Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯತ್ನಾಳ್ ವಿರುದ್ಧದ ಎಫ್ಐಆರ್ ರದ್ದು ಮಾಡಿದ ಹೈಕೋರ್ಟ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಅನ್ನು ಹೈಕೋರ್ಟ್ ಗುರುವಾರ ರದ್ದುಗೊಳಿಸಿ ಆದೇಶ ಮಾಡಿತು.


ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಆದೇಶ ಪ್ರಕಟಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ರಾಹುಲ್‌ಗಾಂಧಿ ವಿದೇಶದಲ್ಲಿ ಕೆಲವು ಹೇಳಿಕೆಗಳನ್ನು ನೀಡಿದ್ದರು. ಅದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆಯಾಗಿ ಅರ್ಜಿದಾರರು ಹೇಳಿಕೆ ನೀಡಿದ್ದಾರೆ. ಆದರೆ, ಪ್ರಕರಣ ಸಂಬಂಧ ದಾಖಲಾಗಿದ್ದ ಎಫ್‌ಐಆರ್‌ನಲ್ಲಿರುವ ಯಾವುದೇ ಆರೋಪ ಸಂಬಂಧಿತ ಅಂಶಗಳಿಲ್ಲ. ನಮ್ಮ ಕಕ್ಷಿದಾರರ ಹೇಳಿಕೆಗೆ ಸಂಬಂಧಿಸಿದಂತೆ ಅಸಮಾಧಾನವಾಗಿದ್ದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಬಹುದಾಗಿದೆ. ಅದನ್ನು ಸಮರ್ಥನೆ ಮಾಡಿಕೊಳ್ಳಲಾಗುವುದು ಎಂದು ಪೀಠಕ್ಕೆ ವಿವರಿಸಿದರು.

ದೂರುದಾರ ಪರ ವಾದ ಮಂಡಿಸಿದ ವಕೀಲ ಸಂಕೇತ್ ಏಣಗಿ, ಆರೋಪಕ್ಕೆ ಸಂಬಂಧಿಸಿದಂತೆ ಎಲ್ಲ ಅಂಶಗಳನ್ನು ಎಫ್‌ಐಆರ್‌ನಲ್ಲಿ ವಿವರಿಸಿಲ್ಲ. ಆದರೆ, ಅರ್ಜಿದಾರರ ಹೇಳಿಕೆಗಳು ಮಹಿಳೆಯ ಘನತೆಗೆ ಧಕ್ಕೆ ಮಾಡುವಂಥದ್ದು. ರಾಹುಲ್ ಗಾಂಧಿ ಅವರ ತಾಯಿಯ ನಡತೆ ಕುರಿತಂತೆ ಮಾತನಾಡಿದ್ದಾರೆ. ಈ ಹೇಳಿಕೆಯಿಂದಲೂ ಮಹಿಳೆಯ ಘನತೆಗೆ ಧಕ್ಕೆಯಾಗುತ್ತದೆ ಎಂದು ಪೀಠಕ್ಕೆ ತಿಳಿಸಿದರು.

ಅರ್ಜಿದಾರರು, ಸಾಮಾನ್ಯ ವ್ಯಕ್ತಿಯಲ್ಲ. ಸುಶಿಕ್ಷಿತರು. ಸಂಸದರು, ಶಾಸಕರು ಕೇಂದ್ರ ಸಚಿವರೂ ಆಗಿದ್ದಾರೆ. ಈ ರೀತಿ ಹೇಳಿಕೆಗಳನ್ನು ನೀಡಿದ್ದಾರೆ. ಆದ್ದರಿಂದ ಎಫ್‌ಐಆರ್ ರದ್ದು ಮಾಡಬಾರದು. ತನಿಖೆ ನಡೆಸಿದಲ್ಲಿ ಸತ್ಯಾಂಶಗಳು ಹೊರಬರಲಿದೆ ಎಂದು ಕೋರಿದರು.

ಇದಕ್ಕೆ ಆಕ್ಷೇಪಿಸಿದ ಅರ್ಜಿದಾರರ ಪರ ವಕೀಲರು, ಈ ಹೇಳಿಕೆಯಲ್ಲಿ ಮಹಿಳೆಯ ನಡತೆಯ ಬಗ್ಗೆ ಏನನ್ನಾದರೂ ಹೇಳಿದ್ದಾರೆಯೇ? ಇದರಲ್ಲಿ ಧಾರ್ಮಿಕ ಭಾವನೆಗಳನ್ನು ಪ್ರಶ್ನಿಸುವ ಪ್ರಶ್ನೆ ಎಲ್ಲಿದೆ ಎಂದು ಪ್ರಶ್ನಿಸಿದರು.
ಒಬ್ಬ ರಾಜಕಾರಣಿಯಾಗಿದ್ದು
, ದೇಶದ ಹೊರಭಾಗದಲ್ಲಿ ಭಾರತದ ವಿರುದ್ಧ ಅಸಂಬದ್ಧ ಹೇಳಿಕೆಗೆಳನ್ನು ನೀಡಿದ್ದಾರೆ. ಅವರ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿದ್ದಾರೆ. ಈ ಹೇಳಿಕೆಯಿಂದ ನೋವಾಗಿದ್ದಲ್ಲಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಲಿ ಎಂದು ಪೀಠಕ್ಕೆ ತಿಳಿಸಿದರು. ವಾದ ಆಲಿಸಿದ ಪೀಠ, ಆದೇಶ ಕಾಯ್ದಿರಿಸಿತ್ತು.

ಪ್ರಕರಣದ ಹಿನ್ನೆಲೆ: ವಿದೇಶದಲ್ಲಿ ಭಾರತದ ಕುರಿತಂತೆ ಕೆಲವು ವಿಷಯಗಳನ್ನು ರಾಹುಲ್ ಗಾಂಧಿ ಚರ್ಚೆ ನಡೆಸಿದ್ದರು. ಈ ಕುರಿತು ಯತ್ನಾಳ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದರು. ಈ ಸಂದರ್ಭದಲ್ಲಿ ಕೆಲವು ಅವಹೇಳನಕಾರಿ ಹೇಳಿಕೆಗಳನ್ನು ನೀಡಲಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್ ಕಾರ್ಯಕರ್ತ ಮನೋಹರ್ ಎಂಬವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದನ್ನು ಸ್ಮರಿಸಬಹುದಾಗಿದೆ.

ಯತ್ನಾಳ್ ವಿರುದ್ಧ ಸೆಕ್ಷನ್ 192 (ಗಲಭೆ ನಡೆಸುವುದಕ್ಕಾಗಿ ಉದ್ದೇಶ ಪೂರ್ವಕವಾಗಿ ಪ್ರಚೋದನೆ), 196 (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಆಧಾರದಲ್ಲಿ ವಿವಿಧ ಗುಂಪುಗಳ ನಡುವೆ ದ್ವೇಷವನ್ನುಂಟು ಮಾಡುವುದು) ಹಾಗೂ 353(2) (ಸಾರ್ವಜನಿಕ ಕಿಡಿಗೇಡಿತನಕ್ಕೆ ಅವಕಾಶವಾಗುವಂತಹ ಹೇಳಿಕೆ) ಅಡಿ ಪ್ರಕರಣ ದಾಖಲಾಗಿತ್ತು. ಇದನ್ನು ರದ್ದುಪಡಿಸುವಂತೆ ಕೋರಿ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ