ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರಸಭೆ ವತಿಯಿಂದ 2026-27ನೇ ಸಾಲಿನ ಹಾಗೂ 2023-24 ರಿಂದ 2025-26ರ ವರೆಗಿನ ಶೇ. 24.10, ಶೇ. 7.25 ಹಾಗೂ ಶೇ. 5ರ ಯೋಜನೆಯಡಿ ಮೀಸಲಿರಿಸಿದ ಅನುದಾನದಲ್ಲಿ ಅರ್ಹ ಫಲಾನುಭವಿಗಳಿಂದ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೇ 27 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹಿರಿಯೂರು ನಗರ ವ್ಯಾಪ್ತಿಯಲ್ಲಿ ಬರುವ ಇತರ ಸಮುದಾಯಗಳ ವಿದ್ಯಾರ್ಥಿಗಳಿಗೆ ವಿಶೇಷ ಆರ್ಥಿಕ ನೆರವು ಹಾಗೂ ಎಂ.ಬಿ.ಬಿ.ಎಸ್, ಬಿ.ಇ ವ್ಯಾಸಂಗ ಮಾಡುತ್ತಿರುವ ದಿವ್ಯಾಂಗ (ವಿಕಲಚೇತನ) ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ಖರೀದಿಸಲು ಸಹಾಯಧನ ನೀಡಲಾಗುವುದು. ಇದರೊಂದಿಗೆ ದಿವ್ಯಾಂಗ ಚೇತನರು ನಿವೇಶನ ಖರೀದಿಸಲು ಆರ್ಥಿಕ ಸಹಾಯಧನ ಒದಗಿಸಲಾಗುವುದು ಮತ್ತು ಎಲ್.ಎಲ್.ಬಿ ಪದವಿ ಮುಗಿಸಿ, ವಕೀಲಿ ವೃತ್ತಿಯಲ್ಲಿ ನಿರತರಾಗಿರುವ ದಿವ್ಯಾಂಗ ಚೇತನರಿಗೆ ಕಾನೂನು ಪುಸ್ತಕಗಳನ್ನು ಖರೀದಿಸಲು ಆರ್ಥಿಕ ಸಹಾಯಧನ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅರ್ಹ ಫಲಾನುಭವಿಗಳು ನಿಗದಿತ ಅವಧಿಯೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ ಈ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ನಮೂನೆಗಾಗಿ ಸಾರ್ವಜನಿಕರು ಹಿರಿಯೂರು ನಗರಸಭೆ ಕಾರ್ಯಾಲಯವನ್ನು ಅಥವಾ ವೆಬ್‍ಸೈಟ್ www.hiriyurcity.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯೂರು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.


