Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹಿರಿಯೂರು ಗೌರಿ-ಗಣೇಶ ಹಬ್ಬ ಆಚರಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟ: ಎ.ವಾಸೀಂ

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರದಲ್ಲಿ ಗೌರಿ-ಗಣೇಶ ಹಬ್ಬವನ್ನು ಶಾಂತಿಯುತ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸುವ ನಿಟ್ಟಿನಲ್ಲಿ ನಗರಸಭೆ ವತಿಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಸಾರ್ವಜನಿಕರು ಹಾಗೂ ಗಣೇಶ ಮಂಡಳಿಯವರು ಕಡ್ಡಾಯವಾಗಿ ಪಾಲಿಸಬೇಕಾದ ನಿಯಮಗಳ ವಿವರ ಇಲ್ಲಿದೆ:

ಪಿಒಪಿ ವಿಗ್ರಹಗಳಿಗೆ ನಿಷೇಧ: ಭಾರಲೋಹ ಮಿಶ್ರಿತ ರಾಸಾಯನಿಕಯುಕ್ತ ಬಣ್ಣಗಳಿಂದ ಅಲಂಕೃತಗೊಂಡ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ನಿಂದ ತಯಾರಿಸಿದ ಗೌರಿ-ಗಣೇಶ ವಿಗ್ರಹಗಳ ಪ್ರತಿಷ್ಠಾಪನೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

Advertisement

ವಿಗ್ರಹದ ಎತ್ತರ ಮಿತಿ: ಪ್ರತಿಷ್ಠಾಪಿಸುವ ಗಣೇಶ ವಿಗ್ರಹಗಳು ಗರಿಷ್ಠ 05 ಅಡಿ ಎತ್ತರವಿರಬೇಕು. ರಸ್ತೆಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಧ್ವನಿವರ್ಧಕ ನಿಯಮ: ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ರಾತ್ರಿ 10:00 ಗಂಟೆಯಿಂದ ಬೆಳಿಗ್ಗೆ 06:00 ಗಂಟೆಯವರೆಗೆ ಧ್ವನಿವರ್ಧಕಗಳ ಬಳಕೆಯನ್ನು ನಿರ್ಬಂಧಿಸಲಾಗಿದೆ. ಪೆಂಡಾಲ್ ಬಳಿ ಮತ್ತು ಮೆರವಣಿಗೆಗೆ ಧ್ವನಿವರ್ಧಕ ಬಳಸಲು ಪೊಲೀಸ್ ಇಲಾಖೆಯಿಂದ ಪ್ರತ್ಯೇಕ ಪೂರ್ವಾನುಮೋದನೆ ಪಡೆಯಬೇಕು.

ಫ್ಲೆಕ್ಸ್ ಹಾಗೂ ಬ್ಯಾನರ್ ನಿಯಮ: ಸ್ಥಳೀಯ ಸಂಸ್ಥೆಗಳಿಂದ ಅನುಮತಿ ಪಡೆದು ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್ಗಳನ್ನು ಅಳವಡಿಸಬೇಕು. ಕಾರ್ಯಕ್ರಮ ಮುಗಿದ 24 ಗಂಟೆಯೊಳಗೆ ಆಯೋಜಕರೇ ಇವುಗಳನ್ನು ತೆರವುಗೊಳಿಸಬೇಕು. ತಪ್ಪಿದ್ದಲ್ಲಿ ಡಿಫೇಸ್‌ಮೆಂಟ್ ಕಾಯ್ದೆಯಡಿ ಕ್ರಮ ಜರುಗಿಸಲಾಗುತ್ತದೆ.

ವಿಸರ್ಜನಾ ಸ್ಥಳ: ಹಿರಿಯೂರು ನಗರ ವ್ಯಾಪ್ತಿಯ ತಾಲ್ಲೂಕು ಪಂಚಾಯತ್ ಕಚೇರಿ ಪಕ್ಕದಲ್ಲಿರುವ ಮೀನುಗಾರಿಕೆ ಇಲಾಖೆಯ ತೊಟ್ಟಿಯಲ್ಲಿ ಮಾತ್ರ ಗಣೇಶ ಮೂರ್ತಿಗಳನ್ನು ವಿಸರ್ಜಿಸಬೇಕು. ನೈಸರ್ಗಿಕ ಜಲಮೂಲಗಳಲ್ಲಿ (ಕೆರೆ, ಬಾವಿ, ನದಿ) ವಿಸರ್ಜನೆಗೆ ಅವಕಾಶವಿಲ್ಲ.

ಕಸ ವಿಲೇವಾರಿ ಹಾಗೂ ಶುಚಿತ್ವ: ವಿಸರ್ಜನಾ ಸಂದರ್ಭದಲ್ಲಿ ಮೊಬೈಲ್ ಟ್ಯಾಂಕರ್‌ಗಳು ಅಥವಾ ಕಲ್ಯಾಣಿಗಳ ಬಳಿ ಹಸಿ ಕಸವನ್ನು (ಹೂವು, ಹಣ್ಣು, ಬಾಳೆಕಂಬ ಇತ್ಯಾದಿ) ಪ್ರತ್ಯೇಕಿಸಿ, ಕೇವಲ ಮೂರ್ತಿಗಳನ್ನು ಮಾತ್ರ ನೀರಿನಲ್ಲಿ ವಿಸರ್ಜಿಸಬೇಕು. ಪೆಂಡಾಲ್ ಸುತ್ತಮುತ್ತ ಶುಚಿತ್ವ ಕಾಪಾಡಬೇಕು ಹಾಗೂ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಅವಕಾಶವಿಲ್ಲ.

ಭದ್ರತೆ ಮತ್ತು ಸಿಸಿಟಿವಿ ಕಡ್ಡಾಯ: ಪ್ರತಿಷ್ಠಾಪನಾ ಸ್ಥಳಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಮತ್ತು ಅವು 24*7 ಚಾಲ್ತಿಯಲ್ಲಿರಬೇಕು. ಪೆಂಡಾಲ್‌ನಲ್ಲಿ ಹಗಲು-ರಾತ್ರಿ 24 ಗಂಟೆಯೂ ಆಯೋಜಕರು ಅಥವಾ ಸ್ವಯಂ ಸೇವಕರು ಕಡ್ಡಾಯವಾಗಿ ಇರಬೇಕು.

ಪೊಲೀಸ್ ಇಲಾಖೆ ಮಾರ್ಗಸೂಚಿ: ಪ್ರತಿದಿನದ ಕಾರ್ಯಕ್ರಮಗಳ ವಿವರವಾದ ಪಟ್ಟಿಯನ್ನು ಹತ್ತಿರದ ಪೊಲೀಸ್ ಠಾಣೆಗೆ ಮುಂಗಡವಾಗಿ ನೀಡಬೇಕು. ಮೆರವಣಿಗೆ ಮಾರ್ಗಗಳಲ್ಲಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡಚಣೆಯಾಗದಂತೆ ಆಯೋಜಕರು ಸಾಕಷ್ಟು ಸ್ವಯಂ ಸೇವಕರನ್ನು ನೇಮಿಸಬೇಕು.

ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯಾಗದಂತೆ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲು ಮತ್ತು ಕಾನೂನುಬದ್ಧ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಹಿರಿಯೂರು ನಗರಸಭೆ ಪೌರಾಯುಕ್ತರಾದ ಎ. ವಾಸೀಂ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ