Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾರಿಗೆ ಬಸ್ ನಿಲ್ದಾಣಗಳಲ್ಲಿ ಆಡಿಯೋ ವ್ಯವಸ್ಥೆ ಕಲ್ಪಿಸುವಂತೆ ಹೈಕೋರ್ಟ್ ಆದೇಶ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಎಲ್ಲ ಪ್ರಮುಖ ಬಸ್ ನಿಲ್ದಾಣಗಳಲ್ಲಿ ದೃಷ್ಟಿ ವಿಕಲಚೇತನರ ಅನುಕೂಲಕ್ಕಾಗಿ ಮುಂದಿನ ಎರಡು ವರ್ಷಗಳಲ್ಲಿ ಬಸ್ ಸಂಚಾರದ ವಿವರಗಳ ಪ್ರಕಟಣೆಗಾಗಿ ಆಡಿಯೋ ವ್ಯವಸ್ಥೆ ಕಲ್ಪಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ಆದೇಶಿಸಿದೆ.


ದೃಷ್ಟಿ ವಿಶೇಷಚೇತನ ವಕೀಲ ಎನ್.ಶ್ರೇಯಸ್ ಮತ್ತು ಶ್ರೇಯಸ್ ಗ್ಲೋಬಲ್ ಟ್ರಸ್ಟ್ ಫಾರ್ ಸೋಷಿಯಲ್ ಕಾಸ್​​ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಕೃತಿಕಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯಪೀಠವು ಮಹತ್ವದ ಈ ಆದೇಶ ನೀಡಿ ಸರ್ಕಾರಕ್ಕೆ ನಿರ್ದೇಶನ ಮಾಡಿದೆ.

ವಿವಿಧ ಬಸ್ ನಿಲ್ದಾಣಗಳಲ್ಲಿ ಬಸ್​ಗಳ ಆಗಮನ ಮತ್ತು ನಿರ್ಗಮನ ಸ್ಥಳಗಳಲ್ಲಿ ದೃಷ್ಟಿ ವಿಶೇಷಚೇತನರೂ ಸೇರಿ ಎಲ್ಲ ಬಗೆಯ ದಿವ್ಯಾಂಗರ ಅನುಕೂಲಕ್ಕಾಗಿ ಬಸ್‌ ನಿಲ್ದಾಣಗಳಲ್ಲಿ ಆಡಿಯೋ ಅನೌನ್ಸ್‌ಮೆಂಟ್ ಸಿಸ್ಟಂ(ಎಎಎಸ್) ಕಾರ್ಯನಿರ್ವಹಿಸುವಂತೆ ಮಾಡಬೇಕು ಎಂದು ಹೈಕೋರ್ಟ್ ಸಾರಿಗೆ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ.

ಬಸ್ ಗಳಲ್ಲಿ ಸುಧಾರಿತ ತಾಂತ್ರಿಕ ಉಪಕರಣಗಳು ಮತ್ತು ಸೌಲಭ್ಯಗಳನ್ನು ಪರಿಚಯಿಸಲು ಸರ್ಕಾರ ಮತ್ತು ಸಾರಿಗೆ ನಿಗಮಗಳಿಗೆ ನಿರ್ದೇಶನ ನೀಡಿರುವ ನ್ಯಾಯಾಲಯ, ಈ ಯೋಜನೆಯು ನಿರಂತರವಾಗಿ ಕಾರ್ಯನಿರ್ವಹಿಸಲು ಸ್ಥಳೀಯ ಅಧಿಕಾರಿಗಳು ಸಾಕಷ್ಟು ಹಣವನ್ನು ಬಜೆಟ್‌ನಲ್ಲಿ ಮೀಸಲಿಡಬೇಕು ಎಂದು ಆದೇಶಿಸಿದೆ.

ರಾಜ್ಯ ಸರ್ಕಾರ ವಿಶೇಷಚೇತನರ ಅನುಕೂಲಕ್ಕಾಗಿ ಮುಂದಿನ ಎರಡು ವರ್ಷಗಳಲ್ಲಿ ಎಎಎಸ್ ಅನ್ನು ಪ್ರತಿ ಜಿಲ್ಲೆ ಮತ್ತು ತಾಲೂಕುಗಳಲ್ಲಿನ ಎಲ್ಲಾ ಪ್ರಮುಖ ಬಸ್ ನಿಲ್ದಾಣಗಳು ಮತ್ತು ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ಸ್ಥಳಗಳಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ.

ದಿವ್ಯಾಂಗ ವ್ಯಕ್ತಿಗಳಿಗೆ ದೈಹಿಕವಾಗಿ ಮಾರ್ಗದರ್ಶನ, ಸಹಾಯ ಮತ್ತು ನೆರವು ನೀಡಲು ಪ್ರಮುಖ ಸ್ಥಳಗಳು/ ಬಸ್ ನಿಲ್ದಾಣಗಳಲ್ಲಿ ಮೇಲ್ವಿಚಾರಣಾ ನೌಕರರ ತಂಡವನ್ನು ನಿಯೋಜಿಸಬೇಕು. ಇದರಿಂದ ವಿಶೇಷಚೇತನರು ಪ್ರಯೋಜನಗಳನ್ನು ಪರಿಣಾಮಕಾರಿಯಾಗಿ ಪಡೆಯಬಹುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಬಸ್ ನಿಲ್ದಾಣಗಳಲ್ಲಿನ ಈ ಹಿಂದೆ ಸ್ಥಗಿತಗೊಂಡಿದ್ದ ಆಡಿಯೋ ಅನೌನ್ಸ್‌ಮೆಂಟ್ ಸೌಲಭ್ಯವನ್ನು ಪುನಃ ಆರಂಭಿಸುವ ಮೂಲಕ ಅಧಿಕಾರಿಗಳು ವಿಶೇಷಚೇತನರ ಹಕ್ಕನ್ನು ಒದಗಿಸುವಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ಇದೇ ವೇಳೆ ನ್ಯಾಯಪೀಠವು ತನ್ನ ಆದೇಶದಲ್ಲಿ ತಿಳಿಸಿದೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ