Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೆ.13ರಂದು ಹಿಂದೂ ಮಹಾಗಣಪತಿ ವಿಸರ್ಜನೆ, ರಸ್ತೆ ಸಂಚಾರ ಮಾರ್ಗ ಬದಲಾವಣೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಇದೇ ಸೆಪ್ಟೆಂಬರ್ 13ರಂದು ಜರುಗಲಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಅಂದು ನಗರದಲ್ಲಿನ ರಸ್ತೆ ಸಂಚಾರದ ಮಾರ್ಗವನ್ನು ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.

      ಚಿತ್ರದುರ್ಗ ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ಪ್ರತಿಷ್ಠಾಪಿಸಲ್ಪಟ್ಟಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣೆಗೆ ಕಾರ್ಯಕ್ರಮ ಸೆ.13 ರಂದು ನಡೆಯಲಿದ್ದು, ಈ ವಿಸರ್ಜನಾ ಮೆರವಣಿಗೆ ನಗರದಲ್ಲಿ ಹಾದು ಹೋಗಿರುವ ಮುಖ್ಯ ರಸ್ತೆಯಾದ ಬಿ.ಡಿ. ರಸ್ತೆಯಲ್ಲಿ ಸಾಗಿ ಹೊಳಲ್ಕೆರೆ ರಸ್ತೆ ಮುಖಾಂತರ ಹೋಗಲಿದ್ದು, ಈ ವಿಸರ್ಜನಾ ಮೆರವಣೆಗೆಯಲ್ಲಿ ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆಯಿದೆ.

 ಈ ಮೆರವಣಿಗೆ ಸಮಯದಲ್ಲಿ ಚಿತ್ರದುರ್ಗ ನಗರದಲ್ಲಿನ ರಸ್ತೆಗಳಲ್ಲಿ ಸಂಚರಿಸುತ್ತಿರುವ ವಾಹನಗಳು ನಗರದ ಮುಖ್ಯರಸ್ತೆ ಹಾಗೂ ಇತರೆ ರಸ್ತೆಗಳಲ್ಲಿ ಸಂಚರಿಸಲು ಸಾಧ್ಯವಾಗದ ಕಾರಣ ಸೆ.13ರಂದು ಚಿತ್ರದುರ್ಗ ನಗರದಲ್ಲಿ ಸಂಚರಿಸಲಿರುವ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶ ಹೊರಡಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಕೋರಿರುತ್ತಾರೆ.

      ಕರ್ನಾಟಕ ಪೊಲೀಸ್ ಅಧಿನಿಯಮ ಕಲಂ 31ರ ಮೇರೆಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸಾರ್ವಜನಿಕ ಸಂಚಾರ ಕ್ರಮಗೊಳಿಸುವ ದೃಷ್ಠಿಯಿಂದ ನಗರದ ಮುಖ್ಯರಸ್ತೆ ಮತ್ತು ಇತರೆ ರಸ್ತೆಗಳಲ್ಲಿ ಸಂಚರಿಸಲಿರುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.

      ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್‍ನಿಂದ ಮಹಾತ್ಮಾಗಾಂಧಿ ವೃತ್ತ, ಹೊಳಲ್ಕೆರೆ ಮಾರ್ಗದ ಕಣಿವೆ ಕ್ರಾಸ್‍ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರ ನಿಷೇಧಿಸಿದೆ.  ಬೆಂಗಳೂರು, ಚಳ್ಳಕೆರೆ, ಹೊಸಪೇಟೆ, ದಾವಣಗೆರೆ, ಹೊಳಲ್ಕೆರೆ, ಶಿವಮೊಗ್ಗ ಹಾಗೂ ಭೀಮಸಮುದ್ರ ಕಡೆಯಿಂದ ಬರುವ ಎಲ್ಲಾ ಮಾದರಿಯ ಲಘು ಮತ್ತು ಭಾರಿ ವಾಹನಗಳು  ಹಾಗೂ

ಖಾಸಗಿ ಮತ್ತು ಕೆಎಸ್‍ಆರ್‍ಟಿಸಿ ಬಸ್‍ಗಳು ಎನ್.ಹೆಚ್-48 ರಸ್ತೆಯ ಮುಖಾಂತರ ಬಂದು ನಗರದ ಮೆದೇಹಳ್ಳಿ ರಸ್ತೆಯ ಮುಖಾಂತರ ಬಂದು ನಗರದ ಮೆದೇಹಳ್ಳಿ ರಸ್ತೆ ಮತ್ತು ಜೆಎಂಐಟಿ ವೃತ್ತದ ಮುಖಾಂತರ ನಗರಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಾಸ್ ಹೋಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ