Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಮೂರ್ತಿ ಶರಣರ ಪೋಕ್ಸೋ ಪ್ರಕರಣದ ದಾಖಲೆ ಒದಗಿಸಲು ಹೈಕೋರ್ಟ್ ಸೂಚನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ದಾಖಲೆಗಳನ್ನು ಒದಗಿಸುವಂತೆ ತನಿಖಾಧಿಕಾರಿಗಳಿಗೆ ಸೋಮವಾರ ಹೈಕೋರ್ಟ್‌ನಿರ್ದೇಶನ ನೀಡಿತು.


ತನ್ನ ವಿರುದ್ಧದ ಪ್ರಕರಣದ ದಾಖಲೆಗಳನ್ನು ಒದಗಿಸಲು ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದ ಚಿತ್ರದುರ್ಗದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಶಿವಮೂರ್ತಿ ಶರಣರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಸಿಆರ್‌ಪಿಸಿ ಸೆಕ್ಷನ್ 91ರ ಅಡಿಯಲ್ಲಿ ತಿಳಿಸಿರುವಂತೆ ದಾಖಲೆಗಳನ್ನು ಪಡೆದುಕೊಳ್ಳುವುದಕ್ಕೆ ಮಾಹಿತಿ ಹಕ್ಕು ಕಾಯಿದೆಯಡಿ ಅರ್ಜಿ ಸಲ್ಲಿಸಲು ಆರೋಪಿಗಳನ್ನು ಪ್ರೇರೇಪಿಸಬಾರದು. ಅದು ಈ ಸೆಕ್ಷನ್‌ನ ಉದ್ದೇಶವಲ್ಲ. ಈ ರೀತಿಯ ಕಾರಣ ನೀಡಿ ಅರ್ಜಿಯನ್ನು ತಿರಸ್ಕರಿಸಿರುವುದು ಕಾನೂನು ಬಾಹಿರ ಎಂದು ನ್ಯಾಯಪೀಠ ತಿಳಿಸಿದೆ.

ಅರ್ಜಿಯ ವಿವರ: 2022ರ ಜುಲೈ 24ರಿಂದ ಜುಲೈ 28ರವರೆಗಿನ ಅವಧಿಯಲ್ಲಿ ಕಾಟನ್‌ಪೇಟೆ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಮತ್ತು ಠಾಣೆಯ ಸಹಾಯಕ ಸಬ್‌ಇನ್‌ಸ್ಪೆಕ್ಟರ್ ಗಸ್ತು ತಿರುಗುವ ಸ್ಟೇಷನ್ ಹೌಸ್ ಡೈರಿ ಮತ್ತು ನೋಟ್​ಬುಕ್‌ನ್ನು ಒದಗಿಸಬೇಕು. ಜೊತೆಗೆ, ಜುಲೈ 2022ಕ್ಕೆ ಸಂಬಂಧಿಸಿದಂತೆ ಬಸ್ ನಿಲ್ದಾಣದಲ್ಲಿ ನಿರ್ವಹಿಸಲಾದ ಪಾಳಿಯ ವಿವರ, ಹೊಯ್ಸಳ ವಾಹನದ ಸಂಖ್ಯೆ, ಲಾಗ್‌ಬುಕ್ ಮತ್ತು ಡಿಜಿಟಲ್ ನೋಂದಣಿ ನಿಯಂತ್ರಣಾ ಕೊಠಡಿಯಿಂದ ಪಡೆದ ಮಾಹಿತಿ ಮೂರು ಫೋನ್ ಪೇ ಸಂಖ್ಯೆಗಳಿಗೆ ಸಂಬಂಧಿಸಿದ ಖಾತೆಯ ವಿವರ ಹಾಗೂ 2022ರ ಆಗಸ್ಟ್ 28ರಂದು ಮೈಸೂರಿನ ಮಕ್ಕಳ ಒಡನಾಡಿ ಸಮಿತಿಗೆ ಕಳುಗಿಸಿರುವ ಇ-ಮೇಲ್ ವಿವರಗಳನ್ನು ಶ್ರೀಗಳು ಕೋರಿದ್ದರು.ಅರ್ಜಿ ಸಂಬಂಧ ವಿಚಾರಣೆ ನಡೆಸಿದ್ದ ಚಿತ್ರದುರ್ಗದ ವಿಚಾರಣಾ ನ್ಯಾಯಾಲಯಕ್ಕೆ ಮಾಹಿತಿ ಹಕ್ಕು ಕಾಯಿದೆಯಡಿ ದಾಖಲೆಗಳನ್ನು ಪಡೆಯಬಹುದು ಎಂದು ಪ್ರಾಸಿಕ್ಯೂಷನ್ ಪರ ವಕೀಲರು ವಿವರಿಸಿದ್ದರು. ಇದನ್ನು ದಾಖಲಿಸಿಕೊಂಡಿದ್ದ ನ್ಯಾಯಾಲಯ ಶ್ರೀಗಳ ಅರ್ಜಿಯನ್ನು ತಿರಸ್ಕರಿಸಿ ಆದೇಶಿಸಿತ್ತು.

ಪ್ರಕರಣವೇನು: ಮುರುಘಾ ಮಠದ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿನೀಯರು ನೀಡಿದ್ದ ದೂರಿನ ಆಧಾರದಲ್ಲಿ ಐಪಿಸಿ ಮತ್ತು ಪೋಕ್ಸೋ ಕಾಯಿದೆಯಡಿ ಅರ್ಜಿದಾರ ಮುರುಘಾ ಶರಣರು ಆರೋಪಿಯಾಗಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ