LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಸವನಹಳ್ಳಿಯಲ್ಲಿ ಕೆಟ್ಟುನಿಂತ ಹೈಮಾಸ್ಕ್ ದೀಪ: ದುರಸ್ತಿಗೆ ಆಗ್ರಹ, ಮುತ್ತಿಗೆ ಎಚ್ಚರಿಕೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಹಿರಿಯೂರು: 
ತಾಲ್ಲೂಕಿನ ಹೊಸಯಳನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಸವನಹಳ್ಳಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ಮೂರು ಮಿನಿ ಹೈಮಾಸ್ಕ್ ವಿದ್ಯುತ್ ದೀಪಗಳು ಕಳೆದ ಎರಡು ವರ್ಷಗಳಿಂದ ಕೆಟ್ಟುನಿಂತಿದ್ದು
, ಕೂಡಲೇ ಅವುಗಳನ್ನು ದುರಸ್ತಿಗೊಳಿಸಿ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಾಮಚಂದ್ರ ಒತ್ತಾಯಿಸಿದ್ದಾರೆ.

​ಈ ಕುರಿತು ಕಳವಳ ವ್ಯಕ್ತಪಡಿಸಿರುವ ಅವರು, "ಗ್ರಾಮದಲ್ಲಿ ರಾತ್ರಿ ವೇಳೆ ಕತ್ತಲು ಆವರಿಸುತ್ತಿದ್ದು, ಸಾರ್ವಜನಿಕರ ಓಡಾಟಕ್ಕೆ ತೀವ್ರ ತೊಂದರೆಯಾಗಿದೆ. ಪ್ರಸ್ತುತ ಮಳೆಗಾಲದ ಶೀತ ವಾತಾವರಣವಿರುವುದರಿಂದ ರಾತ್ರಿ ವೇಳೆ ಹಾವು, ಚೇಳು ಹಾಗೂ ವಿಷಜಂತುಗಳ ಭಯ ಹೆಚ್ಚಾಗಿದೆ. ಇದರಿಂದಾಗಿ ಚಿಕ್ಕ ಮಕ್ಕಳು ಮತ್ತು ವಯೋವೃದ್ಧರು ಹೊರಬರಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ" ಎಂದು ಅಳಲು ತೋಡಿಕೊಂಡರು.

​"ಒಂದೊಂದು ಮಿನಿ ಹೈಮಾಸ್ಕ್ ದೀಪಕ್ಕೆ ತಲಾ ₹2 ಲಕ್ಷದಂತೆ ಒಟ್ಟು ₹6 ಲಕ್ಷ ವೆಚ್ಚ ಮಾಡಿ ದೀಪಗಳನ್ನು ಅಳವಡಿಸಿದ್ದರೂ ಕಣ್ಣಿದ್ದು ಕುರುಡನಂತಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ತಕ್ಷಣ ಸ್ಪಂದಿಸಿ ಒಂದೆರಡು ದಿನಗಳಲ್ಲಿ ದೀಪಗಳನ್ನು ಸರಿಪಡಿಸಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಗುವುದು," ಎಂದು ರಾಮಚಂದ್ರ ಎಚ್ಚರಿಸಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲೆಯಲ್ಲಿ ಶೇ.90.17 ಗಣತಿ ನಮೂನೆಗಳ ಡಿಜಿಟಲೀಕರಣ ಪೂರ್ಣ-ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ಭದ್ರಾ ಹರಿವಿಗೆ ಆಗಸ್ಟ್ 17 ಗಡುವುರಾಗಿ,ಸಾವೆ ಹಾಗೂ ತೆಂಗು ರೈತರ ನೆರವಿಗೆ ಸೂಚನೆ-ಸಚಿವ ಟಿ.ರಘುಮೂರ್ತಿಪೊಲೀಸ್ ಭದ್ರತೆಯಲ್ಲಿ ರಾಜಕಾಲುವೆ ಒತ್ತುವರಿ ತೆರವುಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯಮಶೀಲತೆ ಅರಿವು ಕಾರ್ಯಕ್ರಮರಾಷ್ಟ್ರಮಟ್ಟದಲ್ಲಿ ಪ್ರಜ್ವಲಿಸಿದ ಗ್ರಾಮೀಣ ಪ್ರತಿಭೆಗಳು, 11 ಪದಕ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಬೀಜೋಪಚರಣ ಹಾಗೂ ರಸ ಗೊಬ್ಬರ ಕಲಬೆರಕೆ ಕುರಿತು ಜಾಗೃತಿ ಶಿಬಿರಜೋಗ ಜಲಪಾತಕ್ಕೆ ಕೆಎಸ್‍ಆರ್‍ಟಿಸಿ ವಿಶೇಷ ಪ್ಯಾಕೇಜ್ ಬಸ್ ಸೇವೆ: ಆ.9 ರಿಂದ ಪ್ರಾರಂಭಆಗಸ್ಟ್ 8ರಿಂದ ಹೊಸ ವಿದ್ಯುತ್ ಪ್ರಸರಣ ಮಾರ್ಗ ಚಾಲನೆ: ಕೆಪಿಟಿಸಿಎಲ್ ಎಚ್ಚರಿಕೆಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೆ ಮಂಗಳವಾರ ಆಯೋಜನೆ ಉಚಿತ ಗ್ಯಾಸ್ಟ್ರೋ ಶಿಬಿರ