Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಡಾ ಹಗರಣದ ತನಿಖೆಗೆ ಹೈಕೋರ್ಟ್ ಒಪ್ಪಿಗೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಡಾ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಇಡಿ ತನಿಖೆಗೆ ಕರ್ನಾಟಕ ಹೈಕೋರ್ಟ್​ ವಿಭಾಗೀಯ ಪೀಠ ಅನುಮತಿ ನೀಡಿದೆ.

ಮುಡಾದ ಮಾಜಿ ಆಯುಕ್ತ ಡಿ.ಬಿ. ನಟೇಶ್‌ಅವರ ಹೇಳಿಕೆ ಆಧರಿಸಿ ಇತರೆ ಆರೋಪಿಗಳ ವಿರುದ್ಧದ ತನಿಖೆಗೆ ಇಡಿಗೆ ಅನುಮತಿ ನೀಡಿ ಹೈಕೋರ್ಟ್ ವಿಭಾಗೀಯ ಪೀಠವು ಏಪ್ರಿಲ್ 02 ರಂದು ಬುಧವಾರ ಆದೇಶ ಹೊರಡಿಸಿದೆ.  ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರಿಗೂ ಇಡಿ ತನಿಖೆಯ ಸಂಕಷ್ಟ ಶುರುವಾಗುವ ಸಾಧ್ಯತೆ ಹೆಚ್ಚಿದೆ.

ಈ ಹಿಂದೆ ಹೈಕೋರ್ಟ್ ಏಕಸದಸ್ಯ ಪೀಠ, ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ಹೇಳಿಕೆ, ಅವರ ನಿವಾಸದಲ್ಲಿ ಶೋಧನೆ, ದಾಖಲೆ ಜಪ್ತಿ ಆದೇಶ ರದ್ದುಪಡಿಸಿತ್ತು. ಈ ಆದೇಶ ಆಧರಿಸಿ ಸಿಎಂ ಪತ್ನಿ ಪಾರ್ವತಿ ಹಾಗೂ ಭೈರತಿ ಸುರೇಶ್ ಅವರ ವಿರುದ್ಧದ ಇಡಿ ಸಮನ್ಸ್ ಅನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದುಪಡಿಸಿತ್ತು. ಹೀಗಾಗಿ ಈ ಆದೇಶ ಪ್ರಶ್ನಿಸಿ ಇಡಿ ಹೈಕೋರ್ಟ್​ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು.

ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ಯಾವುದೇ ತಡೆ ನೀಡದಿದ್ದರೂ, ಮುಡಾದ ಮಾಜಿ ಆಯುಕ್ತ ಡಿ.ಬಿ.ನಟೇಶ್ ಹೇಳಿಕೆ, ಅವರಿಂದ ಸಿಕ್ಕ ದಾಖಲೆ ಆಧರಿಸಿ ಇತರೆ ಆರೋಪಿಗಳ ವಿರುದ್ಧ ಇಡಿ ತನಿಖೆ ನಡೆಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ಸ್ಪಷ್ಟಪಡಿಸಿದೆ.

ಇನ್ನೊಂದೆಡೆ ಲೋಕಾಯುಕ್ತ ಸಲ್ಲಿಸಿರುವ ವರದಿಯನ್ನು ತಿರಸ್ಕರಿಸುವಂತೆ ಜಾರಿ ನಿರ್ದೇಶನಾಲಯ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದೆ. ಹೀಗಾಗಿ ಕೋರ್ಟ್ ಯಾವ ತೀರ್ಪು ಕೊಡುತ್ತೋ ಎಂದು ಸಿಎಂ ಮತ್ತು ಇತರರಿಗೆ ನಡುಕ ಶುರುವಾಗಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ