನು ಕೆಂಗೇರಿ ಕೋಟೆ ವಾರ್ಡ್​​​ ಎಂದು ಬದಲಿಸಿರುವುದನ್ನು ಪ್ರಶ್ನಿಸಿದ್ದರು.

ಈ ಅರ್ಜಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾ.ಸಿ.ಎಂ.ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಜಿಬಿಎ ಅಸ್ತಿತ್ವಕ್ಕೆ ಬಂದು ವಾರ್ಡ್​ಗಳ ಮರುವಿಂಗಡಣೆ ಪ್ರಕ್ರಿಯೆ ನಡೆಯಿತು. ಬಿಬಿಎಂಪಿ ರಚನೆ ಆದಾಗಿಂದಲೂ ಹೆಮ್ಮಿಗೇಪುರ ವಾರ್ಡ್ ಅಸ್ತಿತ್ವದಲ್ಲಿದೆ. ಜಿಬಿಎ ಕಾಯಿದೆ ಬಂದ ಬಳಿಕ 2025ರ ಸೆ.3ರಂದು ಹೊರಡಿಸಲಾದ ಕರಡು ಅಧಿಸೂಚನೆಯಲ್ಲಿ ಹೆಮ್ಮಿಗೇಪುರ ವಾರ್ಡ್​ ಎಂದೇ ಇತ್ತು. ಆಕ್ಷೇಪಣೆ ಆಲಿಸಿದ ಬಳಿಕ ನವೆಂಬರ್​ 19ರಂದು ಅಂತಿಮ ಅಧಿಸೂಚನೆ ಹೊರಡಿಸಿ ಹೆಮ್ಮಿಗೇಪುರ ವಾರ್ಡ್ ಎಂದು ಹೆಸರು ಅಂತಿಮಗೊಳಿಸಲಾಯಿತು.

ಆದರೆ, ಡಿಸೆಂಬರ್-1ರಂದು ತಿದ್ದುಪಡಿ ಅಧಿಸೂಚನೆ ಹೊರಡಿಸಿ ಯಾವುದೇ ಆಕ್ಷೇಪಣೆಗಳನ್ನೂ ಕೇಳದೆ ಹೆಸರನ್ನು ಹೆಮ್ಮಿಗೇಪುರ ವಾರ್ಡ್​ನಿಂದ ಕೆಂಗೇರಿ ಕೋಟೆ ವಾರ್ಡ್ ಎಂದು ಬದಲಿಸಲಾಯಿತು.


ನಿಯಮಗಳಲ್ಲಿ ಇದಕ್ಕೆ ಅವಕಾಶ ಇಲ್ಲ. ರಾಜಕೀಯ ಕಾರಣಗಳಿಗೆ ಸ್ಥಳೀಯ ಶಾಸಕರ ಅಣತಿಯಂತೆ ಹೆಸರು ಬದಲಿಸಲಾಗಿದೆ. ಮುಂದಿನ ಚುನಾವಣೆಯಲ್ಲಿ ನಿರ್ದಿಷ್ಟ ಭಾಗ ಮತ್ತು ಸಮುದಾಯದ ಮತಗಳನ್ನು ಸೆಳೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅರ್ಜಿದಾರ ಪರ ವಕೀಲರು ಆರೋಪಿಸಿದರು.

ಈ ವೇಳೆ ಸರ್ಕಾರದ ಪರ ವಕೀಲರು, ಹೆಸರು ಬದಲಿಸಲು ಜಿಬಿಎ ಕಾಯ್ದೆಯಲ್ಲಿ ಅವಕಾಶವಿದೆ. ಆದಾಗ್ಯೂ ಹೆಚ್ಚಿನ ಮಾಹಿತಿಯನ್ನು ಸರ್ಕಾರದಿಂದ ಪಡೆದು ನ್ಯಾಯಾಲಯಕ್ಕೆ ತಿಳಿಸಲಾಗುವುದು ಎಂದು ಪೀಠಕ್ಕೆ ಮಾಹಿತಿ ನೀಡಿದರು.

ಇದಕ್ಕೆ ಪೀಠ, ವಾರ್ಡ್ ಮರುವಿಂಗಡಣೆ, ಮೀಸಲಾತಿ ನಿಗದಿ ಇವೆಲ್ಲವೂ ಕಾನೂನು ಪ್ರಕ್ರಿಯೆಗಳು ಎಂಬುದೇನು ಸರಿ. ಆದರೆ, ವಾರ್ಡ್​ಗಳ ಹೆಸರು ಬದಲಿಸುವುದು ಏಕೆ? ಹಾಗಾಗಿ, ವಾರ್ಡ್​ಗಳ ಹೆಸರು ಬದಲಾವಣೆಗೆ ಅನುಸರಿಸುವ ಮಾನದಂಡಗಳು ಮತ್ತು ಪ್ರಕ್ರಿಯೆಗಳ ಬಗ್ಗೆ ಮಾಹಿತಿ ನೀಡುವಂತೆ ಸರ್ಕಾರದ ಪರ ವಕೀಲರಿಗೆ ಸೂಚಿಸಿದ ನ್ಯಾಯಾಲಯ ವಿಚಾರಣೆಯನ್ನು ಫೆಬ್ರವರಿ 5ಕ್ಕೆ ಮುಂದೂಡಿ ಆದೇಶಿಸಿತು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ